Homeಮುಖಪುಟನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಅದರ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ದುಬೆ ಅವರ ಹೇಳಿಕೆಗಳು ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಲಯಗಳ ಮೇಲಿನ ವಿಶ್ವಾಸಾರ್ಹತೆಯನ್ನು ಅಲುಗಾಡಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ನ್ಯಾಯಾಂಗದ ಅಧಿಕಾರವನ್ನು ದುರ್ಬಲಗೊಳಿಸುವ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಪ್ರಯತ್ನಗಳ ಬಗೆಗಿನ ದೊಡ್ಡ ಕಳವಳವನ್ನು ಇದು ಸೂಚಿಸುತ್ತದೆ” ಎಂದು ಮೇ 5ರಂದು ಹೊರಡಿಸಲಾದ ಆದೇಶದಲ್ಲಿ ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ ಎಂದು barandbench.com ವರದಿ ಮಾಡಿದೆ.

“ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಅಂತರ್ಯುದ್ಧಗಳಿಗೆ ಮುಖ್ಯ ನ್ಯಾಯಮೂರ್ತಿ ಜವಾಬ್ದಾರರು ಎಂದು ಹೇಳುವ ಮೂಲಕ, ಸುಪ್ರೀಂ ಕೋರ್ಟ್‌ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದೆ ಎಂಬರ್ಥದಲ್ಲಿ ದುಬೆ ಮಾತನಾಡಿದ್ದಾರೆ. ಇದು ಅವರ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ಅರ್ಜಿದಾರರಾದ ವಿಶಾಲ್ ತಿವಾರಿ ಕೋರಿದಂತೆ ದುಬೆ ವಿರುದ್ಧ ಯಾವುದೇ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲು ನ್ಯಾಯಾಲಯ ನಿರಾಕರಿಸಿದೆ.

ನ್ಯಾಯಪೀಠವು ನ್ಯಾಯಾಂಗ ನಿಂದನೆ ಎಂದು ಪರಿಗಣಿಸದಿದ್ದರೂ, ದುಬೆ ಹೇಳಿಕೆಗಳು 1971ರ ನ್ಯಾಯಾಂಗದ ನಿಂದನೆ ಕಾಯ್ದೆಯ ಅಡಿಯಲ್ಲಿ ಒದಗಿಸಲಾದ ವಿನಾಯಿತಿಗಳ ಅಡಿಯಲ್ಲಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ವರದಿ ಹೇಳಿದೆ.

“ದುಬೆ ಅವರ ಹೇಳಿಕೆಗಳು ಸಾಂವಿಧಾನಿಕ ನ್ಯಾಯಾಲಯಗಳ ಪಾತ್ರ ಮತ್ತು ಸಂವಿಧಾನದ ಅಡಿಯಲ್ಲಿ ಅವುಗಳಿಗೆ ನೀಡಲಾದ ಕರ್ತವ್ಯಗಳು ಮತ್ತು ಬಾಧ್ಯತೆಗಳ ಬಗ್ಗೆ ಅಜ್ಞಾನವನ್ನು ತೋರಿಸುತ್ತವೆ” ಎಂದು ನ್ಯಾಯಾಲಯ ತಿಳಿಸಿದೆ.

“ನಿರ್ದಿಷ್ಟವಾಗಿ ಹೇಳುವುದಾದರೆ, ಯಾವುದೇ ದ್ವೇಷ ಭಾಷಣ ಮತ್ತು ಕೋಮು ದ್ವೇಷವನ್ನು ಹರಡುವ ಪ್ರಯತ್ನಗಳನ್ನು ಕಠಿಣವಾಗಿ ಎದುರಿಸಬೇಕು” ಎಂದಿದೆ.

“ಒಂದು ನಿರ್ದಿಷ್ಟ ಗುಂಪನ್ನು ದೂರವಿಡುವ ಅಥವಾ ಅವಮಾನಿಸುವ ಯಾವುದೇ ಪ್ರಯತ್ನವು ಕ್ರಿಮಿನಲ್ ಅಪರಾಧವಾಗಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಿ ಹೇಳಿದೆ.

ದೇಶದಲ್ಲಿ “ಅಂತರ್ಯುದ್ಧ ಉಂಟಾದರೆ” ಅದಕ್ಕೆ ಸಿಜೆಐ ಖನ್ನಾ ಅವರೇ ನೇರ ಕಾರಣ. ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳನ್ನು ಮುಚ್ಚಿ” ಎಂದು ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್‌ಐ) ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ದುಬೆ ಹೇಳಿದ್ದರು. ವಕ್ಫ್ (ತಿದ್ದುಪಡಿ) ಕಾಯ್ದೆಗೆ ಸಿಜೆಐ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದ ನಂತರ ಈ ಹೇಳಿಕೆಗಳನ್ನು ನೀಡಿದ್ದರು.

ವಕೀಲ ವಿಶಾಲ್ ತಿವಾರಿ ಅವರು ದುಬೆ ಹೇಳಿಕೆ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿದರು, ದುಬೆ ಅವರ ಸಂದರ್ಶನವು ನ್ಯಾಯಾಂಗ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಂದ ಕೂಡಿದೆ ಎಂದು ಆರೋಪಿಸಿದ್ದರು. ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕೆಂದು ತಿವಾರಿ ಕೋರಿದ್ದರು.

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...