Homeಮುಖಪುಟವಿವಿಪ್ಯಾಟ್ ಸ್ಲಿಪ್‌ಗಳ ಎಣಿಕೆ: ಚುನಾವಣಾ ಆಯೋಗಕ್ಕೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್

ವಿವಿಪ್ಯಾಟ್ ಸ್ಲಿಪ್‌ಗಳ ಎಣಿಕೆ: ಚುನಾವಣಾ ಆಯೋಗಕ್ಕೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್

- Advertisement -
- Advertisement -

ಚುನಾವಣೆಯಲ್ಲಿ ವಿವಿಪಿಎಟಿ ಪೇಪರ್ ಸ್ಲಿಪ್‌ಗಳನ್ನು ಎಣಿಕೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಪ್ರಸ್ತುತ ವ್ಯವಸ್ಥೆಯಲ್ಲಿ ಲೋಕಸಭಾ ಕ್ಷೇತ್ರದ ಪ್ರತಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಯಾದೃಚ್ಛಿಕವಾಗಿ ಆಯ್ಕೆ ಮಾಡಿದ 5 ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳನ್ನು ಮಾತ್ರ ವಿವಿಪಿಎಟಿ ಚೀಟಿಗಳ ಜೊತೆ ತಾಳೆ ಮಾಡಲಾಗುತ್ತದೆ. ಚುನಾವಣೆಗಳಲ್ಲಿ ಯಾದೃಚ್ಛಿಕವಾಗಿ ಆಯ್ಕೆಯಾದ ಐದು ಇವಿಎಂ ಪರಿಶೀಲಿಸುವ ಬದಲು ಎಲ್ಲಾ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಪೇಪರ್ ಸ್ಲಿಪ್‌ಗಳನ್ನು ಎಣಿಕೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಬಗ್ಗೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ವಕೀಲರಾದ ಅರುಣ್ ಕುಮಾರ್ ಅಗರ್ವಾಲ್ ಮತ್ತು ಎನ್‌ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಅರ್ಜಿಯನ್ನು ಸಲ್ಲಿಸಿತ್ತು. ಸುಪ್ರೀಂಕೋರ್ಟ್ ವಕೀಲರಾದ ನೇಹಾ ರಾಠಿ ಅವರ ಮೂಲಕ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆಸಿ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳನ್ನು ನಿಯೋಜಿಸಿದರೆ ಕೇವಲ ಐದರಿಂದ ಆರು ಗಂಟೆಗಳಲ್ಲಿ ಸಂಪೂರ್ಣ ವಿವಿಪ್ಯಾಟ್ ಪರಿಶೀಲನೆ ನಡೆಸಬಹುದು ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ಸುಮಾರು 24 ಲಕ್ಷ ವಿವಿಪ್ಯಾಟ್‌ಗಳ ಖರೀದಿಗೆ ಸರ್ಕಾರ ಸುಮಾರು 5,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದರೆ, ಪ್ರಸ್ತುತ 20,000 ವಿವಿಪ್ಯಾಟ್‌ಗಳ  ಸ್ಲಿಪ್‌ಗಳನ್ನು ಮಾತ್ರ ಪರಿಶೀಲಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.  ವಿವಿಪಿಎಟಿ ಮತ್ತು ಇವಿಎಂಗಳ ನಡುವೆ ದೊಡ್ಡ ಪ್ರಮಾಣದ ವ್ಯತ್ಯಯಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ. ಆದ್ದರಿಂದ ಮತದಾರರಿಗೆ ವಿವಿಪಿಎಟಿ ಚೀಟಿಗಳನ್ನು ಮತಪೆಟ್ಟಿಗೆಯಲ್ಲಿ ಹಾಕಲು ಅವಕಾಶ ಇರಬೇಕು. ಎಲ್ಲಾ ವಿವಿಪ್ಯಾಟ್ ಸ್ಲಿಪ್‌ಗಳನ್ನು ಎಣಿಸುವುದು ಅತ್ಯಗತ್ಯ ಎನ್ನುವ ವಾದ ಮಂಡಿಸಿದ್ದಾರೆ.

ಇದನ್ನು ಓದಿ: ಅರುಣ್ ಪುರಿ, ರಾಜ್ ದೀಪ್ ಸರ್ದೇಸಾಯಿ, ಶಿವ್ ಅರೂರ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...