Homeಮುಖಪುಟಕೌಶಲ್ಯಾಭಿವೃದ್ಧಿ ಹಗರಣ: ಎಫ್ಐಆರ್ ರದ್ದು ಕೋರಿ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಕೌಶಲ್ಯಾಭಿವೃದ್ಧಿ ಹಗರಣ: ಎಫ್ಐಆರ್ ರದ್ದು ಕೋರಿ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಕೌಶಲ್ಯ ಅಭಿವೃದ್ಧಿ ಯೋಜನೆ ಹಗರಣ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಾದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರಿದ್ದ ಪೀಠವು, ಮ್ಯಾಜಿಸ್ಟ್ರೇಟ್ ಹೊರಡಿಸಿದ ರಿಮಾಂಡ್ ಆದೇಶ ಮತ್ತು ರದ್ದತಿ ಅರ್ಜಿಯನ್ನು ವಜಾಗೊಳಿಸಿದ ಆಂಧ್ರ ಪ್ರದೇಶ ಹೈಕೋರ್ಟ್ ನಿರ್ಧಾರವನ್ನು ಎತ್ತಿಹಿಡಿದಿದೆ.

ಆದರೆ, ಸಾರ್ವಜನಿಕ ಸೇವಕರನ್ನು ಅವರ ಅಧಿಕೃತ ಕಾರ್ಯ ಅಥವಾ ಕರ್ತವ್ಯಗಳ ನಿರ್ವಹಣೆಯಲ್ಲಿ ಮಾಡಲಾದ ಕೆಲಸಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡಿಸುವಾಗ ಸರ್ಕಾರದ ಪೂರ್ವಾನುಮತಿ ಪಡೆಯುವುದು ಅಗತ್ಯ ಎಂಬ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ವ್ಯಾಖ್ಯಾನದ ಬಗ್ಗೆ ಇಬ್ಬರೂ ನ್ಯಾಯಾಮೂರ್ತಿಗಳು ಭಿನ್ನ ತೀರ್ಪು ನೀಡಿದ್ದಾರೆ.

ಸೆಕ್ಷನ್ 17ಎ ಅಡಿಯಲ್ಲಿ ಪೂರ್ವಾನುಮತಿ ಕಡ್ಡಾಯ ಎನ್ನುವುದನ್ನು ಪಾಲಿಸುವುದು ಅವಶ್ಯಕವಾಗಿದ್ದು, ಸೆಕ್ಷನ್ 17ಎ ಸೇರ್ಪಡೆಯಾದ 2018ಕ್ಕಿಂತ ಮುಂಚಿನ ಪ್ರಕರಣಗಳಿಗೆ ಕೂಡ ಅನುಮತಿ ಪಡೆಯುವುದು ಅಗತ್ಯ ಎಂದು ನ್ಯಾಯಮೂರ್ತಿ ಅನಿರುದ್ಧ ಬೋಸ್ ಹೇಳಿದ್ದಾರೆ.

2018ರಲ್ಲಿ ಸೇರಿಸಲಾದ ಸೆಕ್ಷನ್ 17ಎಯ ಅನ್ವಯಿಸುವಿಕೆ ಭವಿಷ್ಯವರ್ತಿಯಾಗಿದ್ದು, ಅಪ್ರಾಮಾಣಿಕ ಸಾರ್ವಜನಿಕ ಸೇವಕರನ್ನು ರಕ್ಷಿಸುವುದಕ್ಕೆ ಇದನ್ನು ಬಳಸುವಂತಿಲ್ಲ ಎಂದು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ತಿಳಿಸಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಹೋರಾಡುವುದು ಈ ಕಾಯಿದೆಯ ಉದ್ದೇಶವಾಗಿದ್ದು, ಸಾರ್ವಜನಿಕ ಹುದ್ದೆಯಲ್ಲಿರುವ ಪ್ರಾಮಾಣಿಕರನ್ನು ಕಿರುಕುಳದಿಂದ ರಕ್ಷಿಸುವುದು ಸೆಕ್ಷನ್ 17ಎಯ ಗುರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಷನ್ 17ಎ ವ್ಯಾಖ್ಯಾನದ ವಿಚಾರವಾಗಿ ಇಬ್ಬರು ನ್ಯಾಯಮೂರ್ತಿಗಳು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆ, ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಕೌಶಲ್ಯಾಭಿವೃದ್ಧಿ ಯೋಜನೆಗಾಗಿ ಮೀಸಲಿಟ್ಟ ಹಣವನ್ನು ನಕಲಿ ಬಿಲ್‌ ಸೃಷ್ಟಿಸಿ ಬೇನಾಮಿ ಕಂಪೆನಿಗಳಿಗೆ ವರ್ಗಾಯಿಸಿದ ಆರೋಪ ಚಂದ್ರಬಾಬು ನಾಯ್ದು ಮೇಲಿದೆ. ಪ್ರಕರಣ ಸಂಬಂಧ ಈ ಹಿಂದೆ ಚಂದ್ರಬಾಬು ನಾಯ್ದು ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಅವರು ಇತ್ತೀಚೆಗೆ ಬಿಡುಗಡೆಯಾಗಿದ್ದರು. ಆಂಧ್ರ ಪ್ರದೇಶ ಹೈಕೋರ್ಟ್‌ ನೀಡಿದ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇದೆ.

ಇದನ್ನೂ ಓದಿ : ಮೋದಿ ಪದವಿ ವಿವಾದ: ಕೇಜ್ರಿವಾಲ್, ಸಂಜಯ್ ಸಿಂಗ್‌ಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...