Homeಮುಖಪುಟನ್ಯಾಯಾಲದ ಆದೇಶ ಧಿಕ್ಕರಿಸಿ ವ್ಯಕ್ತಿಗೆ ಕಿರುಕುಳ : ಪೊಲೀಸ್ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ...

ನ್ಯಾಯಾಲದ ಆದೇಶ ಧಿಕ್ಕರಿಸಿ ವ್ಯಕ್ತಿಗೆ ಕಿರುಕುಳ : ಪೊಲೀಸ್ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌, ಕಠಿಣ ಕ್ರಮಕ್ಕೆ ಸೂಚನೆ

- Advertisement -
- Advertisement -

ನ್ಯಾಯಾಲಯ ರಕ್ಷಣೆ ಒದಗಿಸಿದ ಹೊರತಾಗಿಯೂ ವ್ಯಕ್ತಿಯೊಬ್ಬರನ್ನು ಬಂಧಿಸಿ, ಕಿರುಕುಳ ನೀಡಿದ ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯ ಕಂಧೈ ಪೊಲೀಸ್ ಠಾಣೆಯ ಠಾಣಾಧಿಕಾರಿ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಕ್ರಮಕ್ಕೆ ಸೂಚಿಸಿದೆ.

ಅರ್ಜಿದಾರರ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯದ ಆದೇಶಿಸಿದ್ದರೂ, ಪೊಲೀಸ್ ಅಧಿಕಾರಿ ಅವರನ್ನು ಬಂಧಿಸಿ ಹಲ್ಲೆ ಮಾಡಿದ್ದಾರೆ. ಅಲ್ಲದೆ, “ನಾನು ಯಾವ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸುವುದಿಲ್ಲ. ಇವತ್ತೇ ನಿನ್ನ ಹೈಕೋರ್ಟ್, ಸುಪ್ರೀಂ ಕೋರ್ಟ್ ಎಲ್ಲವನ್ನೂ ತೆಗೆದು ಹಾಕಿ ಬಿಡುತ್ತೇನೆ” ಎಂದು ನ್ಯಾಯಾಲವನ್ನು ಅವಮಾನಿಸಿದ್ದಾರೆ ಎಂಬುವುದಾಗಿ ಆರೋಪಿಸಲಾಗಿತ್ತು.

ಮಾರ್ಚ್ 28, 2025ರಂದು ನ್ಯಾಯಾಲಯದ ಅರ್ಜಿದಾರರಿಗೆ ರಕ್ಷಣೆ ಒದಗಿಸಿ ಆದೇಶ ನೀಡಿದ್ದರೂ, ಏಪ್ರಿಲ್ 23, 2025ರಂದು ಠಾಣಾಧಿಕಾರಿ ಗುಲಾಬ್ ಸಿಂಗ್ ಸೋಂಕರ್ ಅವರು ಅರ್ಜಿದಾರರನ್ನು ಅವರ ಕೆಲಸದ ಸ್ಥಳದಿಂದ ಎಳೆದೊಯ್ದು, ಬಂಧಿಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಅರ್ಜಿದಾರರು ಸುಪ್ರೀಂ ಕೋರ್ಟ್‌ನ ಆದೇಶದ ಪ್ರತಿಯನ್ನು ಹಾಜರುಪಡಿಸಿದರೂ, ಠಾಣಾಧಿಕಾರಿ ಸ್ಥಳೀಯ ಭಾಷೆಯಲ್ಲಿ ನಿಂದಿಸಿ, ನ್ಯಾಯಾಲಯದ ಆದೇಶಕ್ಕೆ ಅಗೌರವಿಸಿ ತೋರಿಸಿದ್ದಾರೆ. ಆದೇಶವನ್ನು ಪಾಲಿಸಲು ನಿರಾಕರಿಸಿದ್ದಾರೆ ಹೇಳಲಾಗಿತ್ತು.

ಈ ಹಿಂದೆ ನ್ಯಾಯಾಲಯವು ಉತ್ತರ ಪ್ರದೇಶ ಗೃಹ ಇಲಾಖೆಗೆ ಈ ವಿಷಯವನ್ನು ಎಡಿಜಿಪಿ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿಯ ಮೂಲಕ ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಸರ್ಕಾರದ ವಿಚಾರಣಾ ವರದಿಯು ಕೂಡ ಪೊಲೀಸ್ ಅಧಿಕಾರಿ ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಆದೇಶವನ್ನು ದಿಕ್ಕರಿಸಿದ್ದಾರೆ ಎಂದು ಹೇಳಿದೆ.

ಪೊಲೀಸ್ ಅಧಿಕಾರಿ ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿರುವುದು ಮೇಲ್ನೋಟಕ್ಕೆ ಖಚಿತವಾಗಿದೆ. ಹಾಗಾಗಿ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಸಮವಸ್ತ್ರ ಹಾಕಿಕೊಂಡು ನಡೆಸುವ ಇಂತಹ ಅಪರಾಧಗಳನ್ನು ಕ್ಷಮಿಸುವ ಪ್ರಶ್ನೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಕಟುವಾಗಿ ಹೇಳಿದೆ.

ಸುಪ್ರೀಂ ಕೋರ್ಟ್‌ಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಸರ್ಕಾರದ ಪರ ಸಹಾಯಕ ಅಡ್ವೊಕೇಟ್ ಜನರಲ್, “ವಿಚಾರಣಾ ವರದಿ ಸರ್ಕಾರಕ್ಕೆ ತಲುಪಿದೆ. ಅದರ ಆಧಾರರ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕೆ ಸ್ವಲ್ಪ ಸಮಯ ಬೇಕು ಎಂದು ಹೇಳಿದ್ದರು. ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಲಯ, ಸರ್ಕಾರಕ್ಕೆ ಸಮಯ ನೀಡಿ ವಿಚಾರಣೆಯನ್ನು ನವೆಂಬರ್ 7ಕ್ಕೆ ನಿಗದಿ ಮಾಡಿದೆ.

ಸಾಮಾಜಿಕ ನ್ಯಾಯಕ್ಕಾಗಿ ‘ಎಸ್ಐಆರ್’ ನಲ್ಲಿ ಜಾತಿ ಕಾಲಮ್ ಸೇರಿಸಿ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...