Homeಮುಖಪುಟಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

- Advertisement -
- Advertisement -

ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಮಾಡುತ್ತಾ ಕೋಮುಗಲಭೆ ಸೃಷ್ಟಿಸಲು ಯತ್ನಿಸುವ ಸುದರ್ಶನ್ ಟಿವಿ ಮುಖ್ಯಸ್ಥ ಮತ್ತು ಹಿಂದುತ್ವ ಮುಖಂಡ ಸುರೇಶ್ ಚವ್ಹಾಂಕೆ ಬೆಂಬಲಿಗರು ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡಿದ್ದು, “ಸರ್ವೊಚ್ಚ ನ್ಯಾಯಾಲಯ ಮುಸ್ಲಿಮರ ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದ್ದಾರೆ.

ಫೆಬ್ರವರಿ 5ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಹಿಂದುತ್ವ ಮುಖಂಡರು ಹಾಗೂ ಚವ್ಹಾಂಕೆ ಬೆಂಬಲಿಗರು ಪಾಲ್ಗೊಂಡಿದ್ದರು. ಚವ್ಹಾಂಕೆ ವಿರುದ್ಧ ಸುಪ್ರೀಂ ಕೋರ್ಟ್ ಜರುಗಿಸಿರುವ ಕ್ರಮಗಳನ್ನು ಖಂಡಿಸಿದ್ದಾರೆ.

2021ರಲ್ಲಿ ಸಾರ್ವಜನಿಕವಾಗಿ ಮಾತನಾಡುತ್ತಾ, ಹಿಂದೂ ರಾಷ್ಟ್ರ ನಿರ್ಮಾಣ ಮತ್ತು ಮುಸ್ಲಿಮವರನ್ನು ಕೊಲ್ಲುವ ಕುರಿತು ಚವ್ಹಾಂಕೆ ಹೇಳಿದ್ದನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. “ಅನಗತ್ಯ ಕಾನೂನು ಕಿರುಕುಳ ನೀಡುತ್ತಿರುವ ಕೋರ್ಟ್‌ ಮುಸ್ಲಿಮರ ಪರವಾಗಿದೆ” ಎಂದು ಚವ್ಹಾಂಕೆ ಬೆಂಬಲಿಗರು ದೂರಿದ್ದಾರೆ.

2002ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ಥಾಪಿಸಿದ ‘ಹಿಂದೂ ಯುವ ವಾಹಿನಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚವ್ಹಾಂಕೆ ಮಾಡಿದ ದ್ವೇಷ ಭಾಷಣವನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಟೀಕಿಸಿತ್ತು.

“ಕಾರ್ಯಕ್ರಮದಲ್ಲಿ ಯಾವುದೇ ದ್ವೇಷ ಭಾಷಣವನ್ನು ಮಾಡಲಾಗಿಲ್ಲ” ಎಂದು ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ಸಲ್ಲಿಸಿದ ಅಫಿಡವಿಟ್ ನೋಡಿ ಕೋರ್ಟ್ ಗರಂ ಆಗಿತ್ತು.

“ತಮ್ಮ ಸಮುದಾಯದ ನೈತಿಕತೆಯನ್ನು ಉಳಿಸಲು ಪ್ರೇರಣೆಗೊಂಡಿರುವ ಜನರಿಂದ ಸಭೆ ನಡೆಸಲಾಗಿದೆ” ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು.

ಸಮಾರಂಭದಲ್ಲಿ ‘ಪ್ರಮಾಣ ವಚನ’ ಬೋಧಿಸಿದ್ದ ಚವ್ಹಾಂಕೆ, “ಬೇಕಾದರೆ, ನಾವು ಅದಕ್ಕಾಗಿ ಕೊಲ್ಲುತ್ತೇವೆ. ಆದರೆ ನಾವು ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ. ನಮ್ಮ ಪೂರ್ವಜರು ಮತ್ತು ದೇವತೆಗಳು ನಮ್ಮ ಗುರಿಯನ್ನು ಸಾಧಿಸುವ ಶಕ್ತಿಯನ್ನು ನಮಗೆ ನೀಡಲಿ” ಎಂದಿದ್ದರು.

ಭಾನುವಾರ (ಫೆಬ್ರವರಿ 5) ನಡೆದ ಕಾರ್ಯಕ್ರಮದಲ್ಲಿ ಚವ್ಹಾಂಕೆಯವರ ಬೆಂಬಲಿಗರು (ಅವರಲ್ಲಿ ಅನೇಕ ಹಿಂದುತ್ವ ನಾಯಕರು) ಮಾತನಾಡುತ್ತಾ, “ಚವ್ಹಾಂಕೆ ಮಾಡಿರುವ ಭಾಷಣದಲ್ಲಿ ಯಾವುದೇ ತಪ್ಪಿಲ್ಲ. ಸುಪ್ರೀಂ ಕೋರ್ಟ್ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಹಿಂದೂಗಳ ಮೇಲೆ ಕಠಿಣವಾಗಿ ವರ್ತಿಸಿದರೆ, ಇತರ ಧರ್ಮಗಳೊಂದಿಗೆ ಕೋರ್ಟ್ ಉದಾರವಾಗಿದೆ” ಎಂದು ಆರೋಪಿಸಿದ್ದಾರೆ.

