Homeಅಂಕಣಗಳುಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

- Advertisement -
- Advertisement -

ರೈತ ಪ್ರತಿಭಟನೆಗಳ ಭಾಗವಾಗಿ ಮಹಿಳೆಯರು ಯಾಕಿದ್ದಾರೆ?

ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರು ಮೊನ್ನೆ ವಿಚಾರಣೆಯ ಸಂದರ್ಭದಲ್ಲಿ ಕೇಳಿದ ಪ್ರಶ್ನೆಯಿದು. ಮನೆಗೆ ಮರಳುವಂತೆ ಅವರ ಮನ ಒಲಿಸಿರಿ. ಇಲ್ಲವಾದರೆ ಈ ಸಂಬಂಧ ಆದೇಶ ನೀಡಬೇಕಾದೀತು ಎಂದೂ ಅವರು ಹೇಳಿದರು.

ದೇಶದ ಕೃಷಿ ಶ್ರಮಿಕ ಪಡೆಯ ಶೇ.42ರಷ್ಟು ಮಹಿಳೆಯರೇ ಆಗಿದ್ದಾರೆ. ಆದರೆ ಅವರ ಕೃಷಿ ಜಮೀನಿನ ಒಡೆತನದ ಮಾತು ಬಂದರೆ ಆಕೆಯ ಹೆಸರಿಗಿರುವುದು ಕೇವಲ ಶೇ.ಎರಡರಷ್ಟು ಭೂಮಿ ಮಾತ್ರ ಎಂದು ರಾಷ್ಟ್ರೀಯ ಆನ್ವಯಿಕ ಆರ್ಥಶಾಸ್ತ್ರೀಯ ಸಂಶೋಧನಾ ಸಂಸ್ಥೆ 2018ರಲ್ಲಿ ಹೇಳಿದೆ.

2011ರ ಜನಗಣತಿಯ ಪ್ರಕಾರ ಗ್ರಾಮೀಣ ಭಾರತದ ಶೇ.65ರಷ್ಟು ಮಹಿಳೆಯರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಒಕ್ಕಲುತನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತಮ್ಮನ್ನೂ ರೈತರೆಂದು ವರ್ಗೀಕರಿಸಬೇಕೆಂಬುದು ಮಹಿಳೆಯರ ಬಹುಕಾಲದ ಬೇಡಿಕೆ. ಬಿತ್ತನೆ, ಮಾರಾಟದ ತೀರ್ಮಾನಗಳಲ್ಲೂ ಆಕೆಗೆ ದನಿಯಿಲ್ಲ. ಆದರೆ ಕೃಷಿವ್ಯವಸ್ಥೆಯ ಕೇಂದ್ರಬಿಂದು ಅವರು. ಬಿತ್ತನೆಯಿಂದ ಹಿಡಿದು ಕಟಾವಿನ ತನಕ, ದನ ಮೇಯಿಸುವುದರಿಂದ ಹಿಡಿದು ಹಾಲು ಹಿಂಡುವ ತನಕ ಗಂಡಸಿಗೆ ಸರಿಸಮ ಇಲ್ಲವೇ ಮಿಗಿಲಾದ ಶ್ರಮ ಆಕೆಯದು.

ಎಂಟು ನೂರು ಮಂದಿ ಮಹಿಳೆಯರು ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರಿಗೆ ಬಹಿರಂಗ ಪ್ರತಿಭಟನಾ ಪತ್ರ ಬರೆದಿದ್ದಾರೆ. ಕೃಷಿಯಲ್ಲಿ ಮಹಿಳೆಯರದು ಪ್ರಧಾನ ಪಾತ್ರ ಎಂಬ ವಾಸ್ತವವನ್ನು ನಿಮ್ಮ ಹೇಳಿಕೆಗಳು ಅವಮಾನಗೊಳಿಸಿವೆ. ಮಹಿಳೆಯು ಹಾಲಿ ರೈತ ಪ್ರತಿಭಟನೆಯ ಆತ್ಮ ಮತ್ತು ಹೃದಯವೆಂಬುದನ್ನು ಕಾಣಿರಿ. ಸರ್ಕಾರಿ ಅಂಕಿ ಅಂಶಗಳಲ್ಲಿ ಮಹಿಳಾ ರೈತರು ಮಟಾ ಮಾಯವಾಗಿರುವ ಜೀವಿಗಳು. ರೈತರ ಆತ್ಮಹತ್ಯೆಗಳ ನಿಜ ಭಾರವನ್ನು ಹೊರಬೇಕಾಗಿರುವ ಕಷ್ಟಜೀವಿ ಆಕೆ. ಸಾವಿಗಿಂತ ಬದುಕೇ ಕ್ರೂರ ಆಕೆಯ ಪಾಲಿಗೆ. ಆಕೆ ಕೇವಲ ರೈತನ ತಾಯಿ ಪತ್ನಿ, ಮಗಳು, ಸೋದರಿ, ಸೊಸೆ ಮಾತ್ರವೇ ಆಗಿರುತ್ತಾಳೆ. ರೈತಳೆಂದು ಆಕೆಯನ್ನು ಕರೆಯುವುದಿಲ್ಲ ಸರ್ಕಾರ. ಇದೀಗ ಸುಪ್ರೀಮ್ ಕೋರ್ಟಿನ ಮನಸ್ಥಿತಿಯೂ ಭಿನ್ನವಾಗಿಲ್ಲ.

