Homeಮುಖಪುಟಯುಪಿ | ಜಾತಿ ತಾರತಮ್ಯದ ಕುರಿತು ಟ್ವೀಟ್ ಮಾಡಿದ್ದಕ್ಕೆ ಎಫ್‌ಐಆರ್ : ಪತ್ರಕರ್ತೆಗೆ ಮಧ್ಯಂತರ ರಕ್ಷಣೆ...

ಯುಪಿ | ಜಾತಿ ತಾರತಮ್ಯದ ಕುರಿತು ಟ್ವೀಟ್ ಮಾಡಿದ್ದಕ್ಕೆ ಎಫ್‌ಐಆರ್ : ಪತ್ರಕರ್ತೆಗೆ ಮಧ್ಯಂತರ ರಕ್ಷಣೆ ಒದಗಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರದ ಆಡಳಿತದಲ್ಲಿನ ಜಾತಿ ತಾರತಮ್ಯದ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಅಥವಾ ಟ್ವೀಟ್ ಮಾಡಿದ್ದಕ್ಕೆ ದಾಖಲಾಗಿರುವ ಪ್ರಕರಣಗಳಲ್ಲಿ ಪತ್ರಕರ್ತೆ ಮಮತಾ ತ್ರಿಪಾಠಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು 4 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪತ್ರಕರ್ತೆ ಮಮತಾ ತ್ರಿಪಾಠಿ ಪರವಾಗಿ ಆದೇಶ ನೀಡಿದೆ. ಅಲ್ಲದೆ, ಈ ಪ್ರಕರಣ ಸಂಬಂಧ ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಂತೆ ತ್ರಿಪಾಠಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಆದೇಶಿಸಿರುವ ನ್ಯಾಯಮೂರ್ತಿ ಗವಾಯಿ ಅವರು, ಈ ನಡುವೆ ಮಮತಾ ತ್ರಿಪಾಠಿ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.

ಇದೇ ಪ್ರಕರಣದಲ್ಲಿ ಮತ್ತೊಬ್ಬ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರಿಗೆ ಅಕ್ಟೋಬರ್ 4ರಂದು ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ಒದಗಿಸಿದೆ. ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿನ ಜಾತಿ ತಾರತಮ್ಯದ ಕುರಿತು ಟ್ವೀಟ್ ಮಾಡಿದ್ದಕ್ಕೆ ಇವರ ಮೇಲೆಯೂ ಎಫ್‌ಐಆರ್ ದಾಖಲಾಗಿತ್ತು. ಅದನ್ನು ರದ್ದುಗೊಳಿಸುವಂತೆ ಕೋರಿ ಅಭಿಷೇಕ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅಭಿಷೇಕ್ ವಿರುದ್ದವೂ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದ್ದ ನ್ಯಾಯಾಲಯ, “ಪತ್ರಕರ್ತರ ಬರಹಗಳನ್ನು ಸರ್ಕಾರದ ವಿರುದ್ದದ ಟೀಕೆ ಎಂದು ಗ್ರಹಿಸಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ಸಾಧ್ಯವಿಲ್ಲ” ಎಂದಿತ್ತು.

“ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಒಬ್ಬರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಗೌರವಿಸಲಾಗುತ್ತದೆ. ಭಾರತದ ಸಂವಿಧಾನದ 19 (1) (ಎ) ವಿಧಿಯ ಅಡಿಯಲ್ಲಿ ಪತ್ರಕರ್ತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಪತ್ರಕರ್ತರ ಬರಹಗಳನ್ನು ಸರ್ಕಾರದ ವಿರುದ್ದದ ಟೀಕೆ ಎಂದು ಗ್ರಹಿಸಿ ಅವರ ವಿರುದ್ದ ಪ್ರಕರಣಗಳನ್ನು ದಾಖಲಿಸಬಾರದು” ಎಂದು ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಹೇಳಿತ್ತು.

ಅಭಿಷೇಕ್ ಉಪಾಧ್ಯಾಯ ಅವರು “ಯಾದವ್ ರಾಜ್ VS ಠಾಕೂರ್ ರಾಜ್ (ಅಥವಾ ಸಿಂಗ್ ರಾಜ್)” ಎಂಬ ಶೀರ್ಷಿಕೆಯೊಂದಿಗೆ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ನಲ್ಲಿ ಉತ್ತರ ಪ್ರದೇಶದ ಆಡಳಿತ ಯಂತ್ರದಲ್ಲಿನ ಜಾತಿ ಪ್ರಾಬಲ್ಯ ಅಥವಾ ತಾರತಮ್ಯದ ಬಗ್ಗೆ ವಿವರಿಸಿದ್ದರು. ಮಮತಾ ತ್ರಿಪಾಠಿ ಕೂಡ ಎಕ್ಸ್‌ನಲ್ಲಿ ಇದೇ ರೀತಿಯ ಪೋಸ್ಟ್ ಹಾಕಿದ್ದರು.

ಇದನ್ನೂ ಓದಿ : ಉಚಿತ ಕಾನೂನು ನೆರವು ಪ್ರತಿಯೊಬ್ಬರ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...