Homeಮುಖಪುಟ'ಇಸ್ಲಾಮೋಫೋಬಿಕ್’ ವಿಡಿಯೋ: ಅಸ್ಸಾಂ ಬಿಜೆಪಿಗೆ ಸುಪ್ರೀಂ ಕೋರ್ಟ್ ನೋಟಿಸ್

‘ಇಸ್ಲಾಮೋಫೋಬಿಕ್’ ವಿಡಿಯೋ: ಅಸ್ಸಾಂ ಬಿಜೆಪಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಿಜೆಪಿ ಅಸ್ಸಾಂ ರಾಜ್ಯದ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾದ ಎಐ ಆಧಾರಿತ ‘ಇಸ್ಲಾಮೋಫೋಬಿಕ್’ ವಿಡಿಯೋವನ್ನು ತೆಗೆದು ಹಾಕಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಅಸ್ಸಾಂ ಬಿಜೆಪಿ, ಅಸ್ಸಾಂ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಮಂಗಳವಾರ (ಅ.7) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರ ಅಡ್ವೊಕೇಟ್ ಲಝೀಫ್ ಅಹ್ಮದ್ ಪರ ವಕೀಲ ನಿಝಾಮ್ ಪಾಷಾ ಅವರ ವಾದವನ್ನು ಆಲಿಸಿದ  ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೋಟಿಸ್ ಜಾರಿ ಮಾಡಿದೆ.

“ಮುಂಬರುವ ಚುನಾವಣೆಯ ಭಾಗವಾಗಿ ಒಂದು ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬರದಿದ್ದರೆ, ಒಂದು ನಿರ್ದಿಷ್ಟ ಸಮುದಾಯವು ಅಧಿಕಾರ ವಹಿಸಿಕೊಳ್ಳುತ್ತದೆ ಎಂದು ಅದರಲ್ಲಿ ತೋರಿಸಲಾಗಿದೆ. ಟೋಪಿ ಮತ್ತು ಗಡ್ಡ ಬಿಟ್ಟ ಜನರನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಹಾಗಾಗಿ, ವಿಡಿಯೋ ಪೋಸ್ಟ್‌ ಮಾಡಿದವರ ವಿರುದ್ದ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಬೇಕು. ಎಫ್‌ಐಆರ್ ದಾಖಲಿಸದಿದ್ದರೆ, ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದರು.

ಮನವಿ ಆಲಿಸಿದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ನಿಗದಿಪಡಿಸಿದೆ.

ಬಿಜೆಪಿ ಅಸ್ಸಾಂ ಘಟಕ ಸೆಪ್ಟೆಂಬರ್ 15ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿಯದಿದ್ದರೆ ಅಸ್ಸಾಂ ಅನ್ನು ಮುಸ್ಲಿಮರು ವಶಪಡಿಸಿಕೊಳ್ಳುತ್ತಾರೆ ಎಂಬ ‘ಸುಳ್ಳು ನಿರೂಪಣೆ’ಯನ್ನು ಇದರಲ್ಲಿ ಮಾಡಲಾಗಿದೆ. ಟೀ ಎಸ್ಟೇಟ್‌ಗಳು, ಗುವಾಹಟಿ ವಿಮಾನ ನಿಲ್ದಾಣ, ಗುವಾಹಟಿ ಅಕೋಲಾಡ್, ಅಸ್ಸಾಂ ರಂಗರ್, ಗುವಾಹಟಿ ಕ್ರೀಡಾಂಗಣ, ರಂಗ್ ಘರ್, ಗುವಾಹಟಿ ಪಟ್ಟಣವನ್ನು ಮುಸ್ಲಿಂ ಜನರು (ಸ್ಕಲ್‌ಟೋಪಿ ಮತ್ತು ಬುರ್ಖಾ ಧರಿಸಿದವರು) ವಶಪಡಿಸಿಕೊಂಡಂತೆ ವಿಡಿಯೋ ತೋರಿಸುತ್ತದೆ. ಅಸ್ಸಾಂಗೆ ಮುಸ್ಲಿಮರಾಗಿ ಅಕ್ರಮ ವಲಸಿಗರು ಬರುವುದನ್ನು ವಿಡಿಯೋ ತೋರಿಸುತ್ತದೆ. ಮುಸ್ಲಿಮರು ಸರ್ಕಾರಿ ಭೂಮಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಪರಿಣಾಮ ಅಂತಿಮವಾಗಿ, ರಾಜ್ಯದಲ್ಲಿ ಶೇಕಡ 90ರಷ್ಟು ಮುಸ್ಲಿಂ ಜನಸಂಖ್ಯೆ ಇದೆ ಎಂದು ವಿಡಿಯೋ ತೋರಿಸುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಅರ್ಜಿದಾರರು, ಬಿಜೆಪಿ ಅಸ್ಸಾಂ ಘಟಕ ಭಾರತೀಯ ಸಂವಿಧಾನದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿರಬೇಕು. ಆದರೆ, ಅವರ ಅಧಿಕೃತ ಎಕ್ಸ್‌ ಖಾತೆಯಿಂದ ಹಂಚಿಕೊಳ್ಳಲಾದ ಒಂದು ಎಐ-ನಿರ್ಮಿತ ವಿಡಿಯೋ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು, ಅವರನ್ನು ಕೆಟ್ಟದ್ದಾಗಿ ಚಿತ್ರಿಸಿದೆ ಮತ್ತು ರಾಕ್ಷಸಸೀಕರಿಸಿದೆ ಎಂದು ಆರೋಪಿಸಿದ್ದಾರೆ. ಒಂದು ರಾಜ್ಯಕ್ಕೆ ಸಂಭವಿಸಬಹುದಾದ ಅತ್ಯಂತ ಕೆಟ್ಟ ಭವಿಷ್ಯವೆಂದರೆ ಮುಸ್ಲಿಮರು ಆ ರಾಜ್ಯವನ್ನು ತಮ್ಮ ಆಡಳಿತಕ್ಕೆ ತೆಗೆದುಕೊಳ್ಳುವುದು. ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ರಾಜ್ಯವನ್ನು ಈ ಗತಿಯಿಂದ ರಕ್ಷಿಸಬಹುದು ಎಂಬ ಭರವಸೆಯ ಮೂಲಕ ಜನರ ಬೆಂಬಲವನ್ನು ಕೋರಲಾಗಿದೆ” ಅರ್ಜಿಯಲ್ಲಿ ತಿಳಿಸಲಾಗಿದೆ.

ಅಶಾಂತಿ ಮತ್ತು ದ್ವೇಷವನ್ನು ತಡೆಗಟ್ಟುವ ಸಲುವಾಗಿ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡಲು ವಿಡಿಯೋವನ್ನು ತೆಗೆದು ಹಾಕಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಕೋರಿದ್ದಾರೆ.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...