Homeಮುಖಪುಟಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು ‘ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ’ ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು ಅನುಸರಿಸುತ್ತಿರುವ ‘ಸ್ವಯಂ ನಿಯಂತ್ರಣ’ ಮಾದರಿಯ ಪರಿಣಾಮಕಾರಿತ್ವದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.

“ಇಂಡಿಯಾಸ್ ಗಾಟ್ ಲೇಟೆಂಟ್” ಕಾರ್ಯಕ್ರಮದಲ್ಲಿನ ಅಶ್ಲೀಲ ವಿಷಯಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಪಾಡ್‌ಕ್ಯಾಸ್ಟರ್ ರಣವೀರ್ ಅಲಹಾಬಾದಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಪ್ರಕರಣ ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದರೂ, ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸುವ ಸುಪ್ರೀಂ ಕೋರ್ಟ್, ಇಡೀ ದೇಶದ ಆನ್‌ಲೈನ್ ಅಶ್ಲೀಲತೆಯನ್ನು ತಡೆಗಟ್ಟುವ ಸಂಬಂಧ ಮಾರ್ಗಸೂಚಿ ರೂಪಿಸುವ ಕುರಿತು ಚರ್ಚೆ ಆರಂಭಿಸಿದೆ.

ಗುರುವಾರ ವಿಚಾರಣೆಯ ವೇಳೆ ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರ ಸರ್ಕಾರ ಕೆಲವು ಹೊಸ ಮಾರ್ಗಸೂಚಿಗಳನ್ನು ಪ್ರಸ್ತಾಪಿಸಿದೆ ಮತ್ತು ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದು ಕೇವಲ ‘ಅಶ್ಲೀಲತೆ’ಗೆ ಸೀಮಿತವಾಗಿಲ್ಲ, ಬದಲಾಗಿ ಇಂಟರ್‌ನೆಟ್ ಬಳಕೆದಾರರು ರಚಿಸಿದ ವಿಷಯಗಳಲ್ಲಿನ ‘ವಿಕೃತತೆಗೂ ಸಂಬಂಧಿಸಿದೆ. ಜನರು ತಮ್ಮದೇ ಆದ ಯೂಟ್ಯೂಬ್ ಚಾನೆಲ್‌ಗಳು ಅಥವಾ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಅವುಗಳನ್ನು ಪ್ರಕಟಿಸುತ್ತಾರೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಕಾಂತ್, ಅಂತಹ ವಿಷಯ ರಚನೆಕಾರರಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈಗ ನಾನು ನನ್ನದೇ ಚಾನೆಲ್ ರಚಿಸಿ ಏನು ಬೇಕಾದರೂ ಅಪ್ಲೋಡ್ ಮಾಡಬಹುದೇ? ಅದಕ್ಕೆ ನಿಯಂತ್ರಣವಿಲ್ಲವೇ? ನಿಯಂತ್ರಿಸುವವರು ಬೇಕಲ್ಲವೇ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಮೌಲ್ಯಯುತವಾದ ಹಕ್ಕು, ಆದರೆ ಆ ಸ್ವಾತಂತ್ರ್ಯ ವಿಕೃತಿ ಮನೋಭಾವಕ್ಕೆ ದಾರಿ ಮಾಡಿಕೊಡಬಾರದು ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಅಭಿವ್ಯಕ್ತಿ ಹಕ್ಕನ್ನು ಗೌರವಿಸಲೇ ಬೇಕು. ಆದರೆ ಒಂದು ವೇಳೆ ಯಾವುದಾದರೂ ಕಾರ್ಯಕ್ರಮದಲ್ಲಿ ವಯಸ್ಕರಿಗೆ ಮಾತ್ರ ಸೂಕ್ತವಾದ (adult) ವಿಷಯ ಇದ್ದರೆ, ಅದನ್ನು ಪ್ರಸಾರ ಮಾಡುವ ಮೊದಲು ಸ್ಪಷ್ಟವಾದ ಎಚ್ಚರಿಕೆ ಕೊಡಲೇ ಬೇಕು. ಪ್ರೇಕ್ಷಕರಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಹೇಳಿದ್ದಾರೆ.

ಓಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಇತ್ಯಾದಿಗಳನ್ನೊಳಗೊಂಡಿರುವ ಇಂಡಿಯನ್ ಬ್ರಾಡ್‌ಕಾಸ್ಟ್ ಅಂಡ್ ಡಿಜಿಟಲ್ ಫೌಂಡೇಷನ್ ಪರವಾಗಿ ವಾದಿಸಿದ ಹಿರಿಯ ವಕೀಲ ಅಮಿತ್ ಸಿಬಲ್ ಅವರು, ಈಗಾಗಲೇ ಆನ್‌ಲೈನ್ ವಿಷಯಗಳ ನಿಯಂತ್ರಣಕ್ಕೆ 2021ರ ಐಟಿ ರೂಲ್ಸ್ (Information Technology (Intermediary Guidelines and Digital Media Ethics Code) Rules, 2021) ಇವೆ. ಈ ನಿಯಮಗಳನ್ನು ಪ್ರಸ್ತುತ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಮತ್ತು ಅನೇಕ ಅರ್ಜಿಗಳು ಅಲ್ಲಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಿಯಮಗಳ ಕೆಲವು ಸೆಕ್ಷನ್‌ಗಳ ಮೇಲೆ ತಡೆಯಾಜ್ಞೆ ಇದ್ದರೂ ಸಹ, ಓಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂಪ್ರೇರಿತವಾಗಿ (voluntarily) ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ಅನ್ನು ಪಾಲಿಸುತ್ತಿವೆ. ಜನರ ದೂರುಗಳನ್ನು ಪರಿಹರಿಸಲು ಒಂದು ಸ್ವತಂತ್ರ ಸಂಸ್ಥೆ ಇದೆ. ಈ ಸಂಸ್ಥೆಯ ಅಧ್ಯಕ್ಷೆಯಾಗಿ ನಿವೃತ್ತ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರು ಇದ್ದಾರೆ. ಯಾರಿಗಾದರೂ ಯಾವುದಾದರೂ ಒಂದು ಶೋ/ಸಿನಿಮಾ ಅಡೆತಡೆಯಿಲ್ಲದೆ ಅಶ್ಲೀಲ ಎನಿಸಿದರೆ ಅಲ್ಲಿಗೆ ದೂರು ಸಲ್ಲಿಸಬಹುದು ಮತ್ತು ಅದನ್ನು ಪರಿಶೀಲಿಸಿ ತೀರ್ಪು ನೀಡಲಾಗುತ್ತದೆ ಎಂದಿದ್ದಾರೆ.

ಈ ಹಂತದಲ್ಲಿ, ಸಿಜೆಐ ಕಾಂತ್ ಸ್ವಯಂ-ನಿಯಂತ್ರಕ ಕಾರ್ಯವಿಧಾನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಶಾಸನಬದ್ಧ ನಿಯಂತ್ರಣದ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...