Homeಮುಖಪುಟನ.25ರಂದು ಶರ್ಜೀಲ್ ಇಮಾಮ್ -ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನ.25ರಂದು ಶರ್ಜೀಲ್ ಇಮಾಮ್ -ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

- Advertisement -
- Advertisement -

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ಹಿಂದಿನ ‘ದೊಡ್ಡ ಸಂಚು’ ಆರೋಪಕ್ಕೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತರಾದ ಶರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 25ರ ಬುಧವಾರ ನಡೆಸುವ ಸಾಧ್ಯತೆಯಿದೆ.

ಸುಪ್ರೀಂ ಕೋರ್ಟ್‌ನ ಕಲಾಪಗಳ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನು ಒಳಗೊಂಡ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳಲ್ಲಿ ಇಬ್ಬರೂ ಜಾಮೀನು ಕೋರಿದ್ದಾರೆ. ವಿಚಾರಣಾ ಪ್ರಕ್ರಿಯೆಯಲ್ಲಿ ರಕ್ಷಿತ ಸಾಕ್ಷಿಗಳ ವಿಚಾರಣೆಯನ್ನು ಪ್ರಾಸಿಕ್ಯೂಷನ್ ಇನ್ನೂ ನಡೆಸಿಲ್ಲ ಮತ್ತು ಸುಪ್ರೀಂ ಕೋರ್ಟ್ ವಿಧಿಸಿರುವ ಒಂದು ವರ್ಷದ ನಿರ್ಬಂಧದ ಅವಧಿ ಮುಕ್ತಾಯಗೊಳ್ಳುವ ಹಂತದಲ್ಲಿದೆ ಎಂದು ಅವರು ವಾದಿಸಿದ್ದಾರೆ.

ಇಮಾಮ್ ಸಲ್ಲಿಸಿರುವ ಅರ್ಜಿಯಲ್ಲಿ, 2020ರ ಸೆಪ್ಟೆಂಬರ್ 25ರಂದು ಆರೋಪಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣದಲ್ಲಿ 18 ಆರೋಪಿಗಳು ವಿಚಾರಣೆ ಎದುರಿಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಒಟ್ಟು 900ಕ್ಕೂ ಹೆಚ್ಚು ಸಾಕ್ಷಿಗಳನ್ನು ಉಲ್ಲೇಖಿಸಿದ್ದು, ಅವರಲ್ಲಿ 47 ಮಂದಿ ರಕ್ಷಿತ ಸಾಕ್ಷಿಗಳಾಗಿದ್ದಾರೆ ಎಂದು ತಿಳಿಸಲಾಗಿದೆ.

ಖಾಲಿದ್ ಕೂಡ ತಮ್ಮ ಅರ್ಜಿಯಲ್ಲಿ ರಕ್ಷಿತ ಸಾಕ್ಷಿಗಳ ವಿಚಾರಣೆ ನಡೆಸದಿರುವುದನ್ನು ಪ್ರಸ್ತಾಪಿಸಿದ್ದಾರೆ. ಒಂದು ವರ್ಷದ ನಿರ್ಬಂಧದ ಅವಧಿ ಮುಕ್ತಾಯಗೊಂಡ ನಂತರವೂ ತಮ್ಮನ್ನು ಜೈಲಿನಲ್ಲಿ ಮುಂದುವರಿಸುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಲಿದೆ ಎಂದು ಅವರು ವಾದಿಸಿದ್ದಾರೆ.

ವಿಚಾರಣಾಧೀನ ಕೈದಿಯಾಗಿ ಆರು ವರ್ಷ ಮತ್ತು ಒಂಬತ್ತು ತಿಂಗಳು ಕಳೆದಿದ್ದರೂ, ಪ್ರಾಸಿಕ್ಯೂಷನ್ ಈವರೆಗೆ ಒಬ್ಬನೇ ಒಬ್ಬ ಸಾಕ್ಷಿಯ ವಿಚಾರಣೆಯನ್ನೂ ಪೂರ್ಣಗೊಳಿಸಿಲ್ಲ ಎಂದು ಇಮಾಮ್ ಅರ್ಜಿಯಲ್ಲಿ ತಿಳಿಸಿದ್ದಾರೆ.

2020ರ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳ ಹಿಂದಿನ ‘ದೊಡ್ಡ ಸಂಚು’ ಆರೋಪಕ್ಕೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಖಾಲಿದ್ ಮತ್ತು ಇಮಾಮ್‌ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 30ರಂದು ನಿರಾಕರಿಸಿತ್ತು.

