Homeದಲಿತ್ ಫೈಲ್ಸ್ಪ್ರತಿಭಟನೆ ಕಾರಣಕ್ಕೆ ಅಮಾನತುಗೊಂಡಿದ್ದ ದಲಿತ ವಿದ್ಯಾರ್ಥಿಗೆ ಸುಪ್ರೀಂ ಕೋರ್ಟ್ ಪರಿಹಾರ; ಪಿಎಚ್‌ಡಿ ಮುಂದುವರಿಸಲು ಅವಕಾಶ

ಪ್ರತಿಭಟನೆ ಕಾರಣಕ್ಕೆ ಅಮಾನತುಗೊಂಡಿದ್ದ ದಲಿತ ವಿದ್ಯಾರ್ಥಿಗೆ ಸುಪ್ರೀಂ ಕೋರ್ಟ್ ಪರಿಹಾರ; ಪಿಎಚ್‌ಡಿ ಮುಂದುವರಿಸಲು ಅವಕಾಶ

- Advertisement -
- Advertisement -

ದುಷ್ಕೃತ್ಯ ಹಾಗೂ ದೇಶವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಈ ಹಿಂದೆ ಅಮಾನತುಗೊಂಡಿದ್ದ ದಲಿತ ಪಿಎಚ್‌ಡಿ ಸಂಶೋಧಕ ಮತ್ತು ಎಡಪಂಥೀಯ ವಿದ್ಯಾರ್ಥಿ ನಾಯಕ ರಾಮದಾಸ್ ಕೆ.ಎಸ್ ಅವರಿಗೆ ಸುಪ್ರೀಂ ಕೋರ್ಟ್ ಪರಿಹಾರ ನೀಡಿದ್ದು, ಪಿಎಚ್‌ಡಿ ಮುಂದುವರಿಸಲು ವಿದ್ಯಾರ್ಥಿಗೆ ಅವಕಾಶ ನೀಡುವಂತೆ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠವು ಅಮಾನತು ಅಮಾನ್ಯಗೊಳಿಸಲಿಲ್ಲ. ಆದರೂ, ಈಗಾಗಲೇ ನಿನ್ನೆಯವರೆಗೆ ಅಅನುಭವಿಸಿದ ಮಾನತು ಇಂದಿಗೆ ಇಳಿಸಬೇಕೆಂದು ನಿರ್ದೇಶಿಸಿತು. ರಾಮದಾಸ್ ಅವರ ಪಿಎಚ್‌ಡಿ ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂಬ ಅಭಿಪ್ರಾಯವನ್ನು ಪೀಠ ವ್ಯಕ್ತಪಡಿಸಿತು.

ಏಪ್ರಿಲ್ 2024 ರಲ್ಲಿ ಟಿಐಎಸ್‌ಎಸ್ ರಾಮದಾಸ್ ಅವರನ್ನು ಸಂಸ್ಥೆಯಿಂದ ಎರಡು ವರ್ಷಗಳ ಕಾಲ ಅಮಾನತುಗೊಳಿಸಿತು. ಟಿಸ್‌ನ ಎಲ್ಲ ಕ್ಯಾಂಪಸ್‌ಗಳಲ್ಲಿ ಅವರ ಪ್ರವೇಶವನ್ನು ನಿಷೇಧಿಸಿತು. ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧದ ಪ್ರತಿಭಟನೆಯಲ್ಲಿ ರಾಮದಾಸ್ ಭಾಗವಹಿಸಿದ ನಂತರ, ಜನವರಿ 2024 ರಲ್ಲಿ ಟಿಐಎಸ್‌ಎಸ್- ಪಿಎಸ್‌ಎಫ್ (ಪ್ರಗತಿಶೀಲ ವಿದ್ಯಾರ್ಥಿಗಳ ವೇದಿಕೆ) ಬ್ಯಾನರ್ ಅಡಿಯಲ್ಲಿ ‘ಸಂಸತ್ತಿನ ಮೆರವಣಿಗೆ’ ಎಂಬ ಪ್ರದರ್ಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವನ್ನು ವಿರೋಧಿಸಿದ ನಂತರ ಈ ಕ್ರಮ ಕೈಗೊಳ್ಳಲಾಯಿತು.

ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಹೈಕೋರ್ಟ್‌ ರಾಮ್‌ದಾಸ್‌ರವರ ಅಮಾನತು ಎತ್ತಿಹಿಡಿದಿದೆ. ಈ ಪ್ರತಿಭಟನೆ/ಮೆರವಣಿಗೆ ರಾಜಕೀಯ ಪ್ರೇರಿತವಾಗಿದೆ ಎಂದು ಹೈಕೋರ್ಟ್ ಗಮನಿಸಿತು. ಮೆರವಣಿಗೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಸಂಸ್ಥೆಯ ಅಭಿಪ್ರಾಯಗಳನ್ನು ಪ್ರತಿನಿಧಿಸುತ್ತವೆ ಮತ್ತು ಇದು ಸಂಸ್ಥೆಗೆ ಅಪಖ್ಯಾತಿ ತರುತ್ತದೆ ಎಂಬ ಅಭಿಪ್ರಾಯವನ್ನು ರಾಮದಾಸ್ ಸೃಷ್ಟಿಸಿದ್ದಾರೆ ಎಂದು ಟಿಐಎಸ್‌ಎಸ್‌ ಕಂಡುಕೊಂಡಿದ್ದು ಸರಿಯಾಗಿದೆ ಎಂದು ಗಮನಿಸಿತು.

2015 ರಲ್ಲಿ ರಾಮದಾಸ್ ಮೊದಲು ಮಾಧ್ಯಮ ಮತ್ತು ಸಾಂಸ್ಕೃತಿಕ ಅಧ್ಯಯನ ಕೋರ್ಸ್‌ನಲ್ಲಿ ಸ್ನಾತಕೋತ್ತರ ಪದವಿಗಾಗಿ ಟಿಐಎಸ್‌ಎಸ್‌ಗೆ ಸೇರಿಕೊಂಡರು. ಅವರಿಗೆ ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಲಾಯಿತು. 2018 ರಲ್ಲಿ, ಅವರು ಅಭಿವೃದ್ಧಿ ಅಧ್ಯಯನದಲ್ಲಿ ಸಂಯೋಜಿತ ಎಂಪಿಲ್. ಮತ್ತು ಪಿಎಚ್‌ಡಿ ಕೋರ್ಸ್‌ಗೆ ಸೇರಿಕೊಂಡರು. 2023 ರಲ್ಲಿ, ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ಅವರ ಸಾಧನೆಯನ್ನು ಪರಿಗಣಿಸಿ, ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯವು ಅವರಿಗೆ ಪರಿಶಿಷ್ಟ ಜಾತಿಯಲ್ಲಿ ರಾಷ್ಟ್ರೀಯ ಫೆಲೋಶಿಪ್ ನೀಡಿತು.

ಜಾಮೀನು ಪಡೆದ ಆರೋಪಿಗೆ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ: ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...