ಈ ರೈತ ಪ್ರತಿಭಟನೆಯು ಕೇವಲ ಕೃಷಿ ಕಾನೂನುಗಳಿಗೆ ವಿರೋಧವನ್ನು ಸಿಡಿಸಿರುವುದಲ್ಲದೆ, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಆವರಣವಾಗಿ ಹೊಮ್ಮಿರುವುದನ್ನು ಗಮನಿಸಿರಿ. ಆವರ ಪಾತ್ರವನ್ನು ಕಡೆಗಣಿಸುವುದು ಅತೀವ ಅವಹೇಳನಕರ ಎಂದಿದ್ದಾರೆ. ಈ ಕೃಷಿ ಕಾನೂನುಗಳಿಂದಾಗಿ ಒಕ್ಕಲುತನದ ಆದಾಯಗಳು ಮತ್ತಷ್ಟು ಕುಸಿದರೆ ಅದರ ನೇರ ಭಾರ ಹೊರುವವರು ಮನೆವಾರ್ತೆಯನ್ನು ನೋಡಿಕೊಳ್ಳಬೇಕಾಗಿರುವ ಹೆಣ್ಣುಮಕ್ಕಳೇ. ಪ್ರತಿಭಟನೆಯ ಸ್ಥಳಗಳಲ್ಲಿ ಮಾತ್ರವಲ್ಲದೆ ದೇಶದ ಉದ್ದಗಲಕ್ಕೆ ಭಾಷಣಗಳನ್ನು ಸಂಘಟಿಸುವ, ಸಭೆಗಳನ್ನು ಏರ್ಪಡಿಸುವ, ಪತ್ರಿಕಾಗೋಷ್ಠಿ ನಡೆಸುವ, ವೈದ್ಯೋಪಚಾರ ನೀಡುವ, ಅಡುಗೆ ಮಾಡುವ ಕ್ರಿಯೆಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮನಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಯಮಾಡಿ ಕೃಷಿಯಲ್ಲಿ ಮಹಿಳಾ ರೈತರ ಪಾತ್ರವನ್ನು ಗುರುತಿಸಿರಿ ಮತ್ತು ನಿಮ್ಮ ಪುರುಷಾಧಿಪತ್ಯದ ಮನಸ್ಥಿತಿಯಿಂದ ಹೊರಬನ್ನಿರಿ ಎಂದು ಮಹಿಳೆಯರು ಸುಪ್ರೀಮ್ ಕೋರ್ಟಿಗೆ ಝಾಡಿಸಿದ್ದಾರೆ.

