Homeಕರ್ನಾಟಕ5,8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ: ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

5,8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ: ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

- Advertisement -
- Advertisement -

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕರ್ನಾಟಕ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 12) ತಡೆ ಹಿಡಿದಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠವು, ಮಾರ್ಚ್ 7 ರಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು 5,8,9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಏಕ ಪೀಠದ ತೀರ್ಪನ್ನು ರದ್ದುಗೊಳಿಸಿದೆ.

ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳು ಮತ್ತು ಪೋಷಕರ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ವಿಶೇಷ ರಜಾ ಅವಧಿಯ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್, ಪರೀಕ್ಷೆ ರದ್ದುಗೊಳಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿರುವ ರಾಜ್ಯ ಸರ್ಕಾರದ ಅರ್ಜಿಯ ಕುರಿತು ನಿರ್ಧಾರ ಪ್ರಕಟಿಸುವಂತೆ ವಿಭಾಗೀಯ ಪೀಠವನ್ನು ಕೇಳಿತ್ತು. ವಿಭಾಗೀಯ ಪೀಠ ಪರೀಕ್ಷೆಗೆ ಅನುಮತಿ ನೀಡುವ ಮೂಲಕ ಏಕ ಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿತ್ತು. ಇದೀಗ ವಿಭಾಗೀಯ ಪೀಠದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅಗತ್ಯವಿಲ್ಲ ಮತ್ತು 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ಪರೀಕ್ಷೆ ನಡೆಸಲಾಗುತ್ತಿದೆ ಎಂಬ ರಾಜ್ಯ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ.

ಇದು ಪರೀಕ್ಷೆಯಲ್ಲ, 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವ ಉದ್ದೇಶದಿಂದ ಒಂದು ರೀತಿಯ ಮೌಲ್ಯಮಾಪನ ಎಂದು ರಾಜ್ಯ ವಾದಿಸಿದರೂ, ಸುಪ್ರೀಂ ಕೋರ್ಟ್ ಅದಕ್ಕೆ ಮನ್ನಣೆ ನೀಡಿಲ್ಲ ಎಂದು ಲೈವ್ ಲಾ ವರದಿ ಮಾಡಿದೆ.

ಪರೀಕ್ಷೆ ಮುಂದೂಡಿಕೆ :

ಸುಪ್ರೀಂ ಕೋರ್ಟ್ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ, ಮಾರ್ಚ್ 11ರಿಂದ 18ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಕೇರಳ, ತಮಿಳುನಾಡಿನಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಸಿಎಂಗಳಿಂದ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...