HomeUncategorizedಸ್ಪೀಕರ್ ನಿಲುವು ಪ್ರಶ್ನಿಸಿ ಠಾಕ್ರೆ ಬಣದಿಂದ ಅರ್ಜಿ: ಸಿಎಂ ಶಿಂಧೆ, 38 ಶಾಸಕರಿಗೆ ಸುಪ್ರೀಂ ನೋಟಿಸ್

ಸ್ಪೀಕರ್ ನಿಲುವು ಪ್ರಶ್ನಿಸಿ ಠಾಕ್ರೆ ಬಣದಿಂದ ಅರ್ಜಿ: ಸಿಎಂ ಶಿಂಧೆ, 38 ಶಾಸಕರಿಗೆ ಸುಪ್ರೀಂ ನೋಟಿಸ್

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸಲ್ಲಿಸಿರುವ ಅರ್ಜಿಗೆ ಸಂಬಂಧಪಟ್ಟಂತೆ ಸಿಎಂ ಏಕನಾಥ್ ಶಿಂಧೆ ಬಣಕ್ಕೆ ಸೋಮವಾರ ಸುಪ್ರೀಂ ಕೋರ್ಟ್‌ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಠಾಕ್ರೆ ಬಣದ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರ ವಾದ ಆಲಿಸಿದೆ. ಎರಡು ವಾರಗಳಲ್ಲಿ ಸಿಎಂ ಏಕನಾಥ್ ಶಿಂಧೆ ಮತ್ತು ಅವರ ಬಣದ 38 ಶಾಸಕರಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿಗೊಳಿಸಿದೆ.

ಆರಂಭದಲ್ಲಿ, ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಠಾಕ್ರೆ ಬಣದ ಹಿರಿಯ ವಕೀಲರು, ಈ ಪ್ರಕರಣವನ್ನು ನಿರ್ವಹಿಸಲು ಉನ್ನತ ನ್ಯಾಯಾಲಯವು ಹೆಚ್ಚು ಸೂಕ್ತವಾಗಿದೆ ಎಂದರು.

ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದು ವರ್ಷದಲ್ಲಿ ಎಂಟು ಜಿಲ್ಲೆಗಳ 1,088 ರೈತರು ಆತ್ಮಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...