ಮಹಿಳೆಯ ದುಡಿಮೆಯನ್ನು ಭಾರತೀಯ ಪುರುಷಾಧಿಪತ್ಯದ ರಾಜಕೀಯ ಸಾಮಾಜಿಕ ಆರ್ಥಿಕ ವ್ಯವಸ್ಥೆ ಗುರುತಿಸಿಯೇ ಇಲ್ಲ. ಆದಿಕಾಲದ ಬೇಟೆಗಾರ ಪುರುಷ ಈಟಿ ಮತ್ತು ಬೀಸು ಕೋಲನ್ನಷ್ಟೇ ಹಿಡಿದು ಹಗುರಕ್ಕೆ ನಡೆಯುತ್ತಿದ್ದರೆ, ಆತನ ಹಿಂದೆ ಹೆಜ್ಜೆ ಹಾಕುತ್ತಿದ್ದ ಆಕೆಯ ಮೇಲೆ ಅವರಿಬ್ಬರ ಕೂಸು, ಬಿಡಾರ ಹೂಡಿದರೆ ಛಾವಣಿಯಾಗಬಲ್ಲ ಪರಿಕರ, ಬುತ್ತಿ ಗಂಟುಗಳ ಜೊತೆಗೆ ಅಗೆಯುವ ಬಡಿಗೆಯ ಒಜ್ಜೆ. ಕೂಳು ಬೇಯಿಸಲು ಕಟ್ಟಿಗೆಯನ್ನು ಆಯುವುದು, ನೀರು ಹೊರುವುದು ಅಡಿಗೆ ಮಾಡುವುದು ಆಕೆಯದೇ ಕೆಲಸ. ಹೆಣ್ಣು ಗಂಡುಗಳ ನಡುವೆ ಸಾರ್ವತ್ರಿಕ ಶ್ರಮ ವಿಭಜನೆ ಎಂದರೆ ಆಕೆಯ ಪಾಲಿಗೆ ಮೈ ಮುರಿಯುವ ಗಾಣದೆತ್ತಿನ ಎಡೆಬಿಡದ ದುಡಿತ. ಕ್ರೀಡೆ, ಕನಸು, ಧರ್ಮ, ಕಲಾತ್ಮಕ ಅಭಿವ್ಯಕ್ತಿ, ಆಚರಣೆಗಳು ಆತನದೇ ವಿಶೇಷಾಧಿಕಾರ. ಪಶುಗಳನ್ನು ಪಳಗಿಸಿದ ನಂತರ ಪುರುಷ ಅವುಗಳನ್ನು ನೊಗಕ್ಕೆ ಹಚ್ಚಿ ದುಡಿಸಿದ. ಪಳಗಿಸಿದ ಪಶು ಸತ್ತಾಗ ಪುನಃ ನೊಗಕ್ಕೆ ನೇಗಿಲಿಗೆ ಹೆಗಲು ಕೊಟ್ಟದ್ದು ಆಕೆಯ. ಹಿಂದೆ ನಿಂತು ಆಕೆಯನ್ನು ನಡೆಸಿದ ಅಧಿಕಾರ ಆತನದೇ. ಇಂದಿಗೂ ಬಹಳಷ್ಟು ರೈತಾಪಿ ಕುಟುಂಬಗಳಲ್ಲಿ ಎತ್ತುಗಳನ್ನು ನಡೆಸಿಕೊಂಡಷ್ಟು ಉತ್ತಮವಾಗಿ ಹೆಣ್ಣನ್ನು ನಡೆಸಿಕೊಳ್ಳುವುದಿಲ್ಲ. ಆಕೆ ಕಂತೆ ಒಗೆದರೆ ಮತ್ತೊಬ್ಬ ತೊತ್ತು ಬೇಡಿಕೊಂಡು ಬಂದಾಳು. ಆದರೆ ಎತ್ತುಗಳು ಸತ್ತರೆ ಮತ್ತೆ ತರಲು ಹಣ ಸುರಿಯಬೇಕಲ್ಲ?

ಕೆಲಸ ಒಜ್ಜೆಯದು ಎಂದು ಆಕೆ ಎಂದೂ ಮಾಡದೆ ಬಿಟ್ಟವಳಲ್ಲ. ಬುದ್ಧಿಶಕ್ತಿ ಬೇಕಿರುವ ಮತ್ತು ನಿರ್ವಹಣಾ ಕೌಶಲ ಒಳಗೊಳ್ಳುವ ಕೆಲಸವನ್ನು ಆಕೆಗೆ ನಿರಾಕರಿಸಲಾಗಿತ್ತು. ಕತ್ತೆ ಕಾಯುವ ಕೆಲಸಾನೂ ಕೂಡ ಆಕೆಗೆ ಕೊಡುತ್ತಿರಲಿಲ್ಲ. ದಾರಿಯ ದೂರವನ್ನು ಕತ್ತೆಯ ಮೇಲೆ ಕುಳಿತು ಕ್ರಮಿಸುವ ರೈತಾಪಿ ಪುರುಷ ಮತ್ತು ಜೊತೆ ಜೊತೆಯಲ್ಲೇ ಓಡು ನಡಿಗೆಯಲ್ಲಿ ಧಾವಿಸುವ ಆತನ ಪತ್ನಿಯನ್ನು ಈಗಲೂ ಅಲ್ಲಲ್ಲಿ ಕಾಣುವುದು ಸಾಧ್ಯ. ಸಿರಿವಂತ ಪ್ರಪಂಚದಲ್ಲಿ ಈ ಸಂಬಂಧ ಕುಟುಂಬದ ಕಾರು ಸವಾರಿಯ ಸುಖ ಗಂಡನದಾದರೆ, ನಡೆದು ದೂರ ಕ್ರಮಿಸುವ ಇಲ್ಲವೇ ಬಸ್ಸಿನಲ್ಲಿ ಓಡಾಡುವ ಹೆಂಡತಿಯ ದೃಶ್ಯವಾಗಿ ಬದಲಾದೀತು

