Homeಮುಖಪುಟಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಹೇಳಿಕೆ: ಸಚಿವ ವಿಜಯ್‌ ಶಾ ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ...

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಹೇಳಿಕೆ: ಸಚಿವ ವಿಜಯ್‌ ಶಾ ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂದು ಹೇಳಿದ್ದ ಮಧ್ಯ ಪ್ರದೇಶದ ಬಿಜೆಪಿ ನಾಯಕ ಕುನ್ವರ್ ವಿಜಯ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಕೋರಿ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಆದರೆ, ನ್ಯಾಯಾಲಯವು ತನ್ನ ಆದೇಶದ ಮೇರೆಗೆ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಜಯಾ ಠಾಕೂರ್ ಅವರು ತನ್ನ ಅರ್ಜಿಯಲ್ಲಿ ಎತ್ತಿ ತೋರಿಸಿರುವ ಅಂಶಗಳನ್ನು ಪರಿಶೀಲಿಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಜಯಾ ಠಾಕೂರ್ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು “ನಮ್ಮ ಮುಂದೆ ಈ ರೀತಿಯ ಅರ್ಜಿಯನ್ನು ಸಲ್ಲಿಸಬೇಡಿ” ಎಂದು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲರಿಗೆ ಹೇಳಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ, ಸಂಬಂಧಿತ ವಿಷಯಗಳು ಈಗಾಗಲೇ ನ್ಯಾಯಾಲಯದ ಮುಂದೆ ಬಾಕಿ ಇರುವುದರಿಂದ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ವಿವರಿಸಿದರು. ಅಲ್ಲದೆ, ಅವರು ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಿ, ಸೂಕ್ತ ವೇದಿಕೆಯನ್ನು ಸಂಪರ್ಕಿಸಲು ಅವಕಾಶ ಕೋರಿದರು.

ಅದರಂತೆ, ಪೀಠವು ಪ್ರಕರಣವನ್ನು ಇತ್ಯರ್ಥಪಡಿಸಿತು. “ಪರಿಹಾರ ಏನು ಮತ್ತು ನೀವು ಎಲ್ಲಿಗೆ ಹೋಗಬೇಕು ಎಂಬುವುದು ನಿಮಗೆ ಚೆನ್ನಾಗಿ ತಿಳಿದಿದೆ” ಎಂದು ನ್ಯಾಯಮೂರ್ತಿ ಕಾಂತ್ ಹಿರಿಯ ವಕೀಲರಿಗೆ ಹೇಳಿದರು.

ಮುಂದುವರಿದು, ಅರ್ಜಿಯಲ್ಲಿ ಉಲ್ಲೇಖಿಸಲಾದ ಶಾ ಒಳಗೊಂಡ ಕೆಲವು ಹಿಂದಿನ ಪ್ರಕರಣಗಳನ್ನು ಪರಿಶೀಲಿಸುವಂತೆ ಪೀಠವು ಎಸ್‌ಐಟಿಗೆ ಸೂಚಿಸಿತು. “ಈ ಅರ್ಜಿಯನ್ನು ನಾವು ಪರಿಗಣಿಸುತ್ತಿಲ್ಲ, ಆದರೆ ಅರ್ಜಿಯಲ್ಲಿ ಬಹಿರಂಗಪಡಿಸಿರುವ ಈ ಸಂಭಾವಿತ ವ್ಯಕ್ತಿಯ ಕೆಲವು ಹಿಂದಿನ ಪ್ರಕರಣಗಳ ಬಗ್ಗೆ ಕೂಡ ಎಸ್‌ಐಟಿ ಪರಿಶೀಲಿಸಬೇಕು. ಎಸ್‌ಐಟಿ ವರದಿಯು ಸಮಗ್ರವಾಗಿರಬೇಕು. ಇಲ್ಲದಿದ್ದರೆ ನಾವು ವಿಲೇವಾರಿ ಮಾಡುತ್ತೇವೆ” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದದನ್ನು ಪ್ರಶ್ನಿಸಿ ಸಚಿವ ಶಾ ಸಲ್ಲಿಸಿರುವ ಎರಡು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಈ ನಡುವೆ ಸಂವಿಧಾನದ 164(3) ನೇ ವಿಧಿಯ ಅಡಿಯಲ್ಲಿ ಸ್ವೀಕರಿಸಿದ ಪ್ರಮಾಣವಚನವನ್ನು ಉಲ್ಲಂಘಿಸಿದ ಕಾರಣ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕುವಂತೆ ಕೋರಿ ಜಯಾ ಠಾಕೂರ್ ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಪ್ರಸ್ತುತ ಅರ್ಜಿಯನ್ನು ಸಲ್ಲಿಸಿದ್ದಾರೆ.

ಶಾ ಅವರ ಹೇಳಿಕೆಯು ಮುಸ್ಲಿಂ ಸಮುದಾಯದವರಲ್ಲಿ ಪ್ರತ್ಯೇಕತಾವಾದಿ ಭಾವನೆಗಳನ್ನು ಹುಟ್ಟು ಹಾಕುತ್ತದೆ ಮತ್ತು ಭಾರತದ ಏಕತೆಗೆ ಧಕ್ಕೆ ತರುತ್ತದೆ ಎಂದು ಜಯಾ ಠಾಕೂರ್ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

Courtesy : livelaw.in

ಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...