Homeಮುಖಪುಟನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನಕ್ಕೆ ಒಪ್ಪಿಸುವ ತನ್ನ ಆದೇಶವನ್ನು ಹಿಂಪಡೆಯುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನವ್ಲಾಖಾ ಅವರ ಗೃಹಬಂಧನದ ಆದೇಶವನ್ನು ಹಿಂಪಡೆಯಲು ಕೋರಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಆರ್ಟಿಕಲ್ 14 ಎಲ್ಲರೂ ಸಮಾನರು ಎಂದು ಹೇಳುತ್ತಿದ್ದರೂ ಕೆಲವರು ಹೆಚ್ಚು ಸಮಾನರು ಎಂಬ ಸಂದೇಶವು ಹೊರಹೋಗುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹಬಂಧನದ ಆದೇಶ ನೀಡಿದ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಬಯಸುವ ಎಲ್ಲಾ ಷರತ್ತುಗಳನ್ನು ಇಲ್ಲಿ ಸೇರಿಸಲಾಗಿದೆ. ಆ ಅರ್ಥದಲ್ಲಿ ಇದು ಒಪ್ಪಿಗೆಯ ಆದೇಶವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಎಎಸ್‌ಜಿ ರಾಜು, “ಇದು ಒಪ್ಪಿತ ಆದೇಶವಲ್ಲ” ಎಂದು ವಾದಿಸಿದ್ದಾರೆ.

ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿರುವ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನವೆಂಬರ್ 10 ರಂದು ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ ನವ್ಲಾಖಾ ಅವರನ್ನು ಮುಂಬೈ ಸಮೀಪದ ತಲೋಜಾ ಜೈಲಿನಿಂದ ಸ್ಥಳಾಂತರಿಸಿರಲಿಲ್ಲ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಆರೋಪ ಎದುರಿಸುತ್ತಿರುವ ನವ್ಲಾಖಾ ಅವರು, ಮುಂಬೈನಲ್ಲಿ ತನ್ನ ಸಹೋದರಿ ಮೃದುಲಾ ಕೊಠಾರಿಯವರೊಂದಿಗೆ ಇರುವುದಾಗಿ ಆರಂಭದಲ್ಲಿ ಹೇಳಿದ್ದರು. ಆದರೆ ನವ್ಲಾಖಾ ಅವರು ಸಲ್ಲಿಸಿದ ವೈದ್ಯಕೀಯ ವರದಿಗೆ ಸಹಿ ಹಾಕಿರುವ ವೈದ್ಯರಲ್ಲಿ ಮೃದುಲಾ ಅವರ ಪತಿಯೂ ಇದ್ದಾರೆ ಎಂದು ಎನ್ಐಎ ಆಕ್ಷೇಪ ಎತ್ತಿತ್ತು. ಇದರ ನಂತರ, ನವ್ಲಾಖಾ ಅವರು ತಮ್ಮ ಪಾಲುದಾರರಾದ ಸಾಹ್ಬಾ ಹುಸೇನ್ ಅವರೊಂದಿಗೆ ಇರುವುದಾಗಿ ಹೇಳಿದರು. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ಪ್ರಕರಣವು ಡಿಸೆಂಬರ್ 31, 2017ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದೆ. ಈ ಭಾಷಣಗಳು ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದವು ಎಂದು ಪೊಲೀಸರು ಆರೋಪಿಸಿದ್ದಾರೆ.

ನವ್ಲಾಖಾ ಅವರ ಆರೋಗ್ಯದ ದೃಷ್ಟಿಯಿಂದ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಅವರು ಈಗಾಗಲೇ ನ್ಯಾಯಾಲಯಕ್ಕೆ ಒದಗಿಸಿದ ವಿಳಾಸದಲ್ಲಿ ಮುಂಬೈನಲ್ಲಿ ಇರುತ್ತಾರೆ ಎಂದು ಅದು ನಿರ್ದೇಶಿಸಿದೆ. ಅವರನ್ನು ಅಲ್ಲಿಗೆ ಸ್ಥಳಾಂತರಿಸುವ ಮೊದಲು ಆವರಣವನ್ನು ಪರಿಶೀಲಿಸಲು ಎನ್‌ಐಎಗೆ ಅವಕಾಶ ಮಾಡಿಕೊಟ್ಟಿತು. ಸಿಸಿಟಿವಿ ಕಣ್ಗಾವಲು ಇರಲಿದೆ. ಫೋನ್ ಬಳಕೆಗೆ ನಿರ್ಬಂಧವಿದ್ದು, ಇಂಟರ್ನೆಟ್‌ ಬಳಸಬಾರದು ಎಂದು ಸೂಚಿಸಲಾಗಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿತ್ತು. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿತ್ತು.

ಇದನ್ನೂ ಓದಿರಿ: ರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಎನ್‌ಐಎ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, 70 ವರ್ಷ ವಯಸ್ಸಿನ ಗೌತಮ್ ನವ್ಲಾಖಾ ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಲು ಸಹಕಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...