Homeಮುಖಪುಟಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು ಕರ್ನಾಟಕ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ನೀಡಿದೆ.

ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಒಂದೇ ಅರ್ಜಿಯನ್ನಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸುವಾದಾಗಿ ಭಾನುವಾರ ಲಿಸ್ಟ್ ಮಾಡಿತ್ತು. ಒಂದಷ್ಟು ಕಾಲಾವಕಾಶ ಬೇಕೆಂದು ಕೆಲವು ಅರ್ಜಿದಾರರು ವಾದಿಸಿದ್ದರು. ಅವರನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್ ತ್ವರಿತ ವಿಚಾರಣೆ ಬೇಕು ಅನ್ನುವವರು ನೀವೆ, ಈಗ ಮುಂದೂಡಿ ಎಂದು ಕೇಳುವವರು ನೀವೆ ಎಂದು ತರಾಟೆಗೆ ತೆಗೆದುಕೊಂಡಿದೆ.

ಅರ್ಜಿದಾದರರು ಕರ್ನಾಟಕ ಸೇರಿದಂತೆ ಬಹಳ ದೂರದಿಂದ ಬರಬೇಕಿರುವುದರಿಂದ ಕನಿಷ್ಟ ಎರಡು ವಾರ ಕಾಲಾವಕಾಶ ಬೇಕೆಂದು ಕೇಳಿದರು. ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು  ಒಂದು ವಾರ ಮಾತ್ರ ಸಮಯ ನೀಡಿ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 05ಕ್ಕೆ ನಿಗಧಿ ಪಡಿಸಿದೆ.

ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಲ್ಲಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವ ಮೂಲಕ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು. ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...