Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಮತ್ತು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ನಡುವಿನ ಎಲ್ಲಾ ಮತಗಳನ್ನು (ಶೇ.100) ತಾಳೆ ಹಾಕಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಇಂದು (ಏ.18) ತೀರ್ಪು ಕಾಯ್ದಿರಿಸಿದೆ.

ಸುದೀರ್ಘ ವಿಚಾರಣೆಯ ಬಳಿಕ, ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಎಡಿಆರ್) ಮತ್ತು ಇತರರು ಸಲ್ಲಿಸಿದ ಅರ್ಜಿಗಳ ತೀರ್ಪನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಕಾಯ್ದಿರಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಪೀಠವು ಇವಿಎಂಗಳ ಭದ್ರತಾ ವೈಶಿಷ್ಟ್ಯಗಳನ್ನು ಅರ್ಥಮಾಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಧಿಕಾರಿಯೊಂದಿಗೆ ಚರ್ಚೆ ನಡೆಸಿದೆ.

ಇಂದು, ಎರಡನೇ ದಿನದ ವಿಚಾರಣೆಯಲ್ಲಿ, ವಕೀಲ ಪ್ರಶಾಂತ್ ಭೂಷಣ್ ಅವರು ಮತದಾನದ ಸಮಯದಲ್ಲಿ ವಿವಿಪ್ಯಾಟ್ ಮಸೂರದಲ್ಲಿ ಸಂಪೂರ್ಣ ಲೈಟ್ ಇರುವಂತೆ ಮಾಡಲು ಮನವಿ ಮಾಡಿದರು. ಪ್ರಸ್ತುತ ಏಳು ಸೆಕೆಂಡ್‌ಗಳ ಕಾಲ ಮಾತ್ರ ವಿವಿಪ್ಯಾಟ್ ಮಸೂರದಲ್ಲಿ ಲೈಟ್ ಇರುತ್ತವೆ. ಮತದಾನ ಪ್ರಕ್ರಿಯೆ ಮುಗಿಯುವವರೆ ಲೈಟ್ ಇದ್ದರೆ, ಮತದಾರರಿಗೆ ಸ್ಲಿಪ್ ಕಟ್ಟಾಗಿ ಬೀಳುವುದು ನೋಡಬಹುದು ಎಂಬುವುದು ಪ್ರಶಾಂತ್ ಭೂಷಣ್ ಅವರ ವಾದ.

ಇನ್ನೋರ್ವ ವಕೀಲ ನಿಝಾಂ ಪಾಶಾ ಅವರು, ಮತದಾರರು ಭೌತಿಕವಾಗಿ ವಿವಿಪ್ಯಾಟ್ ಚೀಟಿ ತೆಗೆದುಕೊಂಡು ಮತಪೆಟ್ಟಿಗೆಯಲ್ಲಿ ಹಾಕಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು. ಇದು ಮತದಾರರ ಗೌಪ್ಯತೆಯನ್ನು ಉಲ್ಲಂಘಿಸುವುದಿಲ್ಲವೇ? ಎಂದು ನ್ಯಾಯಮೂರ್ತಿ ಖನ್ನಾ ಕೇಳಿದಾಗ, ಮತದಾನದ ಗೌಪ್ಯತೆಯ ಹೆಸರಿನಲ್ಲಿ ಮತದಾರರನ್ನು ಅವರ ಹಕ್ಕಿನಿಂದ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ವೇಳೆ, “ನೀವು ಬಯಸುತ್ತಿರುವ ಪ್ರಾಯೋಗಿಕ ಫಲಿತಾಂಶಗಳನ್ನು ನೀವು ಅರ್ಥಮಾಡಿಕೊಂಡಿದ್ದೀರಿ ಎಂದು ನಾನು ಭಾವಿಸುತ್ತೇನೆ” ಎಂದು ನ್ಯಾಯಮೂರ್ತಿ ಖನ್ನಾ ಪ್ರತಿಕ್ರಿಯಿಸಿದ್ದಾರೆ.

ಹಿರಿಯ ವಕೀಲ ಸಂಜಯ್ ಹೆಗ್ಡೆ, ವಿವಿಪ್ಯಾಟ್ ‘ಆಡಿಟ್’ಗೆ ಒತ್ತು ನೀಡಿದ್ದು, ಇವಿಎಂ ಮತಗಳ ಎಣಿಕೆಯ ನಂತರವೂ ‘ಆಡಿಟ್’ಗಾಗಿ ಎಲ್ಲಾ ವಿವಿಪ್ಯಾಟ್‌ಗಳನ್ನು ಎಣಿಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. 2019ರಲ್ಲಿ ಪ್ರತೀ ಕ್ಷೇತ್ರದ ಐದು ವಿವಿಪ್ಯಾಟ್‌ಗಳ ಮತ ಎಣಿಕೆ ಮಾಡಬೇಕು ಎಂಬ ಆದೇಶವನ್ನು ಪರಿಗಣಿಸದಂತೆ ಹೆಗ್ಡೆ ಮನವಿ ಮಾಡಿದರು. ವ್ಯವಸ್ಥೆಯಲ್ಲಿ ಮತದಾರರ ವಿಶ್ವಾಸವನ್ನು ಹೆಚ್ಚಿಸುವ ಯಾವುದೇ ಕ್ರಮವನ್ನು ಸ್ವಾಗತಿಸಬೇಕು ಎಂದಿದ್ದಾರೆ.

ವಿಚಾರಣೆ ವೇಳೆ, ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ಕುರಿತ ‘ಮನೋರಮಾ ಆನ್‌ಲೈನ್‌’ ಸುದ್ದಿಯನ್ನು ವಕೀಲ ಪ್ರಶಾಂತ್ ಭೂಷಣ್ ಉಲ್ಲೇಖಿಸಿದರು. ಈ ವೇಳೆ ನ್ಯಾಯಪೀಠ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಈ ಕುರಿತು ಪರಿಶೀಲಿಸುವಂತೆ ಸೂಚಿಸಿದೆ. ಮಧ್ಯಾಹ್ನ 2 ಗಂಟೆಗೆ ಪೀಠದ ಮುಂದೆ ಉತ್ತರಿಸಿದ ಚುನಾವಣಾ ಆಯೋಗದ ಅಧಿಕಾರಿಗಳು ಮನೋರಮಾ ವರದಿ ಸಂಪೂರ್ಣ ಸುಳ್ಳು ಎಂದು ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ.

ಇದನ್ನೂ ಓದಿ : ‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...