Homeಮುಖಪುಟಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

ಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

- Advertisement -
- Advertisement -

ಸುಪ್ರೀಂಕೋರ್ಟ್‌ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿದ್ದು, ಅದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದೆ. ತಮ್ಮ ಪಕ್ಷವು ನ್ಯಾಯಾಂಗವನ್ನು ಗೌರವಿಸುತ್ತದೆ ಎಂದು ಪಕ್ಷವೂ ಹೇಳಿದ್ದು, ಸುಪ್ರೀಂ ಕೋರ್ಟ್ ವಿರುದ್ಧ ಅವರು ನೀಡಿರುವ ಪ್ರಚೋದನಕಾರಿ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಒತ್ತಿ ಹೇಳಿದೆ.

“ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ ನ್ಯಾಯಾಧೀಶರ ಕುರಿತು ಮಾಡಿದ ಹೇಳಿಕೆಗಳಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇವು ಅವರ ವೈಯಕ್ತಿಕ ಹೇಳಿಕೆಗಳು, ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಅಥವಾ ಅಂತಹ ಹೇಳಿಕೆಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಬಿಜೆಪಿ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಜೆಪಿ ನಡ್ಡಾ ಎಕ್ಸ್‌ನಲ್ಲಿ ತಡರಾತ್ರಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನ ಗೊಡ್ಡಾದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ದೇಶದಲ್ಲಿ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದ್ದು, ಅದು ತನ್ನ ಮಿತಿಗಳನ್ನು ಮೀರುತ್ತಿದೆ ಎಂದು ವಾದಿಸಿದ್ದಾರೆ. “ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾಗುತ್ತದೆ. ಹೀಗಾದರೆ, ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಯನ್ನು ಮುಚ್ಚಬೇಕು” ಎಂದು ಅವರು ಹೇಳಿದ್ದಾರೆ.

ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ ಮತ್ತೊಬ್ಬ ಬಿಜೆಪಿ ಸಂಸದ ದಿನೇಶ್ ಶರ್ಮಾ, “ಯಾರಿಗೂ ಲೋಕಸಭೆ ಮತ್ತು ರಾಜ್ಯಸಭೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಸದರು ಮತ್ತು ಇತರ ಎಲ್ಲರಿಗೂ ಅಂತಹ ಹೇಳಿಕೆಗಳನ್ನು ನೀಡದಂತೆ ತಿಳಿಸಲಾಗಿದೆ, “ನ್ಯಾಯಾಂಗವು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ” ಎಂದು ಹೇಳಿದ್ದಾರೆ.

“ಭಾರತೀಯ ಜನತಾ ಪಕ್ಷವು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತದೆ ಮತ್ತು ಅದರ ಆದೇಶಗಳು ಮತ್ತು ಸಲಹೆಗಳನ್ನು ಸಂತೋಷದಿಂದ ಸ್ವೀಕರಿಸಿದೆ. ಏಕೆಂದರೆ ಒಂದು ಪಕ್ಷವಾಗಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ಎಲ್ಲಾ ನ್ಯಾಯಾಲಯಗಳು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ ಮತ್ತು ಸಂವಿಧಾನದ ರಕ್ಷಣೆಯ ಬಲವಾದ ಆಧಾರಸ್ತಂಭವಾಗಿದೆ ಎಂದು ನಾವು ನಂಬುತ್ತೇವೆ. ಅಂತಹ ಹೇಳಿಕೆಗಳನ್ನು ನೀಡದಂತೆ ನಾನು ಅವರಿಬ್ಬರಿಗೂ ಮತ್ತು ಇತರರಿಗೂ ಸೂಚನೆ ನೀಡಿದ್ದೇನೆ” ಎಂದು ಕೇಂದ್ರ ಆರೋಗ್ಯ ಸಚಿವರೂ ಆಗಿರುವ ನಡ್ಡಾ ಹೇಳಿದ್ದಾರೆ.

ತಮಿಳುನಾಡಿನ 10 ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿದ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರವನ್ನು ಇತ್ತಿಚೆಗೆ ಟೀಕಿಸಿದ್ದ ಸುಪ್ರಿಂಕೋರ್ಟ್, ಅದನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಎಂದು ತೀರ್ಪು ನೀಡಿತ್ತು. ಇತರ ನಂತರ ಬಿಜೆಪಿ ಸಂಸದರ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.

ಶಾಸಕಾಂಗವು ಎರಡನೇ ಬಾರಿಗೆ ಅಂಗೀಕರಿಸಿದ ಮಸೂದೆಗಳಿಗೆ ರಾಷ್ಟ್ರಪತಿ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಸುಪ್ರೀಂ ಕೋರ್ಟ್ ಪೀಠವು ಮೂರು ತಿಂಗಳ ಗಡುವನ್ನು ನಿಗದಿಪಡಿಸಿತ್ತು. ಸಾಂವಿಧಾನಿಕ ಪ್ರಶ್ನೆಗಳನ್ನು ಹೊಂದಿರುವ ಮಸೂದೆಗಳನ್ನು ಸುಪ್ರೀಂಕೋರ್ಟ್‌ಗೆ ಉಲ್ಲೇಖಿಸುವುದು ವಿವೇಕಯುತವಾಗಿದೆ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಒತ್ತಿ ಹೇಳಿತ್ತು.

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆಯೂ ಈ ಹೇಳಿಕೆಗಳನ್ನು ನೀಡಲಾಗಿತ್ತು.

ಏಪ್ರಿಲ್ 17 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಯಾವುದೇ ‘ಬಳಕೆದಾರ ವಕ್ಫ್(ವಕ್ಫ್‌ ಬೈ ಯೂಸರ್)’ ನಿಬಂಧನೆಯನ್ನು ಡಿನೋಟಿಫೈ ಮಾಡುವುದಿಲ್ಲ ಮತ್ತು ಮಂಡಳಿಯಲ್ಲಿ ಯಾವುದೇ ಮುಸ್ಲಿಮೇತರ ಸದಸ್ಯರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿತ್ತು. ಕಾನೂನಿನ ಆ ಭಾಗಗಳನ್ನು ತಡೆಯುವುದನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದ ಒಂದು ದಿನದ ನಂತರ ಈ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿತ್ತು.

ಬಿಜೆಪಿಯ ದುಬೆ ಅವರ ಹೇಳಿಕೆಗಳನ್ನು ಖಂಡಿಸಿದ ಕಾಂಗ್ರೆಸ್, “ಸುಪ್ರೀಂ ಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ” ಎಂದು ಹೇಳಿದೆ.

“ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿಭಿನ್ನ ಧ್ವನಿಗಳು ಉದ್ದೇಶಪೂರ್ವಕವಾಗಿ ಬರುತ್ತಿದ್ದು, ಸುಪ್ರೀಂಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ. ಚುನಾವಣಾ ಬಾಂಡ್‌ಗಳ ಸಮಸ್ಯೆ ಇದೆ, ವಕ್ಫ್ ಸಮಸ್ಯೆ ಉದ್ಭವಿಸಿದೆ, ಚುನಾವಣಾ ಆಯೋಗದ ಸಮಸ್ಯೆ ಬರಲಿದೆ” ಎಂದು ಕಾಂಗ್ರೆಸ್‌ನ ಸಂವಹನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸುಪ್ರೀಂಕೋರ್ಟ್‌ ವಿರುದ್ಧ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...