Homeಮುಖಪುಟಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ ‘ಮದರ್ ಮೇರಿ ಕಮ್ಸ್ ಟು ಮಿ’ ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು ಪ್ರಚಾರ ಮಾಡಿಲ್ಲ ಅಥವಾ ಜಾಹೀರಾತು ಮಾಡಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು, “ನಿಜವಾದ ಸಾರ್ವಜನಿಕ ಕಾಳಜಿಯ ವಿಷಯಕ್ಕಿಂತ ಸ್ವಯಂ ಪ್ರಚಾರವನ್ನು ಗಳಿಸುವ ಪ್ರಯತ್ನ’ ಎಂದು ಪರಿಗಣಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಪುಸ್ತಕ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದೆ ವಜಾಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸವಾಲನ್ನು ಪರಿಗಣಿಸಿತು. ಪುಸ್ತಕದ ಮುಖಪುಟ ಚಿತ್ರವು ಅದನ್ನು ಸ್ವಇಚ್ಛೆಯಿಂದ ಖರೀದಿಸಿದ ಓದುಗರಿಗೆ ಮಾತ್ರ ಸೀಮಿತವಾಗಿರುವುದರಿಂದ ಮತ್ತು ಸಾರ್ವಜನಿಕ ಪ್ರಚಾರದ ಯಾವುದೇ ಅಂಶವನ್ನು ಹೊಂದಿರದ ಕಾರಣ, ಹೈಕೋರ್ಟ್‌ನ ಹಿಂದಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಆಧಾರವಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಆಗಸ್ಟ್ 28 ರಂದು ಪುಸ್ತಕ ಬಿಡುಗಡೆಯಾದ ನಂತರ, ವಕೀಲರೊಬ್ಬರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮುಖಪುಟದ ಫೋಟೋ 2003 ರ ಸಿಗರೇಟ್, ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಮತ್ತು 2008 ರ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿ, ಧೂಮಪಾನದ ಚಿತ್ರಣಗಳು ಗೋಚರಿಸುವ ಆರೋಗ್ಯ ಎಚ್ಚರಿಕೆಗಳನ್ನು ಹೊಂದಿರಬೇಕು ಎಂದು ಅರ್ಜಿ ಸಲ್ಲಿಸುವ ಮೂಲಕ ವಿವಾದ ಪ್ರಾರಂಭವಾಯಿತು.

ಮುಖಪುಟದಲ್ಲಿ, ತಂಬಾಕು ಬಳಕೆಯ ಕುರತ ಎಚ್ಚರಿಕೆಗಳ ಅನುಪಸ್ಥಿತಿಯು ಆ ಉತ್ಪನ್ನಗಳ ಪರೋಕ್ಷ ಜಾಹೀರಾತಿಗೆ ಸಮನಾಗಿರುತ್ತದೆ. ಆದ್ದರಿಂದ, ಧೂಮಪಾನ ಸಂಬಂಧಿತ ಪ್ರಚಾರವನ್ನು ತಡೆಯಲು ಉದ್ದೇಶಿಸಲಾದ ಶಾಸನಬದ್ಧ ಚೌಕಟ್ಟನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದರು.

ಅರ್ಜಿದಾರರು, ‘ಪೆಂಗ್ವಿನ್ ಇಂಡಿಯಾ’ದಿಂದ ಹಿಂಬದಿಯ ಮುಖಪುಟದಲ್ಲಿ ಮುದ್ರಿಸಲಾದ ಹಕ್ಕು ನಿರಾಕರಣೆಯ ಉಲ್ಲೇಖ ಸಂಬಂಧಿತ ಸಂಗತಿಗಳನ್ನು ನಿರ್ಲಕ್ಷ್ಯಿಸಿದ್ದರಿಂದ, ಸಾರ್ವಜನಿಕ ಹಿತಾಸಕ್ತಿಗಿಂತ ವೈಯಕ್ತಿಕ ಪ್ರಚಾರದಿಂದ ಈ ಅರ್ಜಿಯು ಪ್ರೇರಿತವಾಗಿದೆ ಎಂದು ಗಮನಿಸಿ, ಅಕ್ಟೋಬರ್ 13 ರಂದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.

ಅರುಂತಿ ರಾಯ್ ಅವರು ಪ್ರಸಿದ್ಧ ಸಾಹಿತಿಯಾಗಿದ್ದು, ಅವರ ಬರವಣಿಗೆ ಅಥವಾ ಪ್ರಕಾಶಕರ ನಡವಳಿಕೆಯು ಧೂಮಪಾನವನ್ನು ಪ್ರೋತ್ಸಾಹಿಸುವ ಯಾವುದೇ ಪ್ರಯತ್ನವನ್ನು ಸೂಚಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ಅಥವಾ ಹೊಸ ಧೂಮಪಾನಿಗಳನ್ನು ಆಕರ್ಷಿಸುವ ದೊಡ್ಡ ಪ್ರಮಾಣದ ಹೊರಾಂಗಣ ಜಾಹೀರಾತುಗಳ ಮೂಲಕ ಪುಸ್ತಕವನ್ನು ಮಾರಾಟ ಮಾಡಲಾಗುತ್ತಿಲ್ಲ ಎಂದು ಒತ್ತಿ ಹೇಳಿದೆ. ಏಕೆಂದರೆ, ಪುಸ್ತಕದ ಮುಖಪುಟವನ್ನು ಅದರ ವಿಷಯ ಮತ್ತು ಲೇಖಕರ ಖ್ಯಾತಿಯ ಆಧಾರದ ಮೇಲೆ ಖರೀದಿಸಲು ಆಯ್ಕೆ ಮಾಡಿದವರು ಮಾತ್ರ ವೀಕ್ಷಿಸಬಹುದು ಎಂದು ಹೇಳಿದೆ.

ಪಿಐಎಲ್‌ನಲ್ಲಿ ಯಾವುದೇ ಸತ್ವವಿಲ್ಲ, ಹೈಕೋರ್ಟ್ ಅದನ್ನು ವಜಾಗೊಳಿಸುವಲ್ಲಿ ಸರಿಯಾಗಿ ಕಾರ್ಯನಿರ್ವಹಿಸಿದೆ ಎಂದು ತೀರ್ಮಾನಿಸಿದ ಸುಪ್ರೀಂ ಕೋರ್ಟ್, ನಾವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಕಂಡುಕೊಂಡಿತು. ಹೈಕೋರ್ಟ್‌ನ ಆದೇಶವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...