‘ನ್ಯಾಯಾಂಗ ಶಿಸ್ತು’ ಪಾಲಿಸುವ ಬದ್ಧತೆ ಇರುವುದರಿಂದ, ಸುಪ್ರೀಂ ಕೋರ್ಟ್ ಜನವರಿ 5ರಂದು ನೀಡಿದ್ದ ಆದೇಶವನ್ನು ತಾನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ರಕ್ಷಿತ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ನಂತರ ಅಥವಾ ಒಂದು ವರ್ಷದ ಅವಧಿ ಮುಗಿದ ನಂತರ, ಇವೆರಡರಲ್ಲಿ ಯಾವುದು ಮೊದಲೋ ಆ ಸಂದರ್ಭದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆರೋಪಿಗಳಿಗೆ ಸೂಚಿಸಿತ್ತು.

ಬಂಧನದ ನಂತರ ಮೂರನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜುಲೈ 4ರಂದು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಖಾಲಿದ್ ಮತ್ತು ಇಮಾಮ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್ ಜನವರಿ 5ರಂದು ನೀಡಿದ್ದ ಆದೇಶವನ್ನು ಪಾಲಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಹೀಗಾಗಿ, ಜಾಮೀನು ಅರ್ಜಿಗಳನ್ನು ವಿಚಾರಣೆಗೆ ಸ್ವೀಕರಿಸುವುದಾಗಲಿ ಅಥವಾ ಯಾವುದೇ ಪರಿಹಾರ ನೀಡುವುದಾಗಲಿ ಸಾಧ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ಹೇಳಿತ್ತು.

ಜನವರಿಯಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ, ಇತರ ಸಹ ಆರೋಪಿಗಳಿಗಿಂತ ಖಾಲಿದ್ ಮತ್ತು ಇಮಾಮ್ ಪಾತ್ರಗಳು ಭಿನ್ನವಾಗಿವೆ. ಅವರು ಆರೋಪಿತ ಸಂಚಿನ ‘ಮಾಸ್ರ್ ಮೈಂಡ್‌’ಗಳು ಎಂದು ಸುಪ್ರೀಂ ಕೋರ್ಟ್ ಹೇಳಿದ್ದನ್ನು ಹೈಕೋರ್ಟ್ ಉಲ್ಲೇಖಿಸಿತ್ತು.

2020ರ ಫೆಬ್ರವರಿ ಗಲಭೆಗಳ ಹಿಂದಿನ ಪ್ರಮುಖ ಸಂಚುಕೋರರಲ್ಲಿ ಖಾಲಿದ್ ಮತ್ತು ಇಮಾಮ್ ಕೂಡ ಸೇರಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಗಲಭೆಗಳಲ್ಲಿ 53 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

2019ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರರ ನೋಂದಣಿ (ಎನ್‌ಸಿಆರ್) ವಿರುದ್ಧ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಈ ಹಿಂಸಾಚಾರ ಭುಗಿಲೆದ್ದಿತ್ತು.

ವಿದ್ಯಾರ್ಥಿ ಕಾರ್ಯಕರ್ತ ಖಾಲಿದ್ ಸೈಫಿ ಮತ್ತು ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಸೇರಿದಂತೆ ಇತರರ ವಿರುದ್ಧವೂ ಈ ದೊಡ್ಡ ಸಂಚಿನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿದೆ.

2020ರ ಆಗಸ್ಟ್ 25ರಂದು ಇಮಾಮ್ ಅವರನ್ನು ಬಂಧಿಸಲಾಗಿತ್ತು. ಅದೇ ವರ್ಷದ ಸೆಪ್ಟೆಂಬರ್ 13ರಂದು ಖಾಲಿದ್ ಅವರನ್ನು ಬಂಧಿಸಲಾಗಿತ್ತು.

2025ರ ಸೆಪ್ಟೆಂಬರ್ 2ರಂದು ಹೈಕೋರ್ಟ್‌ನ ವಿಭಾಗೀಯ ಪೀಠವು ಖಾಲಿದ್ ಮತ್ತು ಇಮಾಮ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು.

ಜನವರಿ 5ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಎತ್ತಿಹಿಡಿದಿದ್ದರೂ, ಪ್ರಕರಣದ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಆಗ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನು ಒಳಗೊಂಡ ಪೀಠವು, ಖಾಲಿದ್ ಮತ್ತು ಇಮಾಮ್ ವಿರುದ್ಧ ಯುಎಪಿಎ ಅಡಿಯಲ್ಲಿ ಮೇಲ್ನೋಟಕ್ಕೆ ಪ್ರಕರಣವಿದೆ ಎಂದು ಅಭಿಪ್ರಾಯಪಟ್ಟಿತ್ತು.

