Homeಮುಖಪುಟಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ ‘C2’ ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ (ಏ.13) ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಕೀಲ ಪ್ರಶಾಂತ್ ಭೂಷಣ್ ಅವರ ವಾದಗಳನ್ನು ಆಲಿಸಿತು. ಈ ವಿಷಯವು ದೇಶದಾದ್ಯಂತ ರೈತರಿಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ವಾದಿಸಿದ ಅವರು, ರೈತರ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ಸಮರ್ಪಕ ಖರೀದಿ ವ್ಯವಸ್ಥೆ ಇಲ್ಲದಿರುವುದನ್ನು ಬೆಟ್ಟು ಮಾಡಿದರು. ಎಂಎಸ್‌ಪಿಯನ್ನು ಹೆಚ್ಚಾಗಿ ಕೃಷಿಯ ಒಟ್ಟು ವೆಚ್ಚಕ್ಕಿಂತಲೂ ಕಡಿಮೆ ನಿಗದಿಪಡಿಸಲಾಗುತ್ತಿದೆ ಮತ್ತು ಎಂಎಸ್‌ಪಿ ದರದಲ್ಲಿನ ಖರೀದಿ ಪ್ರಕ್ರಿಯೆಯು ಕೇವಲ ಗೋಧಿ ಮತ್ತು ಭತ್ತದಂತಹ ಬೆಳೆಗಳಿಗೆ ಮಾತ್ರ ಸೀಮಿತವಾಗಿದೆ, ಇದರಿಂದಾಗಿ ಇತರ ಬೆಳೆಗಳನ್ನು ಬೆಳೆಯುವ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಪ್ರತಿಪಾದಿಸಿದರು.

ಪರಿಹಾರವಾಗಿ ಬೆಳೆಯ ವೆಚ್ಚದ ಜೊತೆಗೆ ಶೇಕಡ 50ರಷ್ಟು ಲಾಭಾಂಶವನ್ನು ಅರ್ಜಿಯು ಕೋರುತ್ತಿಲ್ಲ, ಬದಲಿಗೆ ‘C2’ ಎಂದು ಕರೆಯಲಾಗುವ ಕೃಷಿಯ ನಿಖರವಾದ ವೆಚ್ಚವನ್ನು ಮಾತ್ರ ನೀಡುವಂತೆ ವಿನಂತಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಸ್ಪಷ್ಟಪಡಿಸಿದರು. ಈ ಲೆಕ್ಕಾಚಾರಗಳನ್ನು ಈಗಾಗಲೇ ಸರ್ಕಾರವೇ ಮಾಡಿದೆ ಮತ್ತು ರೈತರಿಗೆ ಕನಿಷ್ಠ ಪಕ್ಷ ಅವರು ಮಾಡಿದ ಪೂರ್ಣ ವೆಚ್ಚದ ಮರುಪಾವತಿಯ ಭರವಸೆಯನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದರು. ಮುಂದುವರಿದು, ಉಚಿತ ಪಡಿತರ ಯೋಜನೆಗಳಂತಹ ಕಲ್ಯಾಣ ಕ್ರಮಗಳು ರೈತರಿಗೆ ಅವರ ಉತ್ಪಾದನಾ ವೆಚ್ಚವನ್ನು ಭರಿಸುವಂತಹ ಸಂಭಾವನೆಯನ್ನು ನೀಡುವ ವೆಚ್ಚದಲ್ಲಿ ಬರಬಾರದು ಎಂದು ಅವರು ವಾದಿಸಿದರು.

ವಿಚಾರಣೆಯ ಸಂದರ್ಭದಲ್ಲಿ, ಭೂಮಿಯ ಬೆಲೆ ಮತ್ತು ಬಂಡವಾಳದಂತಹ ಅಂಶಗಳನ್ನು ಅಂದಾಜಿಸುವಲ್ಲಿ ತೊಂದರೆಗಳು ಎದುರಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು. ಏಕೆಂದರೆ, ಈ ವೆಚ್ಚಗಳು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಗಮನಾರ್ಹವಾಗಿ ಬದಲಾಗುತ್ತವೆ ಎಂದು ಅವರು ಹೇಳಿದರು.

