Homeಮುಖಪುಟಬ್ರಿಜ್‌ ಭೂಷಣ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು: ಜಸ್ಟಿಸ್‌ ಲೋಕೂರ್‌

ಬ್ರಿಜ್‌ ಭೂಷಣ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು: ಜಸ್ಟಿಸ್‌ ಲೋಕೂರ್‌

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು ನಡೆಸುತ್ತಿರುವುದನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಹೇಳಿದ್ದಾರೆ.

ಓರ್ವ ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕ್ರೀಡಾಪಟುಗಳು ನೀಡಿದ ದೂರಿನ ಅನ್ವಯ ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿರುವ ಆರೋಪ ಬಂದ ಬಳಿಕ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರುವವರೆಗೂ ಎಫ್‌ಐಆರ್‌ ಆಗಿರಲಿಲ್ಲ. ಸಂತ್ರಸ್ತರು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಹೀಗಾಗಿ ದೆಹಲಿ ಪೊಲೀಸರು ಏಪ್ರಿಲ್ 23 ರಂದು ಐಪಿಸಿ ಸೆಕ್ಷನ್‌ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಪೋಕ್ಸೋ ಕಾಯ್ದೆಯಡಿ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದರು. ಗಂಭೀರ ಆರೋಪಗಳ ಹೊರತಾಗಿಯೂ ಆತನನ್ನು ಈವರೆಗೆ ಬಂಧಿಸಿಲ್ಲ. ಎಫ್‌ಐಆರ್‌ ಆದ ಬಳಿಕ ಸುಪ್ರೀಂಕೋರ್ಟ್, ಕುಸ್ತಿಪಟುಗಳ ಅರ್ಜಿಯನ್ನು ವಿಲೇವಾರಿ ಮಾಡಿತ್ತು. “ಪ್ರಕರಣ ದಾಖಲಾಗಬೇಕೆಂಬ ಮನವಿ ಈಡೇರಿದೆ. ಸ್ಥಳೀಯ ಸಂಬಂಧಪಟ್ಟ ನ್ಯಾಯಾಲಯ ಪ್ರಕರಣವನ್ನು ಮುನ್ನಡೆಸುತ್ತದೆ” ಎಂದು ಸವೋಚ್ಚ ನ್ಯಾಯಾಲಯ ತಿಳಿಸಿತ್ತು.

“ಕುಸ್ತಿಪಟುಗಳ ಹೋರಾಟ: ಸಂಸ್ಥೆಗಳ ಹೊಣೆಗಾರಿಕೆ” ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ಯಾನೆಲ್ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿರುವ ನ್ಯಾಯಮೂರ್ತಿ ಲೋಕೂರ್, ಈ ಪ್ರಕರಣದಲ್ಲಿ ಪೊಲೀಸ್ ತನಿಖೆಯಲ್ಲಿನ ಲೋಪದೋಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ನಿರಾಕರಿಸಿದ್ದರಿಂದ ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ನ ಮೊರೆಹೋಗಿ ಬೀದಿಗಿಳಿಯಬೇಕಾಯಿತು ಎಂದು ಅವರು ತಿಳಿಸಿದ್ದಾರೆ.

“ಇದು ತೀವ್ರವಾದ ಲೈಂಗಿಕ ದೌರ್ಜನ್ಯದ ಪ್ರಕರಣವಾಗಿದ್ದರೂ, ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬವಾಯಿತು. ಇದನ್ನು ಗಮನದಲ್ಲಿಟ್ಟುಕೊಂಡು, ಬೆದರಿಕೆಗಳನ್ನು ಪರಿಗಣಿಸಿ, ಸುಪ್ರೀಂ ಕೋರ್ಟ್ ತನಿಖೆಯ ಮೇಲೆ ನಿಗಾ ಇಡಬೇಕು. ಆದ್ದರಿಂದ ಏನೂ ತಪ್ಪಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸುಪ್ರೀಂಕೋರ್ಟ್ ಈ ಹಿಂದೆಯೂ ಹಲವು ತನಿಖೆಗಳನ್ನು ಮೇಲ್ವಿಚಾರಣೆ ಮಾಡಿದೆ. ಯಾರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆಯೋ ಆ ವ್ಯಕ್ತಿಗಳು ದೋಷಿ ಎಂದು ನೋಡುವ ದೃಷ್ಟಿಕೋನದಿಂದ ಅಲ್ಲ, ಆದರೆ ಅಂತಹ ವಿಷಯಗಳಲ್ಲಿ ತಪ್ಪುಗಳಾಗದಂತೆ ನೋಡಿಕೊಳ್ಳಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆ ನಡೆಸಿದೆ. ವಿಶೇಷವಾಗಿ ರಾಜಕೀಯವಾಗಿ ಉತ್ತಮ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಈ ವಿದ್ಯಮಾನಗಳು ನಡೆದಿವೆ” ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದಾರೆ. ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಪೋಗಟ್‌, ಕುಸ್ತಿ ಫೆಡರೇಷನ್‌ ಅಧ್ಯಕ್ಷರ ವಿರುದ್ಧದ ಪೊಲೀಸ್ ತನಿಖೆಯ ನಿಧಾನಗತಿಯನ್ನು ಟೀಕಿಸಿದ ಕೆಲವು ದಿನಗಳ ನಂತರ ನಿವೃತ್ತಿ ನ್ಯಾಯಮೂರ್ತಿಯವರ ಹೇಳಿಕೆ ಹೊರಬಿದ್ದಿದೆ.

“ನಾನು ಪ್ರತಿಭಟಿಸಲು ಧೈರ್ಯವನ್ನು ತೋರಿದಾಗಿನಿಂದ ನಾನು ತುಂಬಾ ಅವಮಾನವನ್ನು ಅನುಭವಿಸಿದೆ” ಎಂದು ರಾಯಿಟರ್ಸ್‌ಗೆ ತಿಳಿಸಿದ್ದರು.

“ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೌನದಿಂದ ನೋವಾಗಿದೆ. ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವು ನನ್ನನ್ನು ಮತ್ತು ಇತರರನ್ನು ಸಾರ್ವಜನಿಕ ಪ್ರತಿಭಟನೆಯತ್ತ ಕರೆತಂದಿತು. ಉನ್ನತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ದೇಶವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಪೋಗಟ್ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...