HomeUncategorizedಗೌರಿ ಲಂಕೇಶ್ ಹತ್ಯೆ ಆರೋಪಿ ವಿರುದ್ಧದ KCOCA ರದ್ದುಗೊಳಿಸುವ ಕುರಿತ ಆದೇಶ ಕಾಯ್ದಿರಿಸಿದ ಸುಪ್ರೀಂ

ಗೌರಿ ಲಂಕೇಶ್ ಹತ್ಯೆ ಆರೋಪಿ ವಿರುದ್ಧದ KCOCA ರದ್ದುಗೊಳಿಸುವ ಕುರಿತ ಆದೇಶ ಕಾಯ್ದಿರಿಸಿದ ಸುಪ್ರೀಂ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಆರೋಪಿಯ ವಿರುದ್ಧ ‘ಕಠಿಣ ಸೆಕ್ಷನ್’ ಅನ್ನು ರದ್ದುಗೊಳಿಸುವ ಕುರಿತ ತನ್ನ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ. ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

ಕವಿತಾ ಲಂಕೇಶ್‌ ಪರವಾಗಿ ಹಿರಿಯ ವಕೀಲ ಹುಜೀಫಾ ಅಹ್ಮದಿ ಅವರು ವಾದಿಸಿದ್ದರು. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಮತ್ತು ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರಿದ್ದ ನ್ಯಾಯಪೀಠವು ಉಭಯ ಕಕ್ಷಿದಾರರ ಪರ ವಾದವನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

ಗೌರಿ ಲಂಕೇಶ್‌‌ ಅವರ ಹತ್ಯೆಯ ಆರೋಪಿ ಮೋಹನ್ ನಾಯಕ್ ವಿರುದ್ಧದ KCOCA ಅಡಿಯಲ್ಲಿನ ಆರೋಪವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿತ್ತು.

ಮಂಗಳವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು, ಪ್ರಕರಣದ ಚಾರ್ಜ್‌ಶೀಟ್ ಅನ್ನು ಹೈಕೋರ್ಟ್ ವಿಶ್ಲೇಷಿಸದೆ, ಪ್ರಕರಣವನ್ನು ರದ್ದುಗೊಳಿಸಿದೆ. ಹೈಕೋರ್ಟ್ ಈ ವಿಷಯವನ್ನು ಲಘುವಾಗಿ ಪರಿಗಣಿಸಿದೆ ಎಂದು ಹೇಳಿದೆ.

ಸುಪ್ರೀಂಕೋರ್ಟ್‌‌ ಜೂನ್‌ನಲ್ಲಿ, ಕವಿತಾ ಅವರ ಮನವಿಯನ್ನು ತೀರ್ಮಾನಿಸುವವರೆಗೂ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಹೇಳಿ, ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿತ್ತು.

ಏಪ್ರಿಲ್ 2021 ರಲ್ಲಿ, ಹೈಕೋರ್ಟ್ ಬೆಂಗಳೂರು ಪೊಲೀಸ್ ಆಯುಕ್ತರ ವರದಿಯನ್ನು ಮತ್ತು ಪ್ರಕರಣದ ಪೂರಕ ಚಾರ್ಜ್ ಶೀಟ್ ಅನ್ನು ರದ್ದುಗೊಳಿಸಿತ್ತು. ಜೊತೆಗೆ ಮೋಹನ್‌ ನಾಯಕ್ ವಿರುದ್ಧದ KCOCA ಆರೋಪಗಳನ್ನು ಕೈಬಿಟ್ಟಿತ್ತು.

2017 ರ ಸೆಪ್ಟೆಂಬರ್ 05 ರಂದು ಗೌರಿ ಲಂಕೇಶ್‌ ಅವರನ್ನು ಅವರ ಮನೆಯ ಮುಂದೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಹತ್ಯೆಯನ್ನು ವಿರೋಧಿಸಿ ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...