Homeಮುಖಪುಟಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ ವರ್ಗೀಕರಣ ಮಾಡುವುದರ ಕಾನೂನುಬದ್ಧತೆ ಪ್ರಶ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಕುರಿತಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿತ್ತಲ್‌, ಮನೋಜ್ ಮಿಶ್ರಾ ಹಾಗೂ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿತು.

ವಿಚಾರಣೆ ವೇಳೆ ಸಿಜೆಐ ಚಂದ್ರಚೂಡ್ ಅವರು ಪರಿಶಿಷ್ಟ ಸಮುದಾಯಗಳ ‘ಉಪ-ವರ್ಗೀಕರಣ’ ಮತ್ತು ‘ಉಪ- ವಿಂಗಡೀಕರಣ’ ನಡುವಿನ ವ್ಯತ್ಯಾಸ ತಿಳಿದ್ದಾರೆ. ಮೀಸಲಾತಿ ಪ್ರಯೋಜನಗಳು ಹೆಚ್ಚು ಹಿಂದುಳಿದ ಗುಂಪುಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮೀಸಲಾತಿ ವರ್ಗದ ಸಮುದಾಯಗಳನ್ನು ಉಪ- ವಿಂಗಡಣೆ ಮಾಡಬೇಕಾಗಬಹುದು ಎಂದು ಸಿಜೆಐ ಹೇಳಿದ್ದಾರೆ.

ಅನುಚ್ಛೇದ 341 (ಪರಿಶಿಷ್ಟ ಜಾತಿಗಳನ್ನು ಅಧಿಸೂಚಿಸುವ ರಾಷ್ಟ್ರಪತಿಗಳ ಅಧಿಕಾರ; ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಸೇರಿಸುವ ಅಥವಾ ಹೊರಗಿಡುವ ಸಂಸತ್ತಿನ ಅಧಿಕಾರ) ರಾಜ್ಯಗಳು ಪರಿಶಿಷ್ಟ ಜಾತಿಗಳಲ್ಲಿ ಉಪ ಗುಂಪುಗಳನ್ನು ರಚಿಸುವುದನ್ನು ನಿರ್ಬಂಧಿಸುತ್ತದೆ ಎಂದು ವಾದಿಸಿದ ಹಿರಿಯ ವಕೀಲ ಮನೋಜ್ ಸ್ವರೂಪ್ ಅವರ ವಾದಗಳಿಗೆ ಪ್ರತಿಕ್ರಿಯೆಯಾಗಿ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಎಂಬುದು ಅಧಿಸೂಚಿತವಾದ ಗುಂಪಾಗಿದ್ದು ಮೀಸಲಾತಿ ಪ್ರಯೋಜನಗಳಿಗಾಗಿ ಅಧಿಸೂಚನೆ ಹೊರಡಿಸಿದ ನಂತರ ಏಕರೂಪದ ಗುಂಪಾಗುತ್ತದೆ ಎಂದು ಸ್ವರೂಪ್ ವಾದಿಸಿದ್ದಾರೆ. ಈ ಅಭಿಪ್ರಾಯದ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶಿಷ್ಟ ಜಾತಿಯನ್ನು ಒಂದು ಜಾತಿಯಾಗಿ ನೋಡಲಾಗದು ಎಂದು ಸಿಜೆಐ ಹೇಳಿದ್ದಾರೆ.

ವಿಧಿ 341 ಪರಿಶಿಷ್ಟ ಜಾತಿಗಳ ಪದನಾಮವನ್ನು ಮೀಸಲಾತಿಗೆ ತರುವ ವಿಚಾರವನ್ನು ಸಂಸತ್ತಿಗೆ (ಕೇಂದ್ರಕ್ಕೆ) ಬಿಟ್ಟಿದ್ದರೂ, (ರಾಜ್ಯಗಳು ಯಾವುದೇ ಹಿಂದುಳಿದ ವರ್ಗದ ನಾಗರಿಕರಿಗೆ ರಾಜ್ಯಗಳು ಉದ್ಯೋಗದಲ್ಲಿ ಮೀಸಲಾತಿ ನೀಡುವ) ವಿಧಿ 16 ಈಗಲೂ ರಾಜ್ಯಗಳಿಗೆ ಅನುವು ಮಾಡಿಕೊಡುವ ಪಾತ್ರ ನೀಡಿದೆ ಎಂದು ನ್ಯಾಯಾಲಯು ತಿಳಿಸಿದೆ.

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಸಮುದಯಾಗಳ ಒಳ ವಿಂಗಡಣೆ ಮಾಡದಂತೆ ರಾಜ್ಯಗಳನ್ನು ನಿರ್ಬಂಧಿಸಿದರೆ ಅದು ಅಸಮಾನತೆಗೆ ಕಾರಣವಾಗಬಹುದು ಎಂದು ನ್ಯಾ. ಗವಾಯಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

“ಒಳ ವಿಂಗಡಣೆಗೆ ವಿರೋಧ ಮಾಡುತ್ತಿರುವುದಾದರೂ ಏಕೆ? ಒಳ- ವಿಂಗಡೀಕರಣ ಆ ಜಾತಿಯೊಳಗಿನ ಇತರರಿಗೂ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಕೇವಲ ಒಂದು ವರ್ಗಕ್ಕೆ ಮಾತ್ರ ಪ್ರಯೋಜನಗಳು ಸಿಗುತ್ತವೆ” ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅಭಿಪ್ರಾಯಪಟ್ಟಿದ್ದಾರೆ.

ಪರಿಶಿಷ್ಟ ವರ್ಗದೊಳಗೂ ಒಂದು ವರ್ಗ ಇರಬಹುದು. ಹಾಗಿದ್ದ ಮಾತ್ರಕ್ಕೆ ಅದು ಕೃತಕ ವರ್ಗವೇನೂ ಅಲ್ಲ. ವಸ್ತುನಿಷ್ಠ ಮಾನದಂಡಗಳಿಂದ ಅದು ಒಂದು ವರ್ಗ ಎಂಬುದನ್ನು ಆ ಸಮುದಾಯ ಸಾಬೀತುಪಡಿಸಿದರೆ ಆಗ ತನ್ನ ಸಮುದಾಯದ ಪ್ರಬಲ ಜಾತಿಗಳ ಸೌಲಭ್ಯವನ್ನು ಅದು ಪಡೆಯುತ್ತದೆ ಎಂದು ಸಿಜೆಐ ತಿಳಿಸಿದರು.

ಪರಿಶಿಷ್ಟ ಸಮುದಾಯಗಳ ಒಳ ವರ್ಗೀಕರಣಕ್ಕಾಗಿ 2006ರಲ್ಲಿ ಪಂಜಾಬ್ ವಿಧಾನಸಭೆ ‘ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ’ ಯನ್ನು ಜಾರಿಗೆ ತಂದಿತ್ತು. ಆದರೆ ಅದನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...