Photo Courtesy: The Indian Express

.

ಭಾರದ, ಮೈಮುರಿಯುವ, ನಿತ್ಯ ಮಾಡಿದ್ದನ್ನೇ ಮಾಡುವ ಅರ್ಥವಿಲ್ಲದ ದುಡಿತ ಆಕೆಯದು. ಜಗತ್ತಿನ ತುಂಬೆಲ್ಲ ಇದೇ ಕತೆ. ಕೂಳು ಬೇಯಿಸುವ ವಿರಳ ಉರುವಲನ್ನು ಹುಡುಕಿ ಹೆಕ್ಕಿ ಮುರಿದು ಹೊರೆಯಾಗಿ ಬಿಗಿದು ತಲೆಯ ಮೇಲೋ ಬೆನ್ನ ಮೇಲೆಯೋ ಹೊತ್ತು ತರುವವಳು ಆಕೆಯೇ. ದುರ್ಲಭ ನೀರನ್ನು ದೂರದಿಂದ ನೆತ್ತಿ ನುಗ್ಗಾಗುವಂತೆ ಹೊತ್ತು ತರುವುದು ಈಗಲೂ ಆಕೆಯದೇ ಕೆಲಸ. ಪುರುಷರು ಭಾರದ ನೀರನ್ನು ಹೊರುವುದು ವಿರಳವಾಗಿ ಲಭಿಸುವ ನೋಟ. ಶ್ರಮವನ್ನು ಹಗುರ ಮಾಡುವ ಊರ್ಜೆಯ ಮೂಲ ದೊರೆತ ಮರುಕ್ಷಣವೇ ಅಂತಹ ಕೆಲಸವನ್ನು ಪುರುಷರು ಬಾಚಿಕೊಳ್ಳುವರು.

ಸೊಂಟ ಬಗ್ಗಿಸಿಯೋ ಕುಕ್ಕರಗಾಲಲ್ಲಿ ಕುಳಿತೋ ಕಳೆಗುದ್ದಲಿ ಮತ್ತು ಪಿಕಾಸಿಗಳಲ್ಲೇ ಮಾಡಬೇಕಿದ್ದಷ್ಟು ದಿನ ಉಳುಮೆಯ ಕೆಲಸ ಆಕೆಯದು. ಟ್ರ್ಯಾಕ್ಟರುಗಳು, ಟಿಲ್ಲರುಗಳು ಬಂದೊಡನೆಯೇ ಆತನದಾಗಿಬಿಡುತ್ತದೆ!

