Homeಮುಖಪುಟವಿವಾದಿತ 'ಹಮಾರೆ ಬಾರಹ್' ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

ವಿವಾದಿತ ‘ಹಮಾರೆ ಬಾರಹ್’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಆರೋಪ ಹೊತ್ತಿರುವ ಹಿಂದಿ ಚಿತ್ರ ‘ಹಮಾರೆ ಬಾರಹ್‌’ ನ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಾಂಬೆ ಹೈಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ಸೂಚಿಸಿದೆ.

ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠ ಈ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ : ಜೂನ್‌ 7ರಂದು ಹಮಾರೆ ಬಾರಹ್ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಚಿತ್ರಕ್ಕೆ ನೀಡಲಾದ ಸೆನ್ಸಾರ್ ಸರ್ಟಿಫಿಕೇಟ್ ಹಿಂಪಡೆಯಬೇಕು ಮತ್ತು ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಅಝರ್ ಬಾಷಾ ತಂಬೋಲಿ ಎಂಬವರು ಬಾಂಬೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಚಿತ್ರವು ಸಿನಿಮಾಟೋಗ್ರಾಫ್ ಕಾಯ್ದೆ-1952ರ ನಿಯಮಗಳು ಮತ್ತು ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಚಿತ್ರದ ಟ್ರೇಲರ್ ಭಾರತೀಯ ಮುಸ್ಲಿಮರ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳಿಸುವಂತಿದೆ. ಈ ಚಿತ್ರದ ಬಿಡುಗಡೆ ಸಂವಿಧಾನದ 19(2) ಮತ್ತು 25 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಚಿತ್ರದ ಟ್ರೇಲರ್ ವಿವಾಹಿತ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸ್ವತಂತ್ರ ಹಕ್ಕುಗಳಿಲ್ಲ ಎಂದು ಚಿತ್ರಿಸಿದೆ. ಕುರಾನ್‌ನ 223ನೇ ಆಯತ್ ಅನ್ನು ತಪ್ಪಾಗಿ ವಿವರಿಸಿದೆ. ಚಿತ್ರದ ಬಿಡುಗಡೆಗೆ ಮುನ್ನ ಮಾರ್ಪಾಡುಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದ್ದರೂ, ಟ್ರೇಲರ್ ಯಾವುದೇ ಡಿಸ್ಕ್ಲೈಮರ್ ಅಥವಾ ಸಿಬಿಎಫ್‌ಸಿ ನೀಡಿದ ಸರ್ಟಿಫಿಕೇಟ್‌ನ್ನು ಉಲ್ಲೇಖಿಸಿಲ್ಲ ಎಂದಿದ್ದರು.

ಈ ಆರೋಪವನ್ನು ಅಲ್ಲಗಳೆದಿದ್ದ ಸಿಬಿಎಫ್‌ಸಿ, “ಎಲ್ಲಾ ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಿದ ನಂತರ ಚಿತ್ರಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಆಕ್ಷೇಪಾರ್ಹ ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಅಳಿಸಲಾಗಿದೆ. ಯೂಟ್ಯೂಬ್ ಮತ್ತು ಬುಕ್‌ಮೈಶೋನಲ್ಲಿ ಬಿಡುಗಡೆಯಾದ ಚಿತ್ರದ ಟ್ರೇಲರ್‌ಗಳು ಪ್ರಮಾಣೀಕೃತ ಟ್ರೇಲರ್‌ಗಳಲ್ಲ ಎಂದು ಹೇಳಿತ್ತು.

ವಾದ-ಪ್ರತಿವಾದ ಆಲಿಸಿದ್ದ ಬಾಂಬೆ ಹೈಕೋರ್ಟ್‌ ಜೂನ್ 14ರವರೆಗೆ ಚಿತ್ರ ಬಿಡುಗಡೆ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಅಲ್ಲದೆ, ಚಿತ್ರ ವೀಕ್ಷಿಸಿ ವರದಿ ನೀಡಲು ಮೂವರು ಸದಸ್ಯರ ಸಮಿತಿ ರಚಿಸಿತ್ತು. ಆದರೆ, ಈ ಸಮಿತಿ ಕಾಲ ಮಿತಿಯೊಳಗೆ ವರದಿ ನೀಡದೆ ಹೆಚ್ಚಿನ ಕಾಲವಕಾಶ ಕೋರಿತ್ತು. ಹಾಗಾಗಿ, ಹೈಕೋರ್ಟ್ ಜೂನ್ 14ರಂದು ಚಿತ್ರ ಬಿಡುಗಡೆಗೆ ಅವಕಾಶ ನೀಡಿತ್ತು. ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಆಕ್ಷೇಪಾರ್ಹ ಅಂಶಗಳನ್ನು ತೆಗದು ಹಾಕುವಂತೆ ಸೂಚಿಸಿತ್ತು.

ಚಿತ್ರ ಬಿಡುಗಡೆಗೆ ಅನುಮತಿ ನೀಡಿರುವ ಮತ್ತು ಸಿಬಿಎಫ್‌ಸಿಯಿಂದ ಸಮಿತಿ ರಚನೆಗೆ ನಿರ್ದೇಶನ ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿದಾರ ಅಝರ್ ಬಾಷಾ ತಂಬೋಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಬಾಂಬೆ ಹೈಕೋರ್ಟ್ ಪ್ರಕರಣ ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ತಡೆ ನೀಡಿದೆ.

ಇದನ್ನೂ ಓದಿ : ಬಾಲಕಿ ಮುಂದೆ ಬೆತ್ತಲಾಗುವುದು ಅತ್ಯಾಚಾರಕ್ಕೆ ಯತ್ನಿಸಿದಂತಲ್ಲ: ರಾಜಸ್ಥಾನ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...