Homeಮುಖಪುಟಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್?

ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್?

- Advertisement -
- Advertisement -

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಜೂನ್ ತಿಂಗಳಿನಲ್ಲಿಯೇ ದೆಹಲಿಯ ಪರ್ವತ ಪ್ರದೇಶದಲ್ಲಿ ಅನಧಿಕೃತವಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ನನಗೆ ತಿಳಿಸಲಾಗಿದೆ ಎಂಬ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಈ ಬಗ್ಗೆ ಅವರ ಹೇಳಿಕೆಯಲ್ಲಿ ಇರುವ ದ್ವಂದ್ವ ಇರುವುದನ್ನು ಕೋರ್ಟ್ ಕಂಡುಕೊಂಡಿದೆ. ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ

ಮರಗಳನ್ನು ಕಡಿಯಲು ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ಸುಪ್ರಿಂಕೋರ್ಟ್‌ನ ನಿರ್ದೇಶನವನ್ನು ಉಲ್ಲಂಘಿಸಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಮರಗಳನ್ನು ಕಡಿಯಲು ಅನುಮತಿ ನೀಡಿರುವುದು ಬೆಳಕಿಗೆ ಬಂದ ನಂತರ ಸಕ್ಸೇನಾ ವಿರುದ್ಧ ಸುಪ್ರೀಂಕೋರ್ಟ್ ಕಿಡಿ ಕಾರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿಯಲ್ಲಿ ಮರ ಕಡಿಯುವ ಕಾರ್ಯ ನಡೆದಿತ್ತು. ಫೆಬ್ರುವರಿಯಲ್ಲಿ ಮರ ಕಡಿಯುವ ಕಾರ್ಯ ಆರಂಭವಾದ ನಂತರವೇ ಮಾರ್ಚ್‌ನಲ್ಲಿ ನ್ಯಾಯಾಲಯದ ಒಪ್ಪಿಗೆಯ ಅಗತ್ಯವಿದೆ ಎಂಬುದು ತನಗೆ ಗೊತ್ತಾಯಿತು ಎಂದು ಸಕ್ಸೇನಾ ಹೇಳಿಕೊಂಡಿದ್ದಾರೆ. ಆದರೆ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಸಕ್ಸೇನಾ ಅವರು ಜೂನ್‌ ವೇಳೆ ಮರಗಳನ್ನು ಕಡಿಯುವ ಬಗ್ಗೆ ತನಗೆ ತಿಳಿಸಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ

ಆದಾಗ್ಯೂ, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರೊಂದಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರ ಪೀಠವು ದಾಖಲೆಯನ್ನು ಪರಿಶೀಲಿಸಿದ್ದು, ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಂದಿನ ಉಪಾಧ್ಯಕ್ಷ ಸುಭಾಶಿಶ್ ಪಾಂಡಾ ಅವರು ಏಪ್ರಿಲ್ ನಲ್ಲಿಯೇ ಮರ ಕಡಿಯುವ ಬಗ್ಗೆ ಸಕ್ಸೇನಾ ಅವರಿಗೆ ಮಾಹಿತಿ ನೀಡಿದ್ದರು ಕಂಡುಕೊಂಡಿದೆ. ಅದರ ನಂತರ ಸುಭಾಶಿಶ್ ಪಾಂಡಾ ಅವರನ್ನು ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ವರ್ಗಾಯಿಸಲಾಗಿದೆ.