ವಿಶ್ವಸಂಸ್ಥೆಯ ಯೋಜನೆಯೊಂದು ಮಹಿಳಾ ವ್ಯಾಪಾರಿಗಳಿಗೆ ಹಂಚಿದ ಬೈಸಿಕಲ್‌ಗಳನ್ನು ಕಿತ್ತುಕೊಂಡು ಸವಾರಿ ಮಾಡಿದವರು ಅವರ ಗಂಡಂದಿರು. ಮಹಿಳೆಯರು ಎಂದಿಂತೆ ತಮ್ಮ ಉತ್ಪನ್ನಗಳ ಮೂಟೆ ಹೊರೆಯನ್ನು ನೆತ್ತಿಯ ಮೇಲೆ ಹೊತ್ತು ಮೈಲಿಗಟ್ಟಲೆ ನಡೆಯುವುದು ತಪ್ಪಲಿಲ್ಲ. ಅನಾದಿಕಾಲದಿಂದ ಮಹಿಳೆಯ ಶ್ರಮ ಶಕ್ತಿಯ ಕುರಿತ ಈ ವ್ಯಾಖ್ಯಾನ ಖ್ಯಾತ ಸ್ತ್ರೀ ಚಿಂತಕಿ ಜರ್ಮೇನ್ ಗ್ರೀರ್ ಅವರದು. The Whole Woman ಎಂಬ ಕೃತಿಯಲ್ಲಿ ಹೆಣ್ಣು ಗಂಡಿನ ನಡುವೆ ಶ್ರಮ ಶಕ್ತಿ ವಿಭಜನೆಯ ಈ ಅನ್ಯಾಯದ ತಾರತಮ್ಯವನ್ನು ಬಿಡಿಸಿಡುತ್ತಾರೆ.

ಹೆರವರ ಹೊಲಗಳಲ್ಲಿ ಕೂಲಿ ಮಾಡುವ ಹೆಣ್ಣಾಳುಗಳಿಗೆ ಅರ್ಧ ಕೂಲಿಯ ಅವಮಾನ ಯುಗಗಳಿಂದ ನಡೆದು ಬಂದದ್ದು. ತೆಲುಗಿನ ಸಣ್ಣ ಕತೆಯೊಂದರಲ್ಲಿ ಗಂಡ ಹೆಂಡತಿ ಇಬ್ಬರೂ ಕೂಲಿಯಾಳುಗಳು. ಪರಸ್ಥಳಕ್ಕೆ ಪಯಣದ ಸಂದರ್ಭ. ಬಸ್ಸೇರಿ ಕುಳಿತವರ ಬಳಿ ಬರುವ ಕಂಡಕ್ಟರ್ ಎರಡು ಟಿಕೆಟ್‌ಗಳ ದರ ತೆರುವಂತೆ ಹೇಳುತ್ತಾನೆ. ಅದ್ಯಾಕೆ ಎರಡು ಟಿಕೆಟುಗಳ ರೊಕ್ಕ ಕೊಡಲಿ… ನನಗೆ ಪೂರ್ತಿ ಕೂಲಿ ಕೊಟ್ರೆ ಆಕೆಗೆ ಕೊಡೋದು ಅರ್ಧ ಕೂಲಿಯೇ. ಕೂಲಿಯಾದರೆ ಅರ್ಧ, ಟಿಕೆಟ್ಟಾದರೆ ಪೂರ್ತಿ! ಈ ಅನ್ಯಾಯ ಯಾಕೆ? ಒಂದೂವರೆ ಟಿಕೆಟ್ ಹರೀರ್ರಿ ಎಂದು ಪ್ರತಿಭಟಿಸುತ್ತಾನೆ ಗಂಡ. ಬಸ್ಸಲ್ಲಿ ಕುಳಿತ ಜನ ಆತನ ವಾದಕ್ಕೆ ಪಕಪಕನೆ ನಗುತ್ತಾರೆ. ಕತೆ ಅಲ್ಲಿಗೆ ಮುಗಿದುಹೋಗುತ್ತದೆ.

ಪಿತೃಪ್ರಧಾನ ವ್ಯವಸ್ಥೆಯ ಪಿರಮಿಡ್ ತುದಿಯಲ್ಲಿ ಶತಮಾನಗಳಿಂದ ಪವಡಿಸಿರುವ ಸ್ತ್ರೀದ್ವೇಷಿಗಳು ಈ ವಿಚಾರವನ್ನು ಒಪ್ಪಲಿಕ್ಕಿಲ್ಲ. ಸುಪ್ರೀಮ್ ಕೋರ್ಟು ಅರಿವಿನ ಆಗರ, ನ್ಯಾಯದಾನದ ತವನಿಧಿ ಎಂಬ ನಂಬಿಕೆಯಿದೆ. ಅದರ ನಡೆನುಡಿಗಳು ಈ ನಂಬಿಕೆಯ ತಳಹದಿಯನ್ನು ಇನ್ನಷ್ಟು ಗಟ್ಟಿಗೊಳಿಸುವಂತೆ ಇರಬೇಕೇ ವಿನಾ ಸಡಿಲುಗೊಳಿಸಕೂಡದು.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...