Homeಮುಖಪುಟಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ (ಜ.29) ತಡೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಹೊಸ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಸಂಬಂಧ ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ಮಾರ್ಚ್ 19ರಂದು ಹಿಂದಿರುಗಿಸಬಹುದಾದ ನೋಟಿಸ್ ಜಾರಿ ಮಾಡಿದೆ.

ಜಾತಿ ತಾರತಮ್ಯದ ದೂರುಗಳನ್ನು ಪರಿಶೀಲಿಸಲು ಮತ್ತು ಸಮಾನತೆಯನ್ನು ಉತ್ತೇಜಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಸಮಾನತೆಯ ಸಮಿತಿ (Equity Committees)ರಚಿಸುವುದನ್ನು ಕಡ್ಡಾಯಗೊಳಿಸುವ ಹೊಸ ನಿಯಮಗಳನ್ನು 2026ರ ಜನವರಿ 13ರಂದು ಜಾರಿಗೆ ಬಂದಿವೆ. ಇದು 2012ರ ನಿಯಮಗಳನ್ನು ಬದಲಾಯಿಸುತ್ತವೆ, ಅದು ಹೆಚ್ಚಾಗಿ ಸಲಹಾ ಸ್ವರೂಪದ್ದಾಗಿತ್ತು.

ಸಮಾನತೆಯ ಸಮಿತಿಗಳಲ್ಲಿ ಇತರ ಹಿಂದುಳಿದ ವರ್ಗಗಳು (ಒಬಿಸಿ), ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಅಂಗವಿಕಲ ವ್ಯಕ್ತಿಗಳು ಮತ್ತು ಮಹಿಳೆಯರು ಇರಬೇಕು ಎಂದು ಹೊಸ ನಿಯಮಗಳು ಹೇಳುತ್ತದೆ.

ಅವುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಮೃತ್ಯುಂಜಯ್ ತಿವಾರಿ, ವಕೀಲ ವಿನೀತ್ ಜಿಂದಾಲ್ ಮತ್ತು ರಾಹುಲ್ ದಿವಾನ್ ಎಂಬವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

“ಯುಜಿಸಿಯ ಹೊಸ ನಿಯಮಗಳು ತಾರತಮ್ಯ ಒಂದು ಕಡೆಯಿಂದ ಮಾತ್ರ ನಡೆಯುತ್ತದೆ ಎಂಬ ಅಸಾಧ್ಯವಾದ ಊಹೆ ಮೇಲೆ ನಿಂತಿವೆ. ಅಂದರೆ, ತಾರತಮ್ಯ ಎಂದರೆ ಕೇವಲ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳ ವಿರುದ್ಧ ಸಾಮಾನ್ಯ ವರ್ಗದವರು ಮಾಡುವುದು ಎಂದು ಭಾವಿಸಲಾಗಿದೆ. ಹೊಸ ನಿಯಮಗಳ ರಚನೆ ಮತ್ತು ಅನುಷ್ಠಾನದದಲ್ಲಿ ಕಾನೂನಾತ್ಮಕ ಸಂತ್ರಸ್ತ ಸ್ಥಾನವನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದವರಿಗೆ ಮಾತ್ರ ನೀಡಲಾಗಿದೆ. ಇದರಿಂದ ಸಾಮಾನ್ಯ ಅಥವಾ ಪ್ರಬಲ ಜಾತಿಯ ವಿದ್ಯಾರ್ಥಿಗಳು ಜಾತಿಯ ಕಾರಣದಿಂದ ಎದುರಿಸುವ ಯಾವುದೇ ತಾರತಮ್ಯಕ್ಕೆ ರಕ್ಷಣೆ ಇಲ್ಲದಂತಾಗಿದೆ. ‘ಸುಳ್ಳು ದೂರುಗಳ’ ವಿರುದ್ದದ ಕ್ರಮಗಳ ಕುರಿತು ಸ್ಪಷ್ಟವಾಗಿ ತಿಳಿಸದೆ ಪಕ್ಷಪಾತ ಮಾಡುವ ಮೂಲಕ ‘ಸಾಮಾನ್ಯ ವರ್ಗದ’ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೂಡ ಹೊಸ ನಿಯಮಗಳ ಕುರಿತು ಅತೃಪ್ತಿ ವ್ಯಕ್ತಪಡಿಸಿದೆ. ಅದು ಪ್ರಾಥಮಿಕವಾಗಿ ‘ಅಸ್ಪಷ್ಟ’ ಮತ್ತು ‘ದುರುಪಯೋಗವಾಗಬಹುದು ಎಂದು ಅಭಿಪ್ರಾಯಪಟ್ಟಿದೆ. ಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯು ನಿಯಮಗಳನ್ನು ಪುನರ್ ಪರಿಶೀಲಿಸಬೇಕು ಎಂದು ಹೇಳಿದೆ ಎಂಬುವುದಾಗಿ ಲೈವ್ ಲಾ ವರದಿ ಮಾಡಿದೆ.

