Homeಕರ್ನಾಟಕರಾಜ್ಯಪಾಲರ ವಿಚಾರದಲ್ಲಿ ಕೇಂದ್ರಕ್ಕೆ ಪರೋಕ್ಷ ಎಚ್ಚರಿಕೆ ಕೊಟ್ಟ ಸುಪ್ರೀಂ: ದಿನೇಶ್ ಗುಂಡೂರಾವ್

ರಾಜ್ಯಪಾಲರ ವಿಚಾರದಲ್ಲಿ ಕೇಂದ್ರಕ್ಕೆ ಪರೋಕ್ಷ ಎಚ್ಚರಿಕೆ ಕೊಟ್ಟ ಸುಪ್ರೀಂ: ದಿನೇಶ್ ಗುಂಡೂರಾವ್

- Advertisement -
- Advertisement -

ಬೆಂಕಿಯ ಜೊತೆ ಆಟ ಬೇಡ ಎಂಬ ಸುಪ್ರೀಂ ಅಭಿಪ್ರಾಯ ಕೇವಲ ರಾಜ್ಯಪಾಲರಿಗೆ ಕೊಟ್ಟ ಎಚ್ಚರಿಕೆಯಲ್ಲ. ಬದಲಿಗೆ ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಹಾಳು ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಕೊಟ್ಟಿರುವ ಎಚ್ಚರಿಕೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ”ಪಂಜಾಬ್ ರಾಜ್ಯಪಾಲರ ನಡೆಯ ವಿರುದ್ಧ ಸುಪ್ರೀಂ ಕೋರ್ಟ್ ಅತ್ಯಂತ ಕಟುವಾದ ಭಾಷೆಯಲ್ಲಿ ಎಚ್ಚರಿಕೆ ನೀಡಿದೆ. ಬೆಂಕಿಯ ಜೊತೆ ಆಟ ಬೇಡ ಎಂಬ ಸುಪ್ರೀಂ ಅಭಿಪ್ರಾಯ ಕೇವಲ ರಾಜ್ಯಪಾಲರಿಗೆ ಕೊಟ್ಟ ಎಚ್ಚರಿಕೆಯಲ್ಲ. ಬದಲಿಗೆ ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಹಾಳು ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಕೊಟ್ಟಿರುವ ಎಚ್ಚರಿಕೆಯೂ ಹೌದು” ಎಂದಿದ್ದಾರೆ.

”ರಾಷ್ಟ್ರಪತಿಗಳ ಮೂಲಕ ರಾಜ್ಯಗಳಿಗೆ ನೇಮಕವಾಗುವ ರಾಜ್ಯಪಾಲರು ಸಾಂವಿಧಾನಿಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಬೇಕು. ವಿಪರ್ಯಾಸವೆಂದರೆ‌ ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರಾಗಿ‌ ನಿಯುಕ್ತರಾಗಿರುವ ಕೆಲವು ರಾಜ್ಯಪಾಲರು ಬಿಜೆಪಿಯ ಏಜೆಂಟ್‌ಗಳಾಗಿದ್ದಾರೆ. ಅಧಿವೇಶನದಲ್ಲಿ ಅಂಗೀಕಾರವಾದ ಮಸೂದೆಗಳನ್ನು‌ ಅನಗತ್ಯವಾಗಿ ತಡೆ ಹಿಡಿಯುವುದು, ಬಿಕ್ಕಟ್ಟು ಸೃಷ್ಟಿಸುವುದು ಕೆಲ ರಾಜ್ಯಪಾಲರ ಕಾರ್ಯವಿಧಾನವಾಗಿದೆ. ಇದು ಸಂವಿಧಾನಕ್ಕೆ ಎಸಗುವ ಅಪಚಾರ” ಎಂದು ಕಿಡಿಕಾರಿದ್ದಾರೆ.

”ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ‌ ಗಂಭೀರವಾದ ವಿಚಾರ. ಪಂಜಾಬ್, ಕೇರಳ, ತಮಿಳುನಾಡು ರಾಜ್ಯಪಾಲರು ಕೇಂದ್ರದ ಮರ್ಜಿಗೆ ಬಿದ್ದು ಪಕ್ಷಪಾತವಾಗಿ ನಡೆದುಕೊಳ್ಳದೆ ಸಂವಿಧಾನದ ಘನತೆ ಎತ್ತಿ ಹಿಡಿದಿದ್ದರೆ ಸುಪ್ರೀಂ ಇಷ್ಟು ಕಟುವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರಲಿಲ್ಲ. ಸುಪ್ರೀಂನ‌ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅವರೆಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ವಿಷಯದಲ್ಲಿ ನಮ್ಮ ಕರ್ನಾಟಕದ ರಾಜ್ಯಪಾಲರಾದ ಗೆಹ್ಲೋಟ್ ಅವರು ನಿಶ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರ ಸರಳ ಸಜ್ಜನಿಕೆ ನಡವಳಿಕೆಯಿಂದ ಎಲ್ಲರ ವಿಶ್ವಾಸ ಗಳಿಸುವುದರಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...