Homeಮುಖಪುಟಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

ಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

- Advertisement -
- Advertisement -

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು 2021-22ನೇ ವರ್ಷಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದ್ದು, ಕೌನ್ಸೆಲಿಂಗ್‌ಗೆ ಅನುವು ಮಾಡಿಕೊಟ್ಟಿದೆ.

ಪಾಂಡೆ ಸಮಿತಿಯು ನಿಗದಿಪಡಿಸಿದ EWS ಮಾನದಂಡಗಳ ಸಿಂಧುತ್ವವನ್ನು ಪರೀಕ್ಷಿಸಲು ನ್ಯಾಯಾಲಯ ನಿರ್ಧರಿಸಿದ್ದು, ಮಾರ್ಚ್ ಮೂರನೇ ವಾರದಲ್ಲಿ ಅರ್ಜಿಗಳ ವಿಚಾರಣೆಗೆ ಪಟ್ಟಿಮಾಡಿದೆ. ಗುರುವಾರ ತನ್ನ ಆದೇಶ ನೀಡುವಾಗ ರಾಷ್ಟ್ರೀಯ ಹಿತಾಸಕ್ತಿಯಿಂದ ಕೌನ್ಸೆಲಿಂಗ್ ಪ್ರಾರಂಭವಾಗುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬದ ವಿರುದ್ಧ ಇತ್ತೀಚಿಗೆ ದೇಶದ ಹಲವಾರು ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರಿಂದ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರಗಳ ಕಾಲ ನಡೆದ ಪ್ರತಿಭಟನೆಯು ಪೊಲೀಸ್ ಮಧ್ಯಪ್ರವೇಶದಿಂದ ಹಿಂಸಾಚಾರಕ್ಕೆ ತಿರುಗಿತ್ತು. ಡಿಸೆಂಬರ್ 31 ರಂದು ಸರ್ಕಾರದ ಭರವಸೆಯ ನಂತರ ಆಂದೋಲನ ಹಿಂಪಡೆಯಲಾಯಿತು.

ಏನಿದು ವಿವಾದ?

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವರು ಪ್ರಶ್ನಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಒಟ್ಟಿಗೆ ಆಲಿಸುತ್ತಿರುವ ಜಸ್ಟೀಸ್ ಡಿ.ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ರವರನ್ನೊಳಗೊಂಡ ಪೀಠ ಈ EWS ವರ್ಗಕ್ಕೆ 8 ಲಕ್ಷ ಆದಾಯ ಮಿತಿಯ ಮಾನದಂಡವನ್ನು ಹೇಗೆ ನಿರ್ಧರಿಸಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ಅಲ್ಲದೆ, ‘ಒಬಿಸಿಗಳಿಗೂ ಸಹ 8 ಲಕ್ಷ ರೂ.ಗಳು ’ಕ್ರೀಮಿ ಲೇಯರ್’ ಮಾನದಂಡವಾಗಿದೆ. ಆದರೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಹಿಂದುಳಿದಿಲ್ಲದಿರುವ EWS ವರ್ಗಕ್ಕೂ ಅದೇ ಮಾನದಂಡವನ್ನು ಹೇಗೆ ಅಳವಡಿಸಲು ಸಾಧ್ಯ?’ ಎಂದು ಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ’ಈ ಆದಾಯ ಮಿತಿಯನ್ನು ಪರಿಷ್ಕರಿಸುತ್ತೇವೆ ಮತ್ತು ಅದಕ್ಕಾಗಿ ಸಮಿತಿ ರಚನೆ ಮಾಡುತ್ತೇವೆ, ನಾಲ್ಕು ವಾರಗಳ ಸಮಯಾವಕಾಶ ಕೊಡಿ ಎಂದು ಕೋರಿದ್ದಾರೆ’. ಅಲ್ಲಿಯವರೆಗೂ ಪಿ.ಜಿ ಕೌನ್ಸೆಲಿಂಗ್‌ಅನ್ನು ಮುಂದೂಡಬೇಕೆಂದು ಕೋರ್ಟ್ ಹೇಳಿತ್ತು.

ಇದೇ ವಿಷಯ ಕುರಿತು ಅಕ್ಟೋಬರ್‌ನಲ್ಲಿ ಜಸ್ಟೀಸ್ ಡಿ.ವೈ ಚಂದ್ರಚೂಡ್‌ರವರು, “ನೀವು (ಕೇಂದ್ರ ಸರ್ಕಾರ) ಈ 8 ಲಕ್ಷ ರೂಗಳ ಆದಾಯ ಮಿತಿಯನ್ನು ಏಕಾಏಕಿ ಶೂನ್ಯದಿಂದ ತಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಜನಸಂಖ್ಯೆ ಮತ್ತು ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ಅಥವಾ ಆರ್ಥಿಕ-ಸಾಮಾಜಿಕ ಡೇಟಾ ಹೊಂದಿರಬೇಕು. ರೂ. 8 ಲಕ್ಷದ ಮಿತಿಯನ್ನು ಅನ್ವಯಿಸುವ ಮೂಲಕ ನೀವು ಸಮಾಜದಲ್ಲಿನ ಅಸಮಾನತೆಯನ್ನು ಮರೆಮಾಚಿ ಎಲ್ಲರೂ ಸಮಾನರನ್ನಾಗಿ ಬಿಂಬಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದರು. ಒಬಿಸಿ ಸಮುದಾಯವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ EWS ಸಮುದಾಯವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದರು.

ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಅರವಿಂದ್ ದಾತರ್‌ರವರು ಮಾಸಿಕ 70 ಸಾವಿರ ಸಂಬಳ ಪಡೆಯುವವರನ್ನು EWS ಎಂದು ಹೇಗೆ ಕರೆಯಬಹುದು ಎಂಬ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಜನವರಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠ ತಿಳಿಸಿತ್ತು.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...