Homeಮುಖಪುಟ'ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು': ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

- Advertisement -
- Advertisement -

ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ‘ಸಂತ್ರಸ್ತೆಯೇ ಅಪಾಯ ತಂದುಕೊಂಡಳು’ ಎಂಬ ಅಲಹಾಬಾದ್ ಹೈಕೋರ್ಟ್‌ ನ್ಯಾಯಾಧೀಶರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಂತಹ ಅನುಚಿತ ಹೇಳಿಕೆಗಳನ್ನು ನೀಡದಂತೆ ನ್ಯಾಯಾಧೀಶರಿಗೆ ಮಂಗಳವಾರ ಎಚ್ಚರಿಕೆ ನೀಡಿದೆ.

ಮಾರ್ಚ್ 17ರಂದು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ “ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ.

ಮಂಗಳವಾರ ಆ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಮೇಲಿನ ಹೇಳಿಕೆಯನ್ನು ನೀಡಿದೆ.

ಪ್ರತಿಯೊಂದು ಪ್ರಕರಣದ ಸತ್ಯ ಮತ್ತು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಆರೋಪಿಗಳಿಗೆ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಗೆ ಬಿಟ್ಟದ್ದು. ಆದರೆ, ದೂರುದಾರರ ವಿರುದ್ಧ ಇಂತಹ ಅನಗತ್ಯ ಅವಲೋಕನಗಳು ಅಥವಾ ಟೀಕೆಗಳು ಮಾಡಬಾರದು ಎಂದು ಪೀಠ ಹೇಳಿದೆ.

ಸಂತ್ರಸ್ತೆ ಮದ್ಯಪಾನ ಮಾಡಿ ಸ್ವತಃ ಆರೋಪಿಯ ಮನೆಗೆ ಹೋಗುವ ಮೂಲಕ ತಾನೇ ಅಪಾಯವನ್ನು ತಂದೊಡ್ಡಿಕೊಂಡಿದ್ದಾರೆ ಎಂದು ಹೇಳಿದ್ದ ಅಲಹಾಬಾದ್ ಹೈಕೋರ್ಟ್, ಏಪ್ರಿಲ್ 11ರಂದು ಅತ್ಯಾಚಾರ ಪ್ರಕರಣದ ಆರೋಪಿಗೆ ಜಾಮೀನು ನೀಡಿತ್ತು.

ಅಮಿಟಿ ವಿಶ್ವವಿದ್ಯಾಲಯದ ನೋಯ್ಡಾ ಕ್ಯಾಂಪಸ್‌ನಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯನ್ನು ಡಿಸೆಂಬರ್ 2024ರಲ್ಲಿ ಬಂಧಿಸಲಾಗಿತ್ತು. ಅಂದಿನಿಂದ ಆತ ಜೈಲಿನಲ್ಲಿದ್ದರು.

ಮಾರ್ಚ್ 17ರಂದು ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು “ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ” ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಗಳಾದ ಪವನ್ ಮತ್ತು ಆಕಾಶ್ 11 ವರ್ಷದ ಬಾಲಕಿಯ ಸ್ತನಗಳನ್ನು ಹಿಡಿದಿದ್ದಾರೆ. ನಂತರ, ಅವರಲ್ಲಿ ಒಬ್ಬ ಆಕೆಯ ಪೈಜಾಮದ ದಾರವನ್ನು ಎಳೆದು ಕಲ್ವರ್ಟ್ ಕೆಳಗೆ ಎಳೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಸೆಕ್ಷನ್ 18 (ಅಪರಾಧ ಎಸಗಲು ಯತ್ನಿಸಿದ್ದಕ್ಕಾಗಿ ಶಿಕ್ಷೆ) ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಮೂಲತಃ ಸಮನ್ಸ್ ನೀಡಲಾಗಿದ್ದ ಇಬ್ಬರು ಆರೋಪಿಗಳ ವಿರುದ್ಧದ ಆರೋಪಗಳನ್ನು ಹೈಕೋರ್ಟ್ ಬದಲಾಯಿಸಿತ್ತು.

ಬದಲಾಗಿ ಹೈಕೋರ್ಟ್ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354-ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 9/10 (ತೀವ್ರ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ವಿಚಾರಣೆ ನಡೆಸಬೇಕೆಂದು ನಿರ್ದೇಶಿಸಿತ್ತು.

ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...