Homeಮುಖಪುಟ2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

- Advertisement -
- Advertisement -

2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ ಬೇರೆ ವಿಧಾನಗಳ ಮೂಲಕ ತರಂಗಾಂತರ ಹಂಚಿಕೆ ಮಾಡುವುದನ್ನು ತೀರ್ಪು ತಡೆಯುತ್ತದೆಯೇ? ಎಂದು ಕೇಂದ್ರ ಸರ್ಕಾರ ಸ್ಪಷ್ಟೀಕರಣ ಕೋರಿತ್ತು.

ಸ್ಪಷ್ಟೀಕರಣ ಪಡೆಯುವ ನೆಪದಲ್ಲಿ 2012ರ ತೀರ್ಪಿನ ‘ಮರುಪರಿಶೀಲನೆಗೆ’ ಕೋರಲಾಗಿದೆ ಎಂದು ತಿಳಿಸಿದ ರಿಜಿಸ್ಟ್ರಾರ್, ಅರ್ಜಿ ‘ತಪ್ಪು ಕಲ್ಪನೆ’ಯಿಂದ ಕೂಡಿದೆ ಎಂದು ಹೇಳುವ ಮೂಲಕ ತಿರಸ್ಕರಿಸಿದ್ದಾರೆ. “ಅರ್ಜಿ ಸಲ್ಲಿಸಿದ್ದಕ್ಕೆ ಯಾವುದೇ ಸಮಂಜಸವಾದ ಕಾರಣಗಳಿಲ್ಲ. ಮನರಂಜನೆಗಾಗಿ ಸಲ್ಲಿಸಿದಂತಿದೆ” ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿಯಮಗಳು, 2013 ರ ಆದೇಶ XVನಿಯಮ 5ರ ನಿಬಂಧನೆಗಳ ಪ್ರಕಾರ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ.

ಈ ನಿಬಂಧನೆಯ ಪ್ರಕಾರ, ರಿಜಿಸ್ಟ್ರಾರ್ ಯಾವುದೇ ಸಮಂಜಸವಾದ ಕಾರಣ ಬಹಿರಂಗಪಡಿಸದ ಅಥವಾ ಕ್ಷುಲ್ಲಕ ವಿಷಯವನ್ನು ಒಳಗೊಂಡಿರುವ ಆಧಾರದ ಮೇಲೆ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಬಹುದು. ಆದರೆ, ಅರ್ಜಿದಾರರು ರಿಜಿಸ್ಟ್ರಾರ್‌ ಅರ್ಜಿ ತಿರಸ್ಕರಿಸಿದ ಹದಿನೈದು ದಿನಗಳೊಳಗೆ ಮೇಲ್ಮನವಿ ಸಲ್ಲಿಸಬಹುದು. ಆದ್ದರಿಂದ, ರಿಜಿಸ್ಟ್ರಾರ್ ಅರ್ಜಿ ತಿರಸ್ಕಸಿರುವುದರ ವಿರುದ್ಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೇಂದ್ರಕ್ಕೆ ಅವಕಾಶವಿದೆ.

ಅರ್ಜಿ ಸಲ್ಲಿಸುವಲ್ಲಿ ಸುಮಾರು 12 ವರ್ಷಗಳ ಸಮಯದ ಅಂತರವನ್ನು ಕೂಡ ರಿಜಿಸ್ಟ್ರಾರ್ ಉಲ್ಲೇಖಿಸಿದ್ದಾರೆ. ಮೇ 10, 2012 ರಂದು ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಸ್ವತಃ ಕೇಂದ್ರ ಸರ್ಕಾರ ಹಿಂಪಡೆದಿರುವುದನ್ನು ಗಮನಕ್ಕೆ ತಂದಿದ್ದಾರೆ.

ಈ ಹಿಂದೆ ಸಲ್ಲಿಸಿದಂತೆಯೇ, ಸುದೀರ್ಘ ಸಮಯದ ಬಳಿಕ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಮೂಲಕ ಮುಕ್ತ ನ್ಯಾಯಾಲಯದಲ್ಲಿ ಪ್ರಕರಣದ ಮರು ವಿಚಾರಣೆಗೆ ಅರ್ಜಿದಾರರು ಪ್ರಯತ್ನಿಸಿದ್ದಾರೆ ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ.

ಫೆಬ್ರವರಿ 2012ರಲ್ಲಿ ನೀಡಿದ 2ಜಿ ತರಂಗಾತರ ಹಂಚಿಕೆ ಪ್ರಕರಣದ ತೀರ್ಪಿನಲ್ಲಿ (ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ) ಸುಪ್ರೀಂ ಕೋರ್ಟ್ 2ಜಿ ತರಂಗಾಂತರ ಹಂಚಿಕೆ ವೇಳೆ ಮೊದಲು ಬಂದವರಿಗೆ ಮೊದಲ ಆದ್ಯತೆ (ಎಫ್‌ಸಿಎಫ್‌ಎಸ್) ಎಂಬ ನಿಯಮವನ್ನು ಬದಿಗಿರಿಸಿತ್ತು. ತರಂಗಾಂತರದಂತಹ ಸಾರ್ವಜನಿಕ ಸಂಪನ್ಮೂಲಗಳ ಹಂಚಿಕೆಗೆ ಸಾರ್ವಜನಿಕ ಹರಾಜು ಆದ್ಯತೆಯ ವಿಧಾನವಾಗಿರಬೇಕು ಎಂದು ಹೇಳಿತ್ತು.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಭದ್ರತೆ, ಸುರಕ್ಷತೆ, ವಿಪತ್ತು ಸೇರಿದಂತೆ ಸಾರ್ವಭೌಮ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ವಾಣಿಜ್ಯೇತರ ಉದ್ದೇಶಗಳಿಗಾಗಿ ಹರಾಜಿನಿಂದ ವಿನಾಯಿತಿ ಕೋರಿತ್ತು.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...