Homeಮುಖಪುಟಓಮರ್‌ ಅಬ್ದುಲ್ಲ ಬಂಧನ ಪ್ರಕರಣ: ಜಮ್ಮು ಕಾಶ್ಮೀರಕ್ಕೆ ನೋಟಿಸು ನೀಡಿದ ಸುಪ್ರೀಂ ಕೋರ್ಟ್

ಓಮರ್‌ ಅಬ್ದುಲ್ಲ ಬಂಧನ ಪ್ರಕರಣ: ಜಮ್ಮು ಕಾಶ್ಮೀರಕ್ಕೆ ನೋಟಿಸು ನೀಡಿದ ಸುಪ್ರೀಂ ಕೋರ್ಟ್

ಒಮರ್ ಅಬ್ದುಲ್ಲಾರನ್ನು ಬಿಡುಗಡೆಗೊಳಿಸುವಂತೆ ಅವರ ಸೋದರಿ ಸುಪ್ರಿಂಕೋರ್ಟಿಗೆ ಅಪೀಲು ಸಲ್ಲಿಸಿದ್ದರು

- Advertisement -
- Advertisement -

ಒಮರ್ ಅಬ್ದುಲ್ಲಾ ಬಂಧನದ ವಿರುದ್ಧ ಅವರ ಸಹೋದರಿ ಸಾರಾ ಪೈಲಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಜಮ್ಮು ಕಾಶ್ಮೀರ ಆಡಳಿತಕ್ಕೆ ನೋಟಿಸು ಜಾರಿಮಾಡಿದೆ.

ಸಾರ್ವಜನಿಕ ಭದ್ರತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಒಮರ್ ಅಬ್ದುಲ್ಲಾ ಬಂಧನ ಮಾನ್ಯವಾಗಿದೆಯೇ ಎಂದು ಸುಪ್ರೀಂ ಕೋರ್ಟ್ ಪರಿಶೀಲಿಸಿ ತಿಳಿಸಲು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನೋಟಿಸ್ ನೀಡಿದೆ.

ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಈ ಮೊದಲು ವಿಚಾರಣೆ ನಡೆಸಬೇಕೆಂಬ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಮಾರ್ಚ್ 2 ರಂದು ಈ ಪ್ರಕರಣವನ್ನು ಮತ್ತೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

“ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ನಾವು ಆಶಿಸುತ್ತಿದ್ದೇವೆ …ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗೆ ಸಂಪೂರ್ಣ ನಂಬಿಕೆ ಇದೆ. ಕಾಶ್ಮೀರದ ಜನರಿಗೆ ಭಾರತದ ಉಳಿದ ಭಾಗಗಳಂತೆಯೇ ಹಕ್ಕುಗಳಿವೆ. ನಾವು ಆ ದಿನಕ್ಕಾಗಿ ಕಾಯುತ್ತಿದ್ದೇವೆ ಎಂದು” ಎಂದು ಸಾರಾ ಅಬ್ದುಲ್ಲಾ ಪೈಲಟ್ ಹೇಳಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ರಾಜ್ಯದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿದ ಆಗಸ್ಟ್ 5 ರಿಂದ ಬಂಧನದಲ್ಲಿದ್ದಾರೆ ಅಲ್ಲದೆ ಈಗ ಅವರು ಮೂರು ತಿಂಗಳವರೆಗೆ ವಿಚಾರಣೆಯಿಲ್ಲದೆ ಬಂಧನಕ್ಕೆ ಅವಕಾಶ ನೀಡುವ ಕಠಿಣ ಕಾನೂನಾದ ಸಾರ್ವಜನಿಕ ಭದ್ರತಾ ಕಾಯ್ದೆಯಡಿಯಲ್ಲಿ ಬಂಧಿತರಾಗಿದ್ದಾರೆ. ಒಮರ್ ಅಬ್ದುಲ್ಲಾ ಅವರ ತಂದೆ ಫಾರೂಕ್ ಅಬ್ದುಲ್ಲಾ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಕೂಡಾ ಅದೇ ಕಾನೂನಿನಡಿಯಲ್ಲಿ ಬಂಧನದಲ್ಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ...

0
'ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ' ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...