Homeಮುಖಪುಟವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಯಾದವ್ ವಿವಾದಾತ್ಮಕ ಭಾಷಣ ಮಾಡಿರುವ ಕುರಿತು ಪ್ರಕಟಗೊಂಡಿರುವ ಸುದ್ದಿಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಯಾದವ್ ಮಾಡಿರುವ ಭಾಷಣದ ಪೂರ್ಣಪಾಠ ಪಡೆದು ಮಾಹಿತಿ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ನ್ಯಾ.ಯಾದವ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಹಲವು ದೂರುಗಳನ್ನು ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಮಾಹಿತಿ ಕೋರಿದೆ.

ನ್ಯಾ. ಯಾದವ್ ಅವರ ಭಾಷಣದ ಕುರಿತು ಕಳವಳ ವ್ಯಕ್ತಪಡಿಸಿ ಸೋಮವಾರ (ಡಿ.9) ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಮತ್ತು ಕ್ಯಾಂಪೇನ್ ಫಾರ್ ಜುಡೀಶಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ಸಿಜೆಐ ಸಂಜೀವ್ ಖನ್ನಾ ಅವರಿಗೆ ಪತ್ರ ಬರೆದಿದ್ದರು.

ನ್ಯಾ. ಶೇಖರ್ ಕುಮಾರ್ ಯಾದವ್ ವಿರುದ್ಧ ಆಂತರಿಕ ತನಿಖೆ ನಡೆಸುವಂತೆ ಮತ್ತು ವಿಚಾರಣೆಗೆ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಅವರಿಂದ ವಾಪಸ್ ಪಡೆಯುವಂತೆ ಸಿಜೆಎಆರ್ ತನ್ನ ಪತ್ರದಲ್ಲಿ ಒತ್ತಾಯಿಸಿತ್ತು. ಯಾದವ್ ಅವರ ಹೇಳಿಕೆಗಳು ಅವರ ನ್ಯಾಯಾಂಗ ಕಾರ್ಯಗಳ ನಿರ್ವಹಣೆಯಲ್ಲಿ ನಿಷ್ಪಕ್ಷಪಾತ, ನ್ಯಾಯಸಮ್ಮತತೆ ಮತ್ತು ತಟಸ್ಥತೆಯ ಕೊರತೆಯನ್ನು ಸೂಚಿಸುತ್ತದೆ ಎಂದಿತ್ತು.

ನ್ಯಾ. ಯಾದವ್ ಅವರ ಹೇಳಿಕೆ ಇಡೀ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುತ್ತವೆ. ಇಂತಹ ಪಕ್ಷಪಾತ ಪ್ರದರ್ಶಿಸುವ ವ್ಯಕ್ತಿಗಳಿಗೆ ನ್ಯಾಯಾಂಗದಲ್ಲಿ ಸ್ಥಾನವಿಲ್ಲ ಎಂದು ರಾಜ್ಯಸಭೆಯ ಮಾಜಿ ಸಂಸದೆಯೂ ಆಗಿರುವ ಬೃಂದಾ ಕಾರಟ್ ಸಿಜೆಐಗೆ ಬರೆದ ಪತ್ರದಲ್ಲಿ ಹೇಳಿದ್ದರು.

ನ್ಯಾಯಾಧೀಶರು ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಪೂರ್ವಾಗ್ರಹ ಪೀಡಿತ ಅಭಿಪ್ರಾಯಗಳನ್ನು ಹೊಂದಿರುವ ಕಾರಣ ಅವರಿಂದ ಯಾವುದೇ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ನ್ಯಾಯಮೂರ್ತಿ ಯಾದವ್ ಅವರ ಭಾಷಣವು ಸಂವಿಧಾನದ ಮೇಲಿನ ದಾಳಿಯಾಗಿದೆ ಭಾರತ ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ಅವಮಾನವಾಗಿದೆ ಎಂದು ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯ ಬೃಂದಾ ಕಾರಟ್ ಅಸಮಧಾನ ವ್ಯಕ್ತಪಡಿಸಿದ್ದರು.

ನ್ಯಾ. ಯಾದವ್ ಅವರ ವಿವಾದಾತ್ಮಕ ಭಾಷಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಸಂಸದ ಅಸಾದುದ್ದೀನ್ ಓವೈಸಿ ಅವರು ಯಾದವ್ ಅವರನ್ನು ಪದಚ್ಯುತಿಗೊಳಿಸುವ ನೋಟಿಸ್‌ಗೆ ಸಹಿ ಹಾಕಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಓವೈಸಿ, “ನ್ಯಾಯಾಧೀಶರ ನಡವಳಿಕೆಯು ಸುಪ್ರೀಂ ಕೋರ್ಟ್‌ನ ‘ನ್ಯಾಯಾಂಗ ಜೀವನದ ಮೌಲ್ಯಗಳ ಮರುಸ್ಥಾಪನೆ’ ನಿಯಮ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಉಲ್ಲಂಘಿಸಿದೆ” ಎಂದಿದ್ದಾರೆ.

“ನನ್ನ ನೋಟಿಸ್ ಅನ್ನು ಲೋಕಸಭಾ ಸ್ಪೀಕರ್ ಪರಿಗಣಿಸಬೇಕಾದರೆ 100 ಲೋಕಸಭಾ ಸದಸ್ಯರ ಸಹಿ ಬೇಕಾಗಿದೆ” ಎಂದು ಓವೈಸಿ ತಿಳಿಸಿದ್ದಾರೆ.

ನ್ಯಾ. ಶೇಖರ್ ಕುಮಾರ್ ಯಾದವ್ ಭಾಷಣಕ್ಕೆ ಅಖಿಲ ಭಾರತ ವಕೀಲರ ಒಕ್ಕೂಟ ಕೂಡ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಷ್ಟ್ರಪತಿ ಮತ್ತು ಸಿಜೆಐಗೆ ಪತ್ರ ಬರೆದಿರುವ ಒಕ್ಕೂಟ, “ಯಾದವ್ ಅವರ ಭಾಷಣ ಮುಸ್ಲಿಂ ಅಲ್ಪಸಂಖ್ಯಾತರರ ವಿರುದ್ದದ ದ್ವೇಷ ಭಾಷಣವಾಗಿದೆ”ಎಂದಿದೆ. ಯಾದವ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಇದನ್ನೂ ಓದಿ : ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...