Homeಮುಖಪುಟವಿಶೇಷ ಚೇತನರ 'ಅಪಹಾಸ್ಯ': ಸಮಯ್ ರೈನಾ ಸೇರಿದಂತೆ ಐವರಿಗೆ ಕ್ಷಮೆಯಾಚಿಸಲು ಸೂಚಿಸಿದ ಸುಪ್ರೀಂ ಕೋರ್ಟ್

ವಿಶೇಷ ಚೇತನರ ‘ಅಪಹಾಸ್ಯ’: ಸಮಯ್ ರೈನಾ ಸೇರಿದಂತೆ ಐವರಿಗೆ ಕ್ಷಮೆಯಾಚಿಸಲು ಸೂಚಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶೇಷ ಚೇತನರನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಸಮಯ್ ರೈನಾ ಸೇರಿದಂತೆ ಐವರು ಹಾಸ್ಯ ಕಲಾವಿದರಿಗೆ ತಮ್ಮ ಯೂಟ್ಯೂಬ್ ಚಾನೆಲ್‌ಗಳಲ್ಲಿ ಮತ್ತು ಇತರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಬೇಷರತ್ ಕ್ಷಮೆಯಾಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಆ.25) ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮಜೀತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರ ಹಾಸ್ಯಗಳ ವಿರುದ್ದ M/s ಕ್ಯೂರ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದೆ. ವಿಶೇಷ ಚೇತನರ ಅವಹೇಳನ ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ಈ ಐವರು ವಿಶೇಷ ಚೇತನರು, ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಿದ ಆರೋಪ ಹೊರಿಸಲಾಗಿದೆ.

ಮುಂದಿನ ವಿಚಾರಣೆಯ ದಿನದಂದು ಹಾಸ್ಯ ಕಲಾವಿದರು ಪಾವತಿಸಬೇಕಾದ ದಂಡವನ್ನು ನಿರ್ಧರಿಸುವುದಾಗಿ ಪೀಠ ಹೇಳಿದೆ. “ಪಶ್ಚಾತ್ತಾಪದ ಪ್ರಮಾಣವು ಅಪರಾಧದ ಮಟ್ಟಕ್ಕಿಂತ ಹೆಚ್ಚಾಗಿರಬೇಕು, ಅದು ತಪ್ಪನ್ನು ತೊಳೆದಂತೆ” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ತನ್ನ ಕಾರ್ಯಕ್ರಮದಲ್ಲಿ ಬೇಷರತ್ತಾದ ಕ್ಷಮೆಯಾಚನೆಯನ್ನು ಪ್ರಸಾರ ಮಾಡಲಾಗುವುದು ಎಂಬ ಪ್ರತಿಜ್ಞೆಗೆ ಒಳಪಟ್ಟು ದೈಹಿಕ ಹಾಜರಾತಿಯಿಂದ ವಿನಾಯಿತಿ ಪಡೆದ ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಹೊರತುಪಡಿಸಿ, ಉಳಿದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಭಾರತದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಹಾಸ್ಯಕ್ಕೆ ಸರ್ಕಾರ ಮಾರ್ಗಸೂಚಿ ರೂಪಿಸುವ ಬಗ್ಗೆ ನ್ಯಾಯಾಲಯಕ್ಕೆ ಹೇಳಿಕೆ ಕೊಟ್ಟಿದ್ದು, ಆದರೆ ಸಂಪೂರ್ಣ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದಿದ್ದಾರೆ.

“ಉತ್ತಮ ಪ್ರಜ್ಞೆ ಮೇಲುಗೈ ಸಾಧಿಸಿದೆ’ ಮತ್ತು ಹಾಸ್ಯ ಕಲಾವಿದರು ಕ್ಷಮೆಯಾಚಿಸಲಿದ್ದಾರೆ ಎಂದು ಹಿರಿಯ ವಕೀಲೆ ಅಪರತಿಜಾ ಸಿಂಗ್ ಪೀಠಕ್ಕೆ ತಿಳಿಸಿದ್ದಾರೆ. ಹಾಸ್ಯವು ಬೇರೆಯವರ ಗೌರವಕ್ಕೆ ಧಕ್ಕೆ ತರಬಾರದು ಎಂದು ಪೀಠ ಹೇಳಿದೆ.

ಐಟಿ ಕಾಯ್ದೆಯಡಿಯಲ್ಲಿ ಆರೋಪಿಗಳಿಗೆ ದಂಡ ವಿಧಿಸಲಾಗುವುದು ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದು, ಕಲಾವಿದರು ತಪ್ಪ ತಪ್ಪುಗಳನ್ನು ತಿದ್ದಿಕೊಂಡು ಮುಂದೆ ವಿಶೇಷ ಚೇತನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ತಮ್ಮ ವೇದಿಕೆಗಳನ್ನು ಬಳಸಬೇಕು ಎಂದು ಸಲಹೆ ನೀಡಿದ್ದಾರೆ.

ಇಂಡಿಯಾಸ್ ಗಾಟ್ ಲೇಟೆಂಟ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಯೂಟ್ಯೂಬರ್‌ಗಳಾದ ರಣವೀರ್ ಅಲಹಾಬಾದಿಯಾ ಮತ್ತು ಆಶಿಶ್ ಚಂಚ್ಲಾನಿ ಸಲ್ಲಿಸಿದ ಎರಡು ಅರ್ಜಿಗಳು ಮತ್ತು ಹಾಸ್ಯ ಕಲಾವಿದರಾದ ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮಜೀತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರು ವಿಶೇಷ ಚೇತನರ ವಿರುದ್ದ ಅಸಂವೇದನಾಶೀಲ ಹಾಸ್ಯ ಮಾಡರುವುದಾಗಿ ಆರೋಪಿಸಿ M/s ಕ್ಯೂರ್ ಫೌಂಡೇಶನ್ ಸಲ್ಲಿಸಿದ ಒಂದು ಅರ್ಜಿ ಸೇರಿದಂತೆ ಪೀಠವು 3 ಪ್ರಕರಣಗಳನ್ನು ವಿಚಾರಣೆ ನಡೆಸಿದೆ.

ದೇಶದೆಲ್ಲೆಡೆ ಸದ್ದು ಮಾಡಿದ ನೋಯ್ಡಾ ವರದಕ್ಷಿಣೆ ದುರಂತ: ಜೀವಂತ ಸುಟ್ಟು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...