Homeಮುಖಪುಟತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಯ ಜಾತಿಯನ್ನು ಪರಿಗಣಿಸಬಾರದು, ನಮೂದಿಸಬಾರದು, ಜಾತಿ ಆಧಾರದಲ್ಲಿ ಸಹಾನುಭೂತಿ ತೋರಿಸಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

6 ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್ ಅವರ ಪೀಠವು ರಾಜಸ್ಥಾನ ಹೈಕೋರ್ಟ್ ಮತ್ತು ಕೆಳ ಹಂತದ ವಿಚಾರಣಾ ನ್ಯಾಯಾಲಯವು ಪೋಕ್ಸೋ ಪ್ರಕರಣದ ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿಯನ್ನು ಉಲ್ಲೇಖಿಸಿದೆ ಎಂಬುವುದನ್ನು ಗಮನಿಸಿದೆ. ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್‌ ಪ್ರಕರಣಕ್ಕೆ ಸಂಬಂಧಿಸಿದ ತಮ್ಮ ಆದೇಶಗಳಲ್ಲಿ ಆರೋಪಿಯ ಜಾತಿಯನ್ನು ಏಕೆ ನಮೂದಿಸಿವೆ ಎಂಬುದೇ ನಮಗೆ ಅರ್ಥವಾಗಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಾಲಯಕ್ಕೆ ಆರೋಪಿಗೆ ಜಾತಿ ಅಥವಾ ಧರ್ಮವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯ ತೀರ್ಪುಗಳ ಶೀರ್ಷಿಕೆಯಲ್ಲಿ ಆರೋಪಿಯ ಜಾತಿಯನ್ನು ಏಕೆ ಉಲ್ಲೇಖಿಸಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ವಿಫಲರಾಗಿದ್ದೇವೆ. ತೀರ್ಪಿನ ಶೀರ್ಷಿಕೆಯಲ್ಲಿ ದಾವೆದಾರರ ಜಾತಿ ಅಥವಾ ಧರ್ಮವನ್ನು ಎಂದಿಗೂ ನಮೂದಿಸಬಾರದು ಎಂದು ನ್ಯಾಯಾಲಯ ಹೇಳಿದೆ.

5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣದ ಅಪರಾಧಿ ಗೌತಮ್ ಎಂಬಾತನಿಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು 12 ವರ್ಷ ಕಾಲ ಜೈಲು ಶಿಕ್ಷೆಗೆ ಇಳಿಸಿ ರಾಜಸ್ಥಾನ ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ವಿಚಾರಣೆ ನಂತರ ಅಪರಾಧಿಯ ಜೈಲು ಶಿಕ್ಷೆಯನ್ನು 14 ವರ್ಷಕ್ಕೆ ಹೆಚ್ಚಿಸಿ ನ್ಯಾಯಪೀಠ ತೀರ್ಪು ನೀಡಿದೆ.

ಅಪರಾಧವು ಎಷ್ಟು ಭೀಕರವಾಗಿದೆ ಮತ್ತು ಘೋರವಾಗಿದೆ ಎಂದರೆ ಅದು ಬಾಲಕಿಯ ಸಂಪೂರ್ಣ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಮಗುವಿನ ಬಾಲ್ಯ ನಾಶವಾಗಿದೆ. ಮಗುವಿನ ಮನಸ್ಸಿನ ಮೇಲೆ ಆಘಾತ ಉಂಟು ಮಾಡುತ್ತದೆ ಮತ್ತು ಶಾಶ್ವತವಾಗಿ ಘಟನೆ ಮಗುವಿನ ಜೀವನದ ಮೇಲೆ ಪ್ರಭಾವ ಬೀರುತ್ತದೆ ಎಂದು ಕೋರ್ಟ್‌ ಹೇಳಿದೆ.

ಇದನ್ನು ಓದಿ: ರಾಜಸ್ಥಾನ: ನೀತಿ ಸಂಹಿತೆ ಜಾರಿಯಾದ 48 ಗಂಟೆಗಳಲ್ಲಿ 500ಕ್ಕೂ ಅಧಿಕ ದೂರುಗಳು ದಾಖಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...