Homeಮುಖಪುಟಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ

ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ

- Advertisement -
- Advertisement -

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದಾಗಿನಿಂದ ಬಂಧನದಲ್ಲಿಯೇ ಇದ್ದಾರೆ.

ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಕೈಗೆತ್ತಿಕೊಂಡಿದ್ದು, ಆರರಿಂದ ಎಂಟು ತಿಂಗಳಲ್ಲಿ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ಸೂಚಿಸಿದೆ. ವಿಚಾರಣೆ ನಿಧಾನಗತಿಯಲ್ಲಿ ಮುಂದುವರಿದರೆ, ನಂತರದ ಹಂತದಲ್ಲಿ ಸಿಸೋಡಿಯಾ ಜಾಮೀನಿಗೆ ಮರು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯನ್ನು ತಿರುಚಲು ಹಣ ಪಾವತಿಸಲಾಗಿದೆ ಎಂದು ಹೇಳಲಾದ ಲಂಚವು ಪೂರ್ವಾಪೇಕ್ಷಿತ ಅಪರಾಧದ ಭಾಗವಾಗಿಲ್ಲದಿದ್ದರೆ, ಸಿಸೋಡಿಯಾ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಾಬೀತುಪಡಿಸುವುದು ಕಷ್ಟ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದೆ.

”ಲಂಚ ನೀಡಲಾಗುತ್ತಿದೆ ಎಂಬ ಊಹೆಯ ಆಧಾರದ ಮೇಲೆ ಪ್ರಕರಣವನ್ನು ಮುಂದುವರಿಸಲು ಸಾಧ್ಯವಿಲ್ಲ” ಎಂದು ಅದು ಸಿಬಿಐಗೆ ತಿಳಿಸಿದೆ.

ಸಿಬಿಐನಿಂದ ಬಂಧನಕ್ಕೊಳಗಾದ ನಂತರ, ಇಡಿ ಅಧಿಕಾರಿಗಳು ತಿಹಾರ್ ಜೈಲಿನಲ್ಲಿ ಸಿಸೋಡಿಯಾ ಅವರನ್ನು  ಪ್ರಶ್ನಿಸಿದ್ದರು. ಆ ನಂತರ ಇಡಿ ಅಧಿಕಾರಿಗಳು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರನ್ನು ತಮ್ಮ ಕಸ್ಟಡಿಗೆ ತೆಗೆದುಕೊಂಡರು.

ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ-ಲಾಂಡರಿಂಗ್ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ಈ ಹಿಂದೆ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು, ಅವರ ವಿರುದ್ಧದ ಆರೋಪಗಳು ಬಹಳ ಗಂಭೀರವಾಗಿದೆ ಎಂದು ಹೇಳಿದ್ದರು.

ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಸಿಸೋಡಿಯಾ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಹೊಂದಿರುವ ‘ಉನ್ನತ’ ವ್ಯಕ್ತಿ ಎಂದು ಮೇ 30 ರಂದು ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ಇದನ್ನೂ ಓದಿ: ಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...