Homeಮುಖಪುಟಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌ಬಿಐ: ಮತ್ತೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌ಬಿಐ: ಮತ್ತೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ಬಾಂಡ್‌ ಸಂಖ್ಯೆಯನ್ನೂ ಬಹಿರಂಗಪಡಿಸುವಂತೆ ಸೂಚಿಸಿದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಸಂಪೂರ್ಣ ಡೇಟಾವನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯವು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದು, ಕಳೆದ 5 ವರ್ಷಗಳಲ್ಲಿ ರಾಜಕೀಯ ಪಕ್ಷಗಳು ಪಡೆದೆ ದೇಣಿಗೆಗಳ ಎಲ್ಲಾ ವಿವರಗಳನ್ನು ಹಂಚಿಕೊಳ್ಳಲು ಬ್ಯಾಂಕ್‌ಗೆ ನಿರ್ದೇಶಿಸಿದೆ.

ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಎಸ್‌ಬಿಐ ನೀಡಿರುವ ಅಂಕಿ ಅಂಶಗಳು ಅಪೂರ್ಣ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಎಸ್‌ಬಿಐ ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸುವಂತೆ ಸೂಚಿಸಿದೆ.

“ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ಯಾರು ಹಾಜರಾಗುತ್ತಿದ್ದಾರೆ? ಅವರು ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಅದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಹಿರಂಗಪಡಿಸಬೇಕು” ಎಂದು ವಿಚಾರಣೆಯ ಆರಂಭದಲ್ಲಿಯೇ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಎಸ್‌ಬಿಐಗೆ ನೀಡಿದ ನೋಟಿಸ್‌ನಲ್ಲಿ, ಸುಪ್ರೀಂ ಕೋರ್ಟ್ ಪೀಠವು ಮಾರ್ಚ್ 18 ರಂದು ಮುಂದಿನ ವಿಚಾರಣೆಯ ಸಮಯದಲ್ಲಿ ಲೋಪವನ್ನು ವಿವರಿಸಲು ಬ್ಯಾಂಕ್‌ಗೆ ನಿರ್ದೇಶಿಸಿದೆ.

ಚುನಾವಣಾ ಬಾಂಡ್ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ.

ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಹಣವನ್ನು ಘೋಷಿಸದೆ ದೇಣಿಗೆ ನೀಡಲು ವ್ಯಕ್ತಿಗಳಿಗೆ ಮತ್ತು ವ್ಯವಹಾರಗಳಿಗೆ ಅವಕಾಶ ಮಾಡಿಕೊಟ್ಟಿತ್ತು. 2018 ರಲ್ಲಿ ಬಿಜೆಪಿ ಸರ್ಕಾರವು ನಗದು ದೇಣಿಗೆಗೆ ಪರ್ಯಾಯವಾಗಿ ಚುನಾವಣಾ ಬಾಂಡ್‌ ಅನ್ನು ಪರಿಚಯಿಸಿತ್ತು. ಸುಪ್ರೀಂ ಕೋರ್ಟ್ ಕಳೆದ ತಿಂಗಳು ಈ ಯೋಜನೆಯನ್ನು ರದ್ದುಗೊಳಿಸಿದ್ದು, ಇದು ಅಸಂವಿಧಾನಿಕ ಎಂದು ಹೇಳಿತ್ತು.

ಇದನ್ನೂ ಓದಿ : ಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...