Homeಮುಖಪುಟಸುಪ್ರೀಂ ಕೋರ್ಟ್‌ 'ಒಳ ಮೀಸಲಾತಿ' ತೀರ್ಪು; 'ಎಲ್ಲವನ್ನೂ ಒಪ್ಪುವುದಿಲ್ಲ' ಎಂದ ಮಾಯಾವತಿ

ಸುಪ್ರೀಂ ಕೋರ್ಟ್‌ ‘ಒಳ ಮೀಸಲಾತಿ’ ತೀರ್ಪು; ‘ಎಲ್ಲವನ್ನೂ ಒಪ್ಪುವುದಿಲ್ಲ’ ಎಂದ ಮಾಯಾವತಿ

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪವರ್ಗೀಕರಣಕ್ಕೆ ಅವಕಾಶ ನೀಡುವ ಸುಪ್ರೀಂ ಕೋರ್ಟ್ ತೀರ್ಪನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಎಂದು ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಇಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಒಳ ಪಂಗಡಗಳ ಉಪವರ್ಗೀಕರಣವನ್ನು ಅನುಮತಿಸಲಾಗಿದೆ, ನಮ್ಮ ಪಕ್ಷವು ಅದನ್ನು ಒಪ್ಪುವುದಿಲ್ಲ ಎಂದು ಮಾಯಾವತಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದರು.

ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹೆಚ್ಚು ಹಿಂದುಳಿದಿರುವ ಜಾತಿಗಳ ಉನ್ನತಿಗಾಗಿ ಮೀಸಲಾತಿ ನೀಡಲು, ಸಾಮಾಜಿಕವಾಗಿ ಭಿನ್ನಜಾತಿಯ ವರ್ಗವನ್ನು ರೂಪಿಸುವ ಪರಿಶಿಷ್ಟ ಜಾತಿಗಳಲ್ಲಿ ಉಪವರ್ಗಗಳನ್ನು ಮಾಡಲು ರಾಜ್ಯಗಳಿಗೆ ಸಂವಿಧಾನಾತ್ಮಕವಾಗಿ ಅಧಿಕಾರವಿದೆ ಎಂದು ಗುರುವಾರ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ.

“ಎಸ್‌ಸಿ ಮತ್ತು ಎಸ್‌ಟಿಗಳ ಜನರು ಎದುರಿಸುತ್ತಿರುವ ದೌರ್ಜನ್ಯಗಳನ್ನು ಗುಂಪಾಗಿ ಎದುರಿಸಲಾಗಿದೆ. ಈ ಗುಂಪು ಸಮಾನವಾಗಿದೆ ಇದರಲ್ಲಿ ಯಾವುದೇ ರೀತಿಯ ಉಪವರ್ಗೀಕರಣ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದರು.

ತೀರ್ಪಿನ ಹಿನ್ನೆಲೆ

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದೆ.

ಒಳ ಮೀಸಲಾತಿ ಅನುಮತಿಸುವಾಗ, ರಾಜ್ಯವು ಉಪ-ವರ್ಗಕ್ಕೆ ಶೇ. 100 ಮೀಸಲಾತಿಯನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯವು ಉಪ-ವರ್ಗದ ಪ್ರಾತಿನಿಧ್ಯದ ಅಸಮರ್ಪಕತೆಯ ಬಗ್ಗೆ ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಒಳ ಮೀಸಲಾತಿ ಸಮರ್ಥಿಸಬೇಕಾಗಿದೆ ಎಂದಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು 6-1 ಅಂತರದ ಬಹುಮತದ ತೀರ್ಪಿನ ಮೂಲಕ ಒಳ ಮೀಸಲಾತಿ ಪ್ರಸ್ತಾವವನ್ನು ಎತ್ತಿ ಹಿಡಿದಿದೆ. ನ್ಯಾ. ಬೇಲಾ ಮಾತ್ರ ಈ ಪ್ರಸ್ತಾವಕ್ಕೆ ಭಿನ್ನಮತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಆರು ಪ್ರತ್ಯೇಕ ತೀರ್ಪುಗಳನ್ನು ಬರೆಯಲಾಗಿದೆ. ಒಳ ಮೀಸಲಾತಿಗೆ ಸಂಬಂಧಿಸಿದಂತೆ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ರಾಜ್ಯ ಪ್ರಕರಣದ ಸಂಬಂಧ 2004ರಲ್ಲಿ ಐದು ಮಂದಿ ನ್ಯಾಯಾಧೀಶರ ಸಾಂವಿಧಾನಿಕ ಪೀಠವು ನೀಡಿದ್ದ ತೀರ್ಪನ್ನು ಈ ತೀರ್ಪು ಅನೂರ್ಜಿತಗೊಳಿಸಿದೆ.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...