ಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು

ನ್ಯಾಯಾಂಗದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದಾರೆ. ನ್ಯಾಯಾಧೀಶರು ಹಂಚಿಕೊಳ್ಳುವ ಆಸ್ತಿ ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ. … Continue reading ಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು