Homeಮುಖಪುಟಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

- Advertisement -
- Advertisement -

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ ಆಯ್ಕೆಯಾದ ಮುಖ್ಯಮಂತ್ರಿಯೊಬ್ಬರ ಅಧಿಕೃತ ಚಟುವಟಿಕೆಗಳನ್ನು ನಿಯಂತ್ರಿಸಲು ನ್ಯಾಯಾಂಗ ಮುಂದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, “ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಕೋರ್ಟ್ ಅನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಬಾರದು” ಎಂದು ತರಾಟೆಗೆ ತೆಗೆದುಕೊಂಡಿತಲ್ಲದೆ, ನ್ಯಾಯಾಲಯದ ಆಚೆಗಿನ ರಾಜಕೀಯ ಆಖಾಡದಲ್ಲಿಯೇ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವಂತೆ ವಿರೋಧ ಪಕ್ಷವಾದ ಡಿಎಂಕೆ ಗೆ ಸಲಹೆ ನೀಡಿದೆ.

ಕರೂರ್ ದುರಂತದಲ್ಲಿ ಮೃತಪಟ್ಟ 41 ಜನರ ಕುಟುಂಬಗಳನ್ನು ಖುದ್ದಾಗಿ ಭೇಟಿ ಮಾಡಿ, ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡುವುದಾಗಿ ಮುಖ್ಯಮಂತ್ರಿ ವಿಜಯ್ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಈ ಅರ್ಜಿಯನ್ನು ಸಲ್ಲಿಸಿತ್ತು.

ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಡಿಎಂಕೆ ಅರ್ಜಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಪೀಠವು, ಮುಖ್ಯಮಂತ್ರಿಯವರ ಅಧಿಕೃತ ಕರ್ತವ್ಯ ಮತ್ತು ಪ್ರವಾಸಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದು ಹೇಳಿದೆ. ಅಲ್ಲದೆ, ನ್ಯಾಯಾಲಯವನ್ನು ರಾಜಕೀಯ ಜಟಾಪಟಿಯ ತಾಣವಾಗಿ ಪರಿವರ್ತಿಸಬೇಡಿ ಎಂದು ಡಿಎಂಕೆ ಪರ ವಕೀಲರಿಗೆ ಕಿವಿಮಾತು ಹೇಳಿದೆ. ದುರಂತಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕರು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದರೆ, ಅದಕ್ಕೆ ರಾಜಕೀಯವಾಗಿಯೇ ತಿರುಗೇಟು ನೀಡಲು ಡಿಎಂಕೆ ಮುಕ್ತವಾಗಿದೆ. ಅದನ್ನು ಬಿಟ್ಟು ನ್ಯಾಯಾಂಗದ ಹಸ್ತಕ್ಷೇಪ ಕೋರುವುದು ಸರಿಯಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಟಿವಿಕೆ ಪಕ್ಷದ ಬೃಹತ್ ರ‍್ಯಾಲಿ ವೇಳೆ ನಡೆದ ಭೀಕರ ಅಪಘಾತದಲ್ಲಿ 41 ಜನರು ಜೀವ ಕಳೆದುಕೊಂಡಿದ್ದರು. ಈ ದುರಂತದ ತನಿಖೆ ಪ್ರಸ್ತುತ ನಡೆಯುತ್ತಿದ್ದು, ಈಗ ಮುಖ್ಯಮಂತ್ರಿ ವಿಜಯ್ ಅವರು ಅಲ್ಲಿಗೆ ಭೇಟಿ ನೀಡಿದರೆ ತನಿಖೆಯ ಹಾದಿ ತಪ್ಪಬಹುದು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು ಎಂದು ಡಿಎಂಕೆ ತನ್ನ ಅರ್ಜಿಯಲ್ಲಿ ವಾದಿಸಿತ್ತು. ಹೀಗಾಗಿ ಮುಖ್ಯಮಂತ್ರಿಯವರು ಕರೂರ್‌ಗೆ ಭೇಟಿ ನೀಡಿ ಪರಿಹಾರ ವಿತರಿಸುವ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಕೋರಿತ್ತು. ಆದರೆ, ಇಂತಹ ವಿಷಯಗಳಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವ ಅಗತ್ಯವೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ನ್ಯಾಯಾಲಯದಿಂದ ಹಸಿರು ನಿಶಾನೆ ಸಿಕ್ಕಿರುವುದರಿಂದ ಮುಖ್ಯಮಂತ್ರಿ ವಿಜಯ್ ಅವರು ನಿಗದಿಯಂತೆ ಕರೂರ್‌ಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ, ದುರಂತದಲ್ಲಿ ಮಡಿದವರ ಪ್ರತಿ ಕುಟುಂಬಕ್ಕೆ ತಲಾ ₹10 ಲಕ್ಷ ರೂಪಾಯಿ ಪರಿಹಾರ ಧನ ವಿತರಿಸಲಾಗುವುದು. ಇದರೊಂದಿಗೆ ಸಂತ್ರಸ್ತ ಕುಟುಂಬದ ಒಬ್ಬರಿಗೆ ಅರ್ಹತೆಗೆ ತಕ್ಕಂತೆ ಸರ್ಕಾರಿ ಉದ್ಯೋಗ ನೀಡುವ ಮಹತ್ವದ ಪರಿಹಾರ ಯೋಜನೆಗೂ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...