ಭಾಷಣಕಾರರಲ್ಲಿ ಒಬ್ಬರಾದ ರಾಷ್ಟ್ರ ನಿರ್ಮಾಣ ಪಕ್ಷದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಆನಂದ್ ಕುಮಾರ್, “ತನಿಖೆಯನ್ನು ನಡೆ‌ಸಲಾಗಿದ್ದು ಚವ್ಹಾಂಕೆ ಅವರ ವಿರುದ್ಧ ಯಾವುದೇ ಅಪರಾಧಗಳು ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದರೂ ಕೋರ್ಟ್ ಸುಮ್ಮನೆ ಬಿಟ್ಟಿಲ್ಲ. ನೀವು ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಥವಾ ಯಾರನ್ನಾದರೂ ಬಂಧಿಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಪೊಲೀಸರನ್ನು ಕೇಳುತ್ತಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಇಸ್ಲಾಂ ಪರವಾಗಿ ಪಕ್ಷಪಾತಿಯಾಗಿದೆ ಎಂದು ಅಭಿಪ್ರಾಯ ತಾಳಿದ ಅವರು, “ಮುಸ್ಲಿಂ ತುಷ್ಟೀಕರಣದಲ್ಲಿ ಸುಪ್ರೀಂ ಕೋರ್ಟ್ ತೊಡಗಿದೆ” ಎಂದು ಹೇಳಿದ್ದಾರೆ.

ರಾಗಿಣಿ ತಿವಾರಿ, ಸೂರಜ್ ಪಾಲ್ ಅಮ್ಮು, ಆಸ್ತಾ ಮಾ ಮತ್ತು ಅನ್ನಪೂರ್ಣ ಭಾರತಿ ಅವರಂತಹ ಹಿಂದುತ್ವ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಚವ್ಹಾಂಕೆ ಇಲ್ಲಿ ಇರಲಿಲ್ಲ. ಸರಿಸುಮಾರು 300-400 ಜನ ಸೇರಿದ್ದರು, ಅದರಲ್ಲಿ ಮೂರನೇ ಒಂದು ಭಾಗದಷ್ಟು ಶಾಲಾ ವಿದ್ಯಾರ್ಥಿಗಳಿದ್ದರು ಎಂದು ‘ದಿ ವೈರ್‌’ ವರದಿ ಮಾಡಿದೆ.

“ನಮ್ಮ ಗುರುಗಳು (ಶಿಕ್ಷಕರು) ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ. ನಾವು ಏಕೆ ಬಂದಿದ್ದೇವೆ ಎಂಬ ಕಾರಣ ನನಗೆ ತಿಳಿದಿಲ್ಲ” ಎಂದು ಹರಿಯಾಣದ ಪಲ್ವಾಲ್‌ನಿಂದ ಬಂದಿದ್ದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ.

ಸುಪ್ರೀಂ ಕೋರ್ಟ್‌ನ ವಾಗ್ದಂಡನೆಯ ನಂತರ, ದೆಹಲಿ ಪೊಲೀಸರು ಸುರೇಶ್ ಚವ್ಹಾಂಕೆ ವಿರುದ್ಧ ಮೇ 4, 2022 ರಂದು ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಜನ್ಮ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು)  298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಪದಗಳನ್ನು ಉಚ್ಚರಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 10, 2023ರಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು. “ಕಳೆದ ವರ್ಷ ಎಫ್‌ಐಆರ್ ದಾಖಲಿಸಿದ ಎಂಟು ತಿಂಗಳ ನಂತರವೂ ಯಾವುದೇ ಬಂಧನವಿಲ್ಲ ಮಾಡಲಾಗಿಲ್ಲ, ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ, ಪ್ರಕರಣದಲ್ಲಿ ಪ್ರಗತಿ ಸಾಧಿಸಿಲ್ಲ” ಎಂದು ಉಲ್ಲೇಖಿಸಿತ್ತು.

ಜಂತರ್ ಮಂತರ್ ಕಾರ್ಯಕ್ರಮಕ್ಕೂ ಮುನ್ನ ಚವ್ಹಾಂಕೆ ಅವರು ಟ್ವಿಟರ್‌ನಲ್ಲಿ “ಹಿಂದೂ ರಾಷ್ಟ್ರದ ಪ್ರಮಾಣ ವಚನ ಸ್ವೀಕಾರ ಮಾಡುವುದು ಹೇಗೆ ಅಪರಾಧ?” ಎಂಬ ಪೋಸ್ಟರ್ ಅನ್ನು ಟ್ವೀಟ್ ಮಾಡಿದ್ದರು.

ಕಾರ್ಯಕ್ರಮದ ನಂತರ ಅವರು ಮತ್ತಷ್ಟು ಟ್ವೀಟ್‌ಗಳನ್ನು ಮಾಡಿದ್ದು, ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡಿರುವುದು ಸೇರಿದಂತೆ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...