Homeಮುಖಪುಟಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು

ಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು

- Advertisement -
- Advertisement -

ನ್ಯಾಯಾಂಗದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ.

ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದಾರೆ. ನ್ಯಾಯಾಧೀಶರು ಹಂಚಿಕೊಳ್ಳುವ ಆಸ್ತಿ ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ದೆಹಲಿ ಹೈಕೋರ್ಟ್‌ನಿಂದ ಮೂಲಸ್ಥಾನ ಅಲಹಾಬಾದ್‌ ಹೈಕೋರ್ಟ್‌ಗೆ ಇತ್ತೀಚೆಗೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿಯ ಸರ್ಕಾರಿ ನಿವಾಸದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಧೀಶರು ಈ ನಿರ್ಧಾರ ಕೈಗೊಂಡಿದ್ದಾರೆ.

ನ್ಯಾಯಾಧೀಶರ ಆಸ್ತಿ ಘೋಷಣೆ ಹೇಗೆ ಮಾಡಬೇಕು ಎಂಬುದಕ್ಕೆ ನಿರ್ದಿಷ್ಟ ವಿಧಾನಗಳನ್ನು ಸರಿಯಾದ ಸಮಯದಲ್ಲಿ ಅಂತಿಮಗೊಳಿಸಲಾಗುತ್ತದೆ ಎಂದು ವರದಿ ಹೇಳಿದೆ.

ಪ್ರಸ್ತುತ, ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಘೋಷಿಸಿಕೊಂಡಿದ್ದಾರೆ. ಆದರೆ, ಅದನ್ನು ಸಾರ್ವಜನಿಕಗೊಳಿಸಿಲ್ಲ.

ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆ

ನ್ಯಾಯಮೂರ್ತಿ ಯಶವಂತ್ ವರ್ಮಾ ಊರಲ್ಲಿ ಇಲ್ಲದ ವೇಳೆ, ಮಾರ್ಚ್ 14 ರಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ನ್ಯಾಯಾಂಗ ಬಡಾವಣೆಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕುಟುಂಬಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಮನೆಯ ಒಂದು ಕೋಣೆಯಲ್ಲಿ ಪೊಲೀಸರಿಗೆ ಭಾರೀ ಪ್ರಮಾಣದ ಹಣ ಕಂಡು ಬಂದಿತ್ತು. 

ಈ ಬಗ್ಗೆ ಸ್ಥಳೀಯ ಪೊಲೀಸರು ಅವರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅವರು ಹಿರಿಯ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ತಲುಪಿತ್ತು. ಅವರು ಗುರುವಾರ (ಮಾ.20) ಸಂಜೆ ತುರ್ತು ಕೊಲಿಜಿಯಂ ಸಭೆ ಕರೆದಿದ್ದರು. ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್ಧರಿಸಿತ್ತು.

ನ್ಯಾಯಮೂರ್ತಿ ವರ್ಮಾ ಅವರನ್ನು ಪ್ರಸ್ತುತ ಅವರ ಮೂಲ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಅವರ ವಿರುದ್ದ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್‌ ವಕೀಲರು ವರ್ಮಾ ಅವರನ್ನು ನಮಲ್ಲಿಗೆ ಕಳುಹಿಸಬೇಡಿ ಎಂದು ಇತ್ತೀಚೆಗೆ ಪ್ರತಿಭಟಿಸಿದ್ದರು. ನ್ಯಾಯಾಧೀಶರ ಮನೆಯಲ್ಲಿ ಹಣ ಪತ್ತೆಯಾಗಿರುವುದನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಇದು ಜನರಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸಾರ್ಹತೆಯನ್ನು ಕಡಿಮೆ ಮಾಡುತ್ತದೆ ಎಂದಿದೆ.

ಪಂಜಾಬ್‌ | 14,000 ಎಕರೆ ವಕ್ಫ್‌ ಭೂಮಿ ಅಕ್ರಮ ಅತಿಕ್ರಮಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...