Homeಮುಖಪುಟಒನ್‌ ನೇಷನ್‌ - ಒನ್‌ ರೇಷನ್‌ ಯೋಜನೆ ಶೀಘ್ರ ಜಾರಿಗೊಳಿಸುವಂತೆ ದೀದಿಗೆ ಸುಪ್ರೀಂ ಕೋರ್ಟ್‌ ತಾಕೀತು

ಒನ್‌ ನೇಷನ್‌ – ಒನ್‌ ರೇಷನ್‌ ಯೋಜನೆ ಶೀಘ್ರ ಜಾರಿಗೊಳಿಸುವಂತೆ ದೀದಿಗೆ ಸುಪ್ರೀಂ ಕೋರ್ಟ್‌ ತಾಕೀತು

- Advertisement -
- Advertisement -

ದೇಶದ ಎಲ್ಲಾ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಒನ್‌ ನೇಷನ್-‌ ಒನ್‌ ರೇಷನ್‌ ಎಂಬ ಏಕ ರೂಪದ ಪಡಿತರ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರದ ಈ ಯೋಜನೆಗೆ ಕೆಲವು ರಾಜ್ಯಗಳು ಮೊದಲಿನಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿವೆ. ಇದುವರೆಗೆ ಒನ್‌ ನೇಷನ್‌ – ಒನ್‌ ರೇಷನ್‌ ಯೋಜನೆಯನ್ನು ಜಾರಿಗೊಳಿಸದ ರಾಜ್ಯಗಳಲ್ಲಿ ಪಶ್ಚಿಮ ಬಂಗಾಳವೂ ಒಂದು. ಇಂದು ಸುಪ್ರೀಂ ಕೋರ್ಟ್‌ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಒನ್‌ ನೇಷನ್‌ ಒನ್‌ ರೇಷನ್‌ ಯೋಜನೆಯನ್ನು ಅತೀ ಶೀಘ್ರದಲ್ಲಿ ಜಾರಿಗೊಳಿಸುವಂತೆ ಸೂಚಿಸಿದೆ.

ವಲಸೆ ಕಾರ್ಮಿಕರಿಗೆ ನೆರವಾಗುವ ಒನ್‌ ನೇಷನ್‌ – ಒನ್‌ ರೇಷನ್‌ ಯೋಜನೆಯನ್ನು ನೀವು ಬೇರೆ ಬೇರೆ ಕಾರಣಗಳನ್ನು ಹೇಳಿ ಮುಂದೂಡಲು ಸಾಧ್ಯವಿಲ್ಲ. ಶೀಘ್ರದಲ್ಲಿ ಯೋಜನೆಯನ್ನು ಜಾರಗೊಳಿಸಿ ನ್ಯಾಯಲಾಯಕ್ಕೆ ವರದಿ ಸಲ್ಲಿಸಿ ಎಂದು ಸುಪ್ರೀಂ ಕೋರ್ಟ್‌ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿತು.

ಕೇಂದ್ರ ಸರ್ಕಾರ ಮುಂದಿನ ದೀಪಾವಳಿಯ ವರೆಗೆ ಬಿಪಿಎಲ್‌ ಕಾರ್ಡುದಾರರಿಗೆ ನೀಡುವ ರೇಷನ್‌ ಜನರಿಗೆ ತಲುಪಬೇಕಾದರೆ ಒನ್‌ ನೇಷನ್‌ ಒನ್‌ ರೇಷನ್‌ ಯೋಜನೆ ಜಾರಿ ಮಾಡುವುದು ಮುಖ್ಯವಾಗಿದೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೇಂದ್ರ ಸರ್ಕಾರ ನೀಡುವ ರೇಷನ್‌ ಅಗತ್ಯವಾಗಿದೆ. ನೀವು ಈ ಕೂಡಲೇ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಿ ಎಂದು ಸುಪ್ರೀಂ ಕೋರ್ಟ್‌ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿದ ಸುಪ್ರೀಂ ಕೋರ್ಟ್‌ ಪ್ರಕರಣ ವಿಚಾರಣೆಯನ್ನು ಮುಂದೂಡಿತು.


ಇದನ್ನೂ ಓದಿ : ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸೊರೇನ್ ಜಾಮೀನು ಅರ್ಜಿಗೆ ಉತ್ತರಿಸಲು ಇಡಿಗೆ ಕಾಲಾವಕಾಶ ನೀಡಿದ ಕೋರ್ಟ್‌

0
ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಗೆ ಉತ್ತರಿಸಲು ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಇನ್ನೂ ಒಂದು ವಾರ ಕಾಲಾವಕಾಶ ನೀಡಿದೆ. ನ್ಯಾಯಾಲಯವು ಪ್ರಕರಣದ ಮುಂದಿನ...