ವಿಚಾರಣೆಯ ಸಮಯದಲ್ಲಿ, ಪೀಠವು ನಿಯಮಗಳಿಗೆ ಸಂಬಂಧಿಸಿದಂತೆ ಈ ಕೆಳಗಿನ ಸಮಸ್ಯೆಗಳನ್ನು ಮೌಖಿಕವಾಗಿ ಎತ್ತಿ ತೋರಿಸಿದೆ.

  1. ಈ ನಿಬಂಧನೆಗಳು ಅಸ್ಪಷ್ಟವಾಗಿದ್ದು, ದುರುಪಯೋಗವಾಗುವ ಸಾಧ್ಯತೆ ಇದೆ.
  2. ತಾರತಮ್ಯದ ವ್ಯಾಖ್ಯಾನದಲ್ಲಿ ಎಲ್ಲಾ ರೀತಿಯ ತಾರತಮ್ಯಗಳು ಒಳಗೊಂಡಿರುವಾಗ ‘ಜಾತಿ ಆಧಾರಿತ ತಾರತಮ್ಯ’ವನ್ನು ಪ್ರತ್ಯೇಕವಾಗಿ ಏಕೆ ವ್ಯಾಖ್ಯಾನಿಸಲಾಗಿದೆ?
  3. ರ‍್ಯಾಗಿಂಗ್ ಅನ್ನು ಏಕೆ ನಿಯಮಗಳಿಂದ ಹೊರಗಿಡಲಾಗಿದೆ?

ನಿಯಮಾವಳಿಯನ್ನು ಪುನರ್ ಪರಿಶೀಲಿಸುವಂತೆ ಸೂಚಿಸುತ್ತಾ ಸಿಜೆಐ ಸೂರ್ಯಕಾಂತ್ ಅವರು, “ಸಾಲಿಸಿಟರ್ ಜನರಲ್ (ಎಸ್‌ಜಿ) ಅವರೇ ನಿಮ್ಮ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಇಂದು ನಾವು ಯಾವುದೇ ಅಧಿಕೃತ ಆದೇಶವನ್ನು ಹೊರಡಿಸಲು ಬಯಸುವುದಿಲ್ಲ… ಬದಲಾಗಿ, ಪ್ರಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಒಂದು ಸಮಿತಿ ರಚನೆಯಾಗಬೇಕು. ಇದರಲ್ಲಿ 2-3 ತಜ್ಞರಿರಲಿ. ಅವರು ಸಾಮಾಜಿಕ ಮೌಲ್ಯಗಳು ಮತ್ತು ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವಂತಿರಬೇಕು. ನಾವು ಈ ನಿಯಮಗಳನ್ನು ರೂಪಿಸಿದರೆ ಇಡೀ ಸಮಾಜವು ಹೇಗೆ ಬೆಳೆಯಬೇಕು ಮತ್ತು ಕ್ಯಾಂಪಸ್‌ನಿಂದ ಹೊರಗೆ ಜನರು ಹೇಗೆ ವರ್ತಿಸಬೇಕು ಎಂಬುದರ ಬಗ್ಗೆ ಅವರು ಆಳವಾಗಿ ಯೋಚಿಸಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...