ನ್ಯಾಯಮೂರ್ತಿ ಬಾಗ್ಚಿ ಅವರು, ಅರ್ಜಿದಾರರು ಕೋರುತ್ತಿರುವ ಪರಿಹಾರವು ನ್ಯಾಯಾಲಯವು ಆರ್ಥಿಕ ನೀತಿಯನ್ನು ಮರುಬರೆಯುವಂತೆ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಭೂಷಣ್ ಅವರು, “ಸರ್ಕಾರವು ಉಚಿತವಾಗಿ ಪಡಿತರ ನೀಡುವುದರಲ್ಲಿ ಅಭ್ಯಂತರವಿಲ್ಲ. ಆದರೆ, ಅದರ ಪರಿಣಾಮವಾಗಿ ರೈತರಿಗೆ ಕನಿಷ್ಠ ಬೆಳೆಯ ವೆಚ್ಚವೂ ಸಿಗದಂತಾಗಬಾರದು… ಇದರಿಂದಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಮೂರು ಜನ ಮಹಾರಾಷ್ಟ್ರ ಮೂಲದ ರೈತರು (ಪ್ರಕಾಶ್ ಗೋಪಾಲರಾವ್ ಪೋಹರೆ, ಪುರುಷೋತ್ತಮ್ ಗಾವಡೆ ಮತ್ತು ವಿಶಾಲ್ ಓಂಪ್ರಕಾಶ್ ರಾವತ್) ಸಂವಿಧಾನದ 32ನೇ ವಿಧಿಯಡಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕನಿಷ್ಠ ಸರಾಸರಿ ಉತ್ಪಾದನಾ ವೆಚ್ಚಕ್ಕೆ (C2) ಅನುಗುಣವಾಗಿ ನಿಗದಿಪಡಿಸುವಂತೆ ಮತ್ತು ಅದೇ ದರದಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸುವುದನ್ನು ಖಚಿತಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಈ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರ ಪ್ರಕಾರ, ಭಾರತೀಯ ರೈತರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಏಕೆಂದರೆ ಅವರು ತಮ್ಮ ಬೆಳೆಗಳನ್ನು ಕನಿಷ್ಠ ಉತ್ಪಾದನಾ ವೆಚ್ಚಕ್ಕೂ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ, ಇದು ವ್ಯಾಪಕ ಸಂಕಷ್ಟ ಮತ್ತು ಆತ್ಮಹತ್ಯೆಗಳಿಗೆ ಕಾರಣವಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಮಹಾರಾಷ್ಟ್ರವೊಂದರಲ್ಲೇ ಹದಿನೇಳು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಕಿ ಅಂಶಗಳನ್ನು ಈ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿಯ ಪ್ರಕಾರ, ಕೃಷಿಯ ಸಮಗ್ರ ವೆಚ್ಚ ಅಥವಾ ‘C2’ ಎನ್ನುವುದು ಕೃಷಿ ಪರಿಕರಗಳ ನಿಜವಾದ ವೆಚ್ಚ, ಕುಟುಂಬದ ಶ್ರಮದ ಅಂದಾಜು ಮೌಲ್ಯ, ಸ್ವಂತ ಭೂಮಿಯ ಬಾಡಿಗೆ ಮೌಲ್ಯ, ಗುತ್ತಿಗೆ ಭೂಮಿಗೆ ಪಾವತಿಸಿದ ಬಾಡಿಗೆ ಮತ್ತು ದುಡಿಯುವ ಬಂಡವಾಳದ ಮೇಲಿನ ಬಡ್ಡಿಯನ್ನು ಒಳಗೊಂಡಿರುತ್ತದೆ. ಪ್ರಸ್ತುತ ಎಂಎಸ್‌ಪಿ ನಿಗದಿಪಡಿಸುವ ವಿಧಾನವು ಹೆಚ್ಚಾಗಿ ‘A2+FL’ (ಪಾವತಿಸಿದ ವೆಚ್ಚಗಳು ಮತ್ತು ಕುಟುಂಬದ ಶ್ರಮ) ಅನ್ನು ಆಧರಿಸಿದ್ದು, ಅದಕ್ಕೆ 1.5 ಪಟ್ಟು ಗುಣಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ಇದು ಭೂಮಿ ಮತ್ತು ಬಂಡವಾಳದ ವೆಚ್ಚದಂತಹ ಪ್ರಮುಖ ಅಂಶಗಳನ್ನು ಹೊರಗಿಡುತ್ತದೆ ಮತ್ತು ರೈತರು ಭರಿಸುವ ನೈಜ ಆರ್ಥಿಕ ವೆಚ್ಚವನ್ನು ಕಡಿಮೆ ಅಂದಾಜು ಮಾಡುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಎಂಎಸ್‌ಪಿ ಬೆಳೆಗಳ ಖರೀದಿ ಪ್ರಕ್ರಿಯೆಯು ಪ್ರಮುಖವಾಗಿ ಗೋಧಿ ಮತ್ತು ಭತ್ತಕ್ಕೆ ಮಾತ್ರ ಸೀಮಿತವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಉಳಿದ ಹೆಚ್ಚಿನ ಬೆಳೆಗಳನ್ನು ಘೋಷಿತ ಎಂಎಸ್‌ಪಿ ದರದಲ್ಲೂ ಖರೀದಿಸುತ್ತಿಲ್ಲ, ಇದು ರೈತರ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಉಲ್ಬಣಗೊಳಿಸುತ್ತಿದೆ. ಆಹಾರ ಭದ್ರತಾ ಯೋಜನೆಯಡಿ ಗೋಧಿ ಮತ್ತು ಭತ್ತವನ್ನು ರಿಯಾಯಿತಿ ದರದಲ್ಲಿ ವಿತರಿಸುತ್ತಿರುವುದು ಕೃಷಿ ಮಾರುಕಟ್ಟೆಯ ಸಮತೋಲನವನ್ನು ತಪ್ಪಿಸಿದೆ ಮತ್ತು ಸಿರಿಧಾನ್ಯಗಳಂತಹ ಇತರ ಬೆಳೆಗಳ ಬೇಡಿಕೆಯನ್ನು ಕುಗ್ಗಿಸಿದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ, ಸರ್ಕಾರವು ಈಗಾಗಲೇ ಲೆಕ್ಕ ಹಾಕಿರುವ ಸಮಗ್ರ ಉತ್ಪಾದನಾ ವೆಚ್ಚಕ್ಕೆ (C2) ಅನುಗುಣವಾಗಿ ಎಂಎಸ್‌ಪಿ ದರವನ್ನು ನಿಗದಿಪಡಿಸಲು ಮತ್ತು ಆ ದರದಲ್ಲಿ ಬೆಳೆಗಳ ಪರಿಣಾಮಕಾರಿ ಖರೀದಿಯನ್ನು ಖಚಿತಪಡಿಸಿಕೊಳ್ಳಲು ಸೂಕ್ತವಾದ ಖರೀದಿ ಮೂಲಸೌಕರ್ಯಗಳನ್ನು ಸ್ಥಾಪಿಸಲು ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.

Courtesy : livelaw.in



 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...