“ಅಫಿಡವಿಟ್‌ನಲ್ಲಿ, ಫೆಬ್ರವರಿ 16, 2024 ರ ಮೊದಲು ವಾಸ್ತವದಲ್ಲಿ ಮರ ಕಡಿಯುವಿಕೆ ನಡೆದಿದೆ ಎಂಬ ಅಂಶವನ್ನು ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ತೋರಿಸುತ್ತದೆ” ಎಂದು ನ್ಯಾಯಾಲಯವು ಗುರುವಾರ ಆದೇಶದಲ್ಲಿ ಉಲ್ಲೇಖಿಸಿದೆ. ಫೆಬ್ರುವರಿಯಲ್ಲಿ ವಾಸ್ತವವಾಗಿ ಕಡಿಯಲಾಗಿದೆ ಎಂಬ ಅಂಶ ಸಕ್ಸೇನಾ ಅವರಿಗೆ ತಿಳಿದಿದ್ದು ಜೂನ್ 10 ರಂದು ಎಂಬ ಅವರ ಹೇಳಿಕೆಯು ತಪ್ಪಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

“ಹೀಗಾಗಿ ನಾವು ಮೇಲಿನ ವ್ಯತ್ಯಾಸದ ಕುರಿತು ಡಿಡಿಎ ಉಪಾಧ್ಯಕ್ಷರಿಂದ ಹೆಚ್ಚುವರಿ ಅಫಿಡವಿಟ್‌ಗೆ ಕರೆ ನೀಡುತ್ತೇವೆ. ಎಲ್ಲಾ ಮೂಲ ದಾಖಲೆಗಳನ್ನು ಈ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಾವು ನಿರ್ದೇಶಿಸುತ್ತೇವೆ. ವಿಚಾರಣೆಯನ್ನು ಮಂಗಳವಾರ ಪಟ್ಟಿ ಮಾಡಿ… ಮರಗಳನ್ನು ಕಡಿಯುವ ಬಗ್ಗೆ ಅವರಿಗೆ ಯಾವಾಗ ತಿಳಿಯಿತು ಎಂದು ಅವರು ನಿರ್ದಿಷ್ಟ ದಿನಾಂಕವನ್ನು ಅಫಿಡವಿಟ್‌ನಲ್ಲಿ ಹೇಳಲಿ” ಕೋರ್ಟ್ ಆದೇಶಿಸಿದೆ.

ದೆಹಲಿಯ ರಿಡ್ಜ್ ಪ್ರದೇಶದಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯುತ್ತಿರುವ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಸುಪ್ರೀಂ ಕೋರ್ಟ್‌ನ ಅನುಮತಿಯಿಲ್ಲದೆ ಈ ಪ್ರದೇಶದಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ನ್ಯಾಯಾಲಯವು ಈ ಹಿಂದೆ ನಿರ್ದೇಶನ ನೀಡಿದ್ದರೂ ಸಹ, ಮರಗಳನ್ನು ಹೇಗೆ ಕತ್ತರಿಸಲಾಯಿತು ಎಂಬುದನ್ನು ವಿವರಿಸಲು ಪೀಠವು ಇತ್ತೀಚೆಗೆ ಲೆಫ್ಟಿನೆಂಟ್‌ ಸಕ್ಸೇನ್ ಅವರನ್ನು ಕೇಳಿದೆ.

ಅಕ್ಟೋಬರ್ 22 ರ ಅಫಿಡವಿಟ್‌ನಲ್ಲಿ, ಎಲ್‌ಜಿ ಸಕ್ಸೇನಾ ಅವರು ಪೂರ್ವಾನುಮತಿ ಅಗತ್ಯದ ಬಗ್ಗೆ ತನಗೆ ತಿಳಿದಿರಲಿಲ್ಲ ಮತ್ತು ತಾನು ಸಾರ್ವಜನಿಕ ಹಿತಾಸಕ್ತಿಯ ಆಧಾರದಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದರು. 2,200 ಕೋಟಿ ಸಾರ್ವಜನಿಕ ಹಣವನ್ನು ಈಗಾಗಲೇ ಹೂಡಿಕೆ ಮಾಡಿರುವ ಮಹತ್ವದ ಯೋಜನೆಗಾಗಿ ಮರ ಕಡಿಯುವುದಾಗಿ ಅವರು ಒತ್ತಿ ಹೇಳಿದ್ದರು.

ಇದನ್ನೂ ಓದಿ: ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...