Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್...

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಶಿಕ್ಷಕಿಯ ಆಜ್ಞೆಯ ಮೇರೆಗೆ 2023ರಲ್ಲಿ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಝಫ್ಫರ್‌ನಗರದ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣದ ವೆಚ್ಚವನ್ನು ಭರಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಉತ್ತರ ಪ್ರದೇಶ (ಯುಪಿ) ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು, “ಸರ್ಕಾರ ಬಾಲಕನ ಶಾಲಾ ವೆಚ್ಚಗಳನ್ನು ಭರಿಸುವಂತೆ ಶಾಲೆಯ ಆಡಳಿತ ಮಂಡಳಿಯ ಮನವೊಲಿಸಬಹುದು. ಆದರೆ, ವೆಚ್ಚ ಭರಿಸುವ ಪ್ರಾಥಮಿಕ ಜವಾಬ್ದಾರಿ ಸರ್ಕಾರದ ಮೇಲಿರುತ್ತದೆ ಎಂಬುವುದಾಗಿ ಹೇಳಿದೆ ಎಂದು barandbench.com ವರದಿ ಮಾಡಿದೆ.

“ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಬೋಧನಾ ಶುಲ್ಕ, ಸಮವಸ್ತ್ರ, ಪುಸ್ತಕ ಮತ್ತು ಸಾರಿಗೆ ವೆಚ್ಚವನ್ನು ಭರಿಸುವುದು ರಾಜ್ಯ ಸರ್ಕಾರದ ಬಾಧ್ಯತೆಯಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಆಗಸ್ಟ್ 2023ರಲ್ಲಿ, ಶಾಲಾ ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರು ಏಳು ವರ್ಷದ ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೋರಿ ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ಮುಸ್ಲಿಂ ವಿದ್ಯಾರ್ಥಿಯ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಲ್ಲದೆ, ಆತನಿಗೆ ಹೊಡೆಯುವಂತೆ ಸಹಪಾಠಿಗಳನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕನಿಗೆ ಕಪಾಳಮೋಕ್ಷದ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ, ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ನಂತರ ವಿದ್ಯಾರ್ಥಿಯನ್ನು ಬೇರೆ ಶಾಲೆಗೆ ವರ್ಗಾಯಿಸಲಾಯಿತು.

ಈ ವಿಷಯದ ಬಗ್ಗೆ ಕಾಲಮಿತಿಯ ಮತ್ತು ಸ್ವತಂತ್ರ ತನಿಖೆ ಮಾಡಬೇಕು. ಧಾರ್ಮಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ಗಾಂಧಿಯವರು ತನ್ನ ಅರ್ಜಿಯಲ್ಲಿ ಕೋರಿದ್ದರು.

ಶಾಲಾ ಶಿಕ್ಷಕಿಯ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅಕ್ಟೋಬರ್ 2023ರಲ್ಲಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ನಂತರ ಆರೋಪಿ ಶಿಕ್ಷಕಿ ನ್ಯಾಯಾಲಯದ ಮುಂದೆ ಶರಣಾಗಿದ್ದರು, ಮತ್ತು ಜಾಮೀನು ಪಡೆದರು.

ಪ್ರಕರಣದ ಸಂಬಂಧ ಕಳೆದ ವರ್ಷ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯ ಶಾಲಾ ವೆಚ್ಚವನ್ನು ಭರಿಸಲು ರಾಜ್ಯವು ಪ್ರಾಯೋಜಕರನ್ನು ಹುಡುಕಬೇಕೆಂದು ಸೂಚಿಸಿತ್ತು.

ಬುಧವಾರ ತುಷಾರ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಶದನ್ ಫರಾಸತ್, “ರಾಜ್ಯ ಸರ್ಕಾರ ಮಗುವಿನ ಶಾಲಾ ಸಮವಸ್ತ್ರದ ಶುಲ್ಕ ಮತ್ತು ಬೋಧನಾ ಶುಲ್ಕವನ್ನು ಭರಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಸೈಯದ್ ಮುರ್ತಾಜಾ ಸ್ಮಾರಕ ಟ್ರಸ್ಟ್ ವಿದ್ಯಾರ್ಥಿಯ ವೆಚ್ಚ ಭರಿಸಲು ಮುಂದಾಗಿದೆ ಎಂದು ಹೇಳಿದೆ.

“ನಾವು ದಾಖಲೆಗಾಗಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಬಹುದು. ಆದರೆ, ಬಾಲಕನ ವೆಚ್ಚವನ್ನು ಟ್ರಸ್ಟ್ ನೇರವಾಗಿ ಶಾಲೆಗೆ ಪಾವತಿಸುತ್ತದೆ” ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಆದಾಗ್ಯೂ, ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಶೈಕ್ಷಣಿಕ ವೆಚ್ಚ ಭರಿಸುವುದು ಪ್ರಾಥಮಿಕವಾಗಿ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಟ್ರಸ್ಟ್ ಒಂದು ವರ್ಷವರೆಗೆ ಬಾಲಕನ ವೆಚ್ಚ ಭರಿಸುವುದಾಗಿ ತಿಳಿಸಲಾಗಿದೆ. ಇನ್ನು ಹೆಚ್ಚಿನ ಅವಧಿಗೆ ವೆಚ್ಚ ಭರಿಸಲು ಟ್ರಸ್ಟ್‌ನ ಮನವೊಲಿಸಲು ಸರ್ಕಾಕ್ಕೆ ಅವಕಾವಶವಿದೆ. ಆದರೆ, ಪ್ರಾಥಮಿಕವಾಗಿ ವೆಚ್ಚ ಭರಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಅಕ್ಟೋಬರ್ 17 ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದೆ.

ಸಾರ್ವತ್ರಿಕ ಸಬಲೀಕರಣಕ್ಕೆ ಜಾತಿ ಜನಗಣತಿ ನನ್ನ ಬಹುಕಾಲದ ಬೇಡಿಕೆಯಾಗಿದೆ: ರಾಮದಾಸ್ ಅಠಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...