Homeಮುಖಪುಟಎನ್‌ಸಿಇಆರ್‌ಟಿ ಪಠ್ಯಪುಸ್ತಕದ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ “ನ್ಯಾಯಾಂಗದಲ್ಲಿನ ಭ್ರಷ್ಟಾಚಾರ” ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ.

ಈ ಕುರಿತು ನ್ಯಾಯಾಲಯವು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ತಿಳಿಸಿದ್ದಾರೆ.

“ಬಾರ್ & ಬೆಂಚ್ ಎಲ್ಲರೂ ಗೊಂದಲಕ್ಕೊಳಗಾಗಿದ್ದಾರೆ. ಎಲ್ಲಾ ಹೈಕೋರ್ಟ್ ನ್ಯಾಯಾಧೀಶರು ಗೊಂದಲಕ್ಕೊಳಗಾಗಿದ್ದಾರೆ. ನಾನು ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಳ್ಳುತ್ತೇನೆ. ಸಂಸ್ಥೆಯನ್ನು (ನ್ಯಾಯಾಂಗ) ದೂಷಿಸಲು ನಾನು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ” ಎಂದು ಸಿಜೆಐ ಕಾಂತ್ ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಪೀಠದಲ್ಲಿದ್ದ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರು ಕೂಡ ಇದನ್ನು ಸಂವಿಧಾನದ ಮೂಲ ರಚನೆಯ ಮೇಲಿನ ದಾಳಿ ಎಂದಿದ್ದಾರೆ. “ಪಠ್ಯ ಪುಸ್ತಕವು ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿ ಹೋದಂತೆ ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಎನ್‌ಸಿಇಆರ್‌ಟಿ ಪಠ್ಯ ಪುಸ್ತಕದಲ್ಲಿ “ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ” ಎಂಬ ಅಧ್ಯಾಯದ ಭಾಗವಾಗಿ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ವಿಭಾಗವಿದೆ.

ವರದಿಯ ಪ್ರಕಾರ, ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳಲ್ಲಿ ‘ನ್ಯಾಯಾಂಗದ ವಿವಿಧ ಹಂತಗಳಲ್ಲಿನ ಭ್ರಷ್ಟಾಚಾರ ಮತ್ತು ಸಾಕಷ್ಟು ಸಂಖ್ಯೆಯ ನ್ಯಾಯಾಧೀಶರ ಕೊರತೆ, ಸಂಕೀರ್ಣ ಕಾನೂನು ಕಾರ್ಯವಿಧಾನಗಳು ಮತ್ತು ಕಳಪೆ ಮೂಲಸೌಕರ್ಯದಂತಹ ಬಹು ಕಾರಣಗಳಿಂದಾಗಿ ಬೃಹತ್ ಪ್ರಕರಣಗಳು ಬಾಕಿ ಉಳಿದಿವೆ ಎಂದು ಅಧ್ಯಾಯವು ಪಟ್ಟಿ ಮಾಡಿದೆ.

ಹಿರಿಯ ವಕೀಲ ಕಪಿಲ್ ಸಿಬಲ್ ಬುಧವಾರ ನ್ಯಾಯಾಲಯಕ್ಕೆ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ. “ಎನ್‌ಸಿಇಆರ್‌ಟಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನ್ಯಾಯಾಂಗದ ಭ್ರಷ್ಟಾಚಾರದ ಬಗ್ಗೆ ಬೋಧಿಸುತ್ತಿದೆ. ಇದು ಗಂಭೀರ ಕಳವಳದ ವಿಷಯವಾಗಿದೆ. ನಾವು ಇಲ್ಲಿ ನ್ಯಾಯಾಂಗ ವ್ಯವಸ್ಥೆಯ (Bar) ಪರವಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಜೆಐ ಕಾಂತ್ ಅವರು, ಈ ವಿಷಯದ ಬಗ್ಗೆ ಈಗಾಗಲೇ ಸ್ವಯಂ ಪ್ರೇರಿತವಾಗಿ ಗಮನಹರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಸಂಸ್ಥೆಯ (ನ್ಯಾಯಾಂಗ) ಮುಖ್ಯಸ್ಥನಾಗಿ ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ ಮತ್ತು ಈ ವಿಷಯವನ್ನು ಅಧಿಕೃತವಾಗಿ ಗಮನಕ್ಕೆ ತೆಗೆದುಕೊಂಡಿದ್ದೇನೆ. ಇದು ವ್ಯವಸ್ಥಿತವಾಗಿ ಮಾಡಲಾದ ಸಂಚಿನಂತೆ (calculated move) ತೋರುತ್ತಿದೆ. ನಾನು ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ” ಎಂದು ನ್ಯಾಯಮೂರ್ತಿ ಕಾಂತ್ ಅವರು ತಿಳಿಸಿದ್ದಾರೆ.

ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೂಡ ಎನ್‌ಸಿಇಆರ್‌ಟಿಯನ್ನು ಟೀಕಿಸಿದ್ದಾರೆ.

“ಇದರಲ್ಲಿನ ಪಕ್ಷಪಾತವನ್ನು ನೋಡಿ ಮೈ ಲಾರ್ಡ್, ಆಯ್ದುಕೊಂಡಿರುವ ವಿಷಯಗಳನ್ನು ಗಮನಿಸಿ.. ಇದು (ಭ್ರಷ್ಟಾಚಾರ) ಇತರ ಕ್ಷೇತ್ರಗಳಲ್ಲೂ ಇದೆ, ಆದರೆ ನ್ಯಾಯಾಂಗದ ಭ್ರಷ್ಟಾಚಾರದ ಬಗ್ಗೆಯೇ ಆಯ್ದುಕೊಳ್ಳಲಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...