HomeUncategorizedಚುನಾವಣಾ ಬಾಂಡ್ ಮಾಹಿತಿ ಒದಗಿಸಲು ವಿಫಲ: ಎಸ್‌ಬಿಐಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಚುನಾವಣಾ ಬಾಂಡ್ ಮಾಹಿತಿ ಒದಗಿಸಲು ವಿಫಲ: ಎಸ್‌ಬಿಐಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸಮಯ ಕೋರಿದ್ದ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್‌ಬಿಐ) ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ನಾಳೆಯೊಳಗೆ (ಮಾ.12) ಮಾಹಿತಿ ನೀಡದಿದ್ದರೆ ನ್ಯಾಯಾಂಗ ನಿಂದನೆ ಎಂದು ಪರಿಗಣಿಸುವುದಾಗಿ ಎಚ್ಚರಿಕೆ ನೀಡಿದೆ.

“ವಿಚಾರಣೆ ವೇಳೆ, ಮಾರ್ಚ್ 6ರಂದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ನಾವು ಸೂಚಿಸಿದ್ದೆವು. ಈ ನಿಟ್ಟಿನಲ್ಲಿ ನೀವು ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಸುಪ್ರೀಂ ಕೋರ್ಟ್ ಖಾರವಾಗಿ ಪ್ರಶ್ನಿಸಿದೆ. “ನಾವು ಆದೇಶ ನೀಡಿ 26 ದಿನಗಳು ಕಳೆದಿವೆ. ನೀವು ಮೌನ ತಾಳಿದ್ದು ಯಾಕೆ? ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ನಾವು ಪ್ರಾಮಾಣಿಕತೆಯನ್ನು ನಿರೀಕ್ಷಿಸುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಹೇಳಿದ್ದಾರೆ.

“ಯಾವ ರಾಜಕೀಯ ಪಕ್ಷಕ್ಕೆ ಯಾರು ಕೊಡುಗೆ ನೀಡಿದ್ದಾರೆ ಎಂಬುವುದನ್ನು ನಿರ್ಧರಿಸಲು ಮಾಹಿತಿಯನ್ನು ಹೊಂದಾಣಿಕೆ ಮಾಡಬೇಕಿದೆ. ದೇಣಿಗೆ ಕೊಟ್ಟವರು ಮತ್ತು ಅದನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ಮಾಹಿತಿ ಬೇರೆ ಬೇರೆ ವಿಭಾಗಗಳಾಗಿ ದಾಖಲಿಸಿರುವುದರಿಂದ, ಅದನ್ನು ಒಟ್ಟಿಗೆ ಮಾಡಿ ತಾಳೆ ಹಾಕಲು ತುಂಬಾ ಸಮಯ ಬೇಕಿದೆ. ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಲು ನಾವು ಬಯಸುವುದಿಲ್ಲ. ಹಾಗಾಗಿ, ಜೂನ್ 30ರವರೆಗೆ ಸಮಯ ವಿಸ್ತರಿಸಿ” ಎಂದು ಎಸ್‌ಬಿಐ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ಕೋರದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, “ನಿಮ್ಮ ಬಳಿ ಕೆವೈಸಿ ಇರುವಾಗ ಇಲ್ಲಿ ಯಾವುದೇ ತಪ್ಪು ಸಂಭವಿಸುವ ಪ್ರಶ್ನೆಯೇ ಬರುವುದಿಲ್ಲ. ನೀವು ದೇಶದ ನಂ.1 ಬ್ಯಾಂಕ್ ಆಗಿ ಇವನ್ನೆಲ್ಲಾ ನಿಭಾಯಿಸಲು ಅರ್ಹರಿದ್ದೀರಿ” ಎಂದು ಹೇಳಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರತಿಕ್ರಿಯಿಸಿ, “ನೀವು ಮಾಹಿತಿಗಳನ್ನು ಹೊಂದಾಣಿಕೆ ಮಾಡಿಕೊಡುವುದೆಲ್ಲ ಬೇಡ. ನಿಮ್ಮಲ್ಲಿರುವ ಮಾಹಿತಿಗಳನ್ನು ಸರಳವಾಗಿ ಬಹಿರಂಗಡಿಸಿ ಸಾಕು ಎಂದಿದ್ದಾರೆ. ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದ ತೀರ್ಪನ್ನು ಮಾರ್ಪಡಿಸುವಂತೆ ಕೋರಿ ಎಸ್‌ಬಿಐನ ಸಹಾಯಕ ಪ್ರಧಾನ ವ್ಯವಸ್ಥಾಪಕರು ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ಸಿಜೆಐ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯದ ಆದೇಶವನ್ನು ಪಾಲಿಸದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಸಮಯ ವಿಸ್ತರಣೆ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಚುನಾವಣಾ ಆಯೋಗಕ್ಕೆ ಒದಗಿಸಲು ಅಗತ್ಯವಿರುವ ಮಾಹಿತಿ ನಿಮ್ಮಲ್ಲಿ ಲಭ್ಯವಿದೆ ಎಂದು ನಮಗೆ ತಿಳಿದಿದೆ. ನಾಳೆ (ಮಾ.12) ಬ್ಯಾಂಕ್ ವ್ಯವಹಾರ ಅವಧಿ ಮುಕ್ತಾಯದೊಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕು ಎಂದು ಖಡಕ್ ಆದೇಶ ನೀಡಿದೆ.

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡದವರು ಮತ್ತು ಅದನ್ನು ಸ್ವೀಕರಿಸಿದವರ ಮಾಹಿತಿ ನಮ್ಮಲ್ಲಿ ಈಗಾಗಲೇ ಲಭ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿಕೊಂಡಿದೆ. ಹಾಗಿರುವಾ ಅದನ್ನು ತಾಳೆ ಹಾಕುವ ಅಗತ್ಯ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಈ ಹಿಂದಿನ ಗಡುವಿನೊಳಗೆ ಮಾಹಿತಿ ಒದಗಿಸದ್ದಕ್ಕೆ ನಿಮ್ಮ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಿಲ್ಲ. ಆದರೆ, ಈ ಬಾರಿ ಮಾಹಿತಿ ನೀಡಲು ವಿಫಲವಾದರೆ ಖಂಡಿತವಾಗಿಯೂ ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು” ಎಂದು ಸುಪ್ರೀಂ ಕೋರ್ಟ್‌ ಎಸ್‌ಬಿಐಗೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ :

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Pls say correct and details don’t hide anything why ur worked only one party ? Beings big institution how u think this is correct? See all india seeing already ur bank hopes Re gone it will indirectly losing ur business investment pls try to put information honestly don’t loose ur business

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...