Homeಮುಖಪುಟ‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು...

‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂ

- Advertisement -
- Advertisement -

ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಆರೋಪಿಗಳನ್ನು ಶಿಕ್ಷಿಸಲು, ‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿರಬೇಕು’ ಎಂಬ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. ಪೋಕ್ಸೊ ಕಾಯಿದೆಯಡಿ ಲೈಂಗಿಕ ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಮುಖ್ಯ ಅಂಶ, ‘ಲೈಂಗಿಕ ಉದ್ದೇಶವೇ ಹೊರತು ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿದೆಯೆ ಎಂಬುವುದಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕವಿಲ್ಲದೆ” ಮುಟ್ಟುವುದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್‌, 12 ವರ್ಷದ ಮಗುವನ್ನು ‘ತಡವಿ’ ಲೈಂಗಿಕ ಕಿರುಕುಳ ನಡೆಸಿದ್ದಾನೆ ಎನ್ನಲಾಗಿದ್ದ ಆರೋಪಿಯ ಮೇಲಿನ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದದಿಂದ ಖುಲಾಸೆಗೊಳಿಸಿತ್ತು.

ಇದನ್ನೂ ಓದಿ: ಮಕ್ಕಳ ಮೇಲಿನ ಲೈಂಗಿಕ ಹಿಂಸಾಚಾರ; ಮುಂಬೈ ಹೈಕೋರ್ಟ್ ತೀರ್ಪಿನ ‘ಡಬಲ್ ಧಮಾಕಾ’!!

ನಾಲ್ಕು ವಾರಗಳಲ್ಲಿ ಶರಣಾಗುವಂತೆ ಮತ್ತು ವಿಶೇಷ ಪೋಕ್ಸೊ ನ್ಯಾಯಾಲಯವು ನೀಡಿದ ಮೂರು ವರ್ಷ ಮತ್ತು ಐದು ವರ್ಷಗಳ ಸಜೆಯನ್ನು ಅನುಭವಿಸುವಂತೆ ಆರೋಪಿಗೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಜನವರಿಯಲ್ಲಿ, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ನಾಲ್ಕು ವರ್ಷಗಳ ಹಿಂದೆ 12 ವರ್ಷದ ಬಾಲಕಿಯನ್ನು ತಡವಿದ್ದಕ್ಕಾಗಿ ಪೋಕ್ಸೊ ಕಾಯ್ದೆಯಡಿಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ ವ್ಯಕ್ತಿಯ ಶಿಕ್ಷೆಯನ್ನು ರದ್ದುಗೊಳಿಸಿತ್ತು.

ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕವಿಲ್ಲದೆ ಅಪ್ರಾಪ್ತ ವಯಸ್ಕ ಮಗುವಿನ ಎದೆ ಹಿಡಿಯುವುದನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ ಎಂದು ಪೋಕ್ಸೋ ಕಾಯಿದೆಯಡಿ ವ್ಯಾಖ್ಯಾನಿಸಲಾಗಿದೆ ಎಂದು ಬಾಂಬೆ ಹೈಕೋರ್ಟ್‌ ಜನವರಿ 19 ರಂದು ವಿವಾದಾತ್ಮಕ ತೀರ್ಪು ನೀಡಿತ್ತು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಧೀಶರ ಈ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಆದೇಶವನ್ನು ತಡೆಹಿಡಿದಿತ್ತು. ‘ಈ ಆದೇಶವು ಗೊಂದಲದ ಮತ್ತು ಅಪಾಯಕಾರಿ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ’ ಎಂದು ಅಟಾರ್ನಿ ಜನರಲ್ ಹೇಳಿದ್ದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read