Homeಚಳವಳಿಸುಪ್ರೀಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಸುಮಾರು 60 ಅರ್ಜಿಗಳ ವಿಚಾರಣೆ ಇಂದು...

ಸುಪ್ರೀಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಸುಮಾರು 60 ಅರ್ಜಿಗಳ ವಿಚಾರಣೆ ಇಂದು…

- Advertisement -
- Advertisement -

ದೇಶಾದ್ಯಂತ ತೀವ್ರ ಬಿರುಗಾಳಿ ಸೃಷ್ಟಿಸಿರುವ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ಕಾನೂನನ್ನು ಪ್ರಶ್ನಿಸಿ ಸುಮಾರು 60 ಅರ್ಜಿಗಳು ಇಂದು ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆಗೆ ಬರಲಿವೆ.

ಅರ್ಜಿಯನ್ನು ಸಲ್ಲಿಸಿದವರಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, ಟಿಎಂಸಿಯ ಮಹುವಾ ಮೊಹಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಅಸ್ಸಾಂನ ಆಡಳಿತಾರೂಡ BJP ಬಿಜೆಪಿಯ ಮಿತ್ರಪಕ್ಷ ಅಸ್ಸಾಂ ಗಣ ಪರಿಷತ್ ಸೇರಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿಯನ್ನು ಆಲಿಸಲಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯ ಕಾಂತ್ ಅವರು ನ್ಯಾಯಪೀಠದ ಇತರ ನ್ಯಾಯಾಧೀಶಗಳಾಗಿದ್ದಾರೆ.

ಪೌರತ್ವ ನೀಡಲು ಧರ್ಮವು ಆಧಾರವಾಗಿರಲು ಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ. ಹೊಸ ಕಾನೂನು, ಸಂವಿಧಾನದ ಮೂಲಭೂತ ರಚನೆಗೆ ವಿರುದ್ಧವಾಗಿದೆ, ಏಕೆಂದರೆ ಅಕ್ರಮ ವಲಸಿಗರನ್ನು ಧರ್ಮದ ಆಧಾರದ ಮೇಲೆ ನಾಗರಿಕರನ್ನಾಗಿ ಒಪ್ಪಿಕೊಳ್ಳುವುದು ಜೀವನ ಮತ್ತು ಸಮಾನತೆಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಈ ಕಾನೂನು ರಾಷ್ಟ್ರದ ಜಾತ್ಯತೀತತೆಯ ಮೂಲಭೂತ ತತ್ತ್ವದ ಮೇಲೆ ಪರಿಣಾಮ ಬೀರುತ್ತದೆ. ಎಲ್ಲಾ ಧರ್ಮಗಳ ಜನರನ್ನು ಸಮಾನವಾಗಿ ನೋಡುವ ಕರ್ತವ್ಯ ಸರ್ಕಾರಕ್ಕಿದೆ ಎಂದು ಅವರು ವಾದಿಸಿದ್ದಾರೆ.

ಸಾಕಷ್ಟು ಪ್ರತಿಭಟನೆ, ಹಿಂಸಾಚಾರದ ಕಾರಣಕ್ಕಾಗಿ ದೇಶದ ಗಮನಸೆಳೆದಿರುವ ಕಾಯ್ದೆಯ ಕುರಿತು ಸುಪ್ರೀಂ ಏನು ಅಭಿಪ್ರಾಯಪಡುತ್ತದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...