Homeಮುಖಪುಟಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಅಪರಾಧಿ ಪರಸ್ಪರ ಮದುವೆಯಾಗಲು ಒಪ್ಪಿಕೊಂಡ ಹಿನ್ನೆಲೆ, ಗುರುವಾರ (ಮೇ.15) ಅಪರಾಧಿಯ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಆತನಿಗೆ ಮಧ್ಯಂತರ ಜಾಮೀನು ನೀಡಿದೆ ಎಂದು livelaw.in ವರದಿ ಮಾಡಿದೆ.

ಮದುವೆಯಾಗುವುದಾಗಿ ಭರವಸೆ ಕೊಟ್ಟು ಯುವತಿ ಮೇಲೆ ದೀರ್ಘ ಕಾಲ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಪ್ರಕರಣದ ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376(2)(n)ಮತ್ತು 417 ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದ ಮಧ್ಯಪ್ರದೇಶದ ವಿಚಾರಣಾ ನ್ಯಾಯಾಲಯ, ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಪರಾಧಿ ಮಧ್ಯಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.

ಹೈಕೋರ್ಟ್‌ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ವಿಶೇಷ ಅನುಮತಿ ಕೋರಿ ಅಪರಾಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲಾಗಿದೆ.

ಪ್ರಕರಣದ ಸೂಕ್ಷ್ಮ ಸ್ವರೂಪವನ್ನು ಅರಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎಸ್.ಸಿ. ಶರ್ಮಾ ಅವರು, ತಮ್ಮ ಕೊಠಡಿಯಲ್ಲಿ ಪ್ರಕರಣದ ರಹಸ್ಯ ವಿಚಾರಣೆ ನಡೆಸುವ ತೀರ್ಮಾನ ಮಾಡಿದರು. ಗುರುವಾರ ಮಧ್ಯಾಹ್ನದ ಊಟಕ್ಕೆ ಮುಂಚಿನ ಅವಧಿಯಲ್ಲಿ ಎರಡೂ ಕಡೆಯವರನ್ನು (ಅರ್ಜಿದಾರ ಅಪರಾಧಿ ಮತ್ತು ಪ್ರತಿವಾದಿ ಸಂತ್ರಸ್ತೆ) ಕರೆದು ಕಾನೂನು ಸಲಹೆಗಾರರೊಂದಿಗೆ ಗೌಪ್ಯ ಚರ್ಚೆ ನಡೆಸಿದರು.

ಅರ್ಜಿದಾರ ಮತ್ತು ಸಂತ್ರಸ್ತೆ ಕಡೆಯವರಿಗೂ ಪರಸ್ಪರ ಚರ್ಚೆ ನಡೆಸಲು ನ್ಯಾಯಮೂರ್ತಿಗಳು ಅವಕಾಶ ನೀಡಿದ್ದರು. ಬಳಿಕ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭಗೊಂಡಾಗ ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಮದುವೆಯಾಗುವ ಇಚ್ಚೆ ವ್ಯಕ್ತಪಡಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಮದುವೆಯ ಕುರಿತು ಸಾಧ್ಯವಾದಷ್ಟು ಬೇಗ ನಿರ್ಧರಿಸುವಂತೆ ಎರಡೂ ಕಡೆಯವರ ಪೋಷಕರಿಗೆ ಸೂಚಿಸಿತು.

“ಅರ್ಜಿದಾರರು ಮತ್ತು ಪ್ರತಿವಾದಿ ಸಂಖ್ಯೆ 2 ಪರಸ್ಪರ ಮದುವೆಯಾಗಲು ಸಿದ್ಧರಿದ್ದೇವೆ ಎಂದು ನಮ್ಮ ಮುಂದೆ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಅವರ ವಿವಾಹದ ಬಗ್ಗೆ ಅವರ ಪೋಷಕರು ನಿರ್ಧರಿಸುತ್ತಾರೆ. ಮದುವೆ ಸಾಧ್ಯವಾದಷ್ಟು ಬೇಗ ನಡೆಯಲಿ ಎಂದು ನಾವು ಆಶಿಸುತ್ತೇವೆ. ಹಾಗಾಗಿ, ನಾವು ಅರ್ಜಿದಾರರ ಶಿಕ್ಷೆಯನ್ನು ನಾವು ಅಮಾನತುಗೊಳಿಸುತ್ತಿದ್ದೇವೆ ಮತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದ್ದಾಗಿ livelaw.in ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25, 2025ಕ್ಕೆ ನಿಗದಿ ಮಾಡಲಾಗಿದೆ. ಗುರುವಾರ ನಡೆದಿರುವುದು ಭಾಗಶಃ ವಿಚಾರಣೆ ಎಂದು ಹೇಳಲಾಗಿದೆ. ಅರ್ಜಿದಾರ ಮತ್ತು ಪ್ರತಿವಾದಿಯ ಮದುವೆಯ ಕುರಿತು ನ್ಯಾಯಾಲಯ ಮೇಲ್ವಿಚಾರಣೆ ಮಾಡಲಿದೆ.

ಮಧ್ಯಪ್ರದೇಶದ ಸಾಗರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಮದುವೆಯಾಗುವುದಾಗಿ ಭರವಸೆ ಕೊಟ್ಟು ತನ್ನ ಮೇಲೆ 2016 ರಿಂದ ಲೈಂಗಿಕ ಸಂಬಂಧ ಬೆಳೆಸಿದ ಯುವಕ, 2018ರಲ್ಲಿ ಮದುವೆಯಾಗಲು ನಿರಾಕರಿಸಿದರು ಎಂದು ಆರೋಪಿಸಿದ ಯುವತಿ ಪ್ರಕರಣ ದಾಖಲಿಸಿದ್ದರು.

ಅರ್ಜಿದಾರರ ಪರ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಾದ ಮಂಡಿಸಿದ ಅವರ ವಕೀಲರು, “ಇಬ್ಬರದ್ದು ಒಪ್ಪಿತ ಸಂಬಂಧವಾಗಿತ್ತು, ಅತ್ಯಾಚಾರವಲ್ಲ. ವಿಚಾರಣೆ ವೇಳೆ ಪ್ರತಿವಾದಿ ಪೋಷಕರ ಒತ್ತಡಕ್ಕೆ ಮಣಿದು ದೂರು ನೀಡಿರುವುದು ಗೊತ್ತಾಗಿದೆ. ಅರ್ಜಿದಾರರು ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಉಜ್ವಲ ಭವಿಷ್ಯದ ನಿರೀಕ್ಷೆಗಳನ್ನು ಹೊಂದಿದ್ದಾರೆ. ದೀರ್ಘಕಾಲದ ಸೆರೆವಾಸವು ಅವರ ವೃತ್ತಿ ಮತ್ತು ಮುಂದಿನ ಜೀವನವನ್ನು ನಾಶಪಡಿಸಲಿದೆ” ಎಂದು ಹೇಳಿದ್ದಾರೆ.

ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯವು ಅರ್ಹತೆಗಳ ಆಧಾರದ ಮೇಲೆ ನಿರ್ಧರಿಸುವ ಬದಲು, ಪರಸ್ಪರ ವಯಸ್ಕ ಒಪ್ಪಿಗೆಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಂಡಿದೆ ಎಂದು livelaw.in ಹೇಳಿದೆ.

ಸ್ವಾತಂತ್ರ್ಯದ 80 ವರ್ಷಗಳ ಬಳಿಕವೂ ದಲಿತರ ಮೇಲಿನ ತಾರತಮ್ಯ ನೋವಿನ ಸಂಗತಿ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...