ವಿಚಾರಣೆಯಲ್ಲಿನ ವಿಳಂಬವನ್ನು ಮುಂದಿಟ್ಟುಕೊಂಡು ಜಾಮೀನು ಕೋರುವ ಅವರ ವಾದವನ್ನು ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್, 2020ರಿಂದ ಜೈಲಿನಲ್ಲಿರುವ ಖಾಲಿದ್ ಮತ್ತು ಇಮಾಮ್, ರಕ್ಷಿತ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ನಂತರ ಅಥವಾ ಆದೇಶದ ದಿನಾಂಕದಿಂದ ಒಂದು ವರ್ಷ ಕಳೆದ ಬಳಿಕ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು.

ಮೇ 22ರಂದು ಸುಪ್ರೀಂ ಕೋರ್ಟ್ ಇದೇ ಪ್ರಕರಣದ ಸಹ ಆರೋಪಿಗಳಾದ ಅಬ್ದುಲ್ ಖಾಲಿದ್ ಸೈಫಿ ಮತ್ತು ತಸ್ಲೀಂ ಅಹ್ಮದ್ ಅವರಿಗೆ ಆರು ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಯುಎಪಿಎ ಕಾಯ್ದೆಯಡಿ ಜಾಮೀನು ಪಡೆಯಲು ಇರುವ ಕಠಿಣ ಷರತ್ತುಗಳ ಹಿನ್ನೆಲೆಯಲ್ಲಿ, ವಿಚಾರಣಾಧೀನ ಕೈದಿಗಳನ್ನು ದೀರ್ಘಕಾಲ ಬಂಧನದಲ್ಲಿಡುವ ವಿಚಾರವನ್ನು ಹೆಚ್ಚಿನ ನ್ಯಾಯಮೂರ್ತಿಗಳನ್ನು ಒಳಗೊಂಡ ದೊಡ್ಡ ಪೀಠದ ಪರಿಶೀಲನೆಗೆ ಒಪ್ಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಡನ್‌ಗೆ ತೆರಳುತ್ತಿದ್ದ ಸಿಜೆಪಿಯ ಸೌರವ್ ದಾಸ್‌ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಮತ್ತು ವಕ್ತಾರ ಸೌರವ್ ದಾಸ್ ಅವರನ್ನು ಬ್ರಿಟನ್‌ಗೆ ಪ್ರಯಾಣಿಸದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ. ಸೋಮವಾರ (ನ.23) ರಾತ್ರಿ ಲಂಡನ್‌ಗೆ ತೆರಳುವ ವಿಮಾನವನ್ನು ಏರಲು ಸಿದ್ಧರಾಗಿದ್ದಾಗ...

ಸೆಂಟ್ರಲ್ ವಿಸ್ತಾ ಯೋಜನೆಗಾಗಿ ವಕ್ಫ್ ಸ್ಥಾನಮಾನ ಪರಿಗಣಿಸದೆ ಕದೀಮಿ ಮಸೀದಿ ಕೆಡವಲು ಸಾಧ್ಯವಿಲ್ಲ: ದೆಹಲಿ ಹೈಕೋರ್ಟ್‌ಗೆ ವಕ್ಫ್ ಮಂಡಳಿ ಉತ್ತರ

ನವದೆಹಲಿ: ದೆಹಲಿಯ ಕೃಷಿ ಭವನ ಆವರಣದಲ್ಲಿರುವ ಕದೀಮಿ ಮಸೀದಿಯು (Qadeemi Masjid) ಅಧಿಕೃತವಾಗಿ ಅಧಿಸೂಚಿತ ವಕ್ಫ್ ಆಸ್ತಿಯಾಗಿದ್ದು, ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಗೆ ಅನುಕೂಲ ಮಾಡಿಕೊಡುವ ಏಕೈಕ ಕಾರಣಕ್ಕೆ ಅದರ ಧಾರ್ಮಿಕ ಸ್ವರೂಪ...

ಅಮಾನತು ರದ್ದುಗೊಳಿಸಿದ ಕೇರಳ ಹೈಕೋರ್ಟ್; 22 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಲಡಿ ಸಂಸ್ಕೃತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು

ಕೇರಳದ ಕಾಲಡಿಯಲ್ಲಿರುವ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದ 16 ವಿದ್ಯಾರ್ಥಿಗಳ ಅಮಾನತು ಆದೇಶವನ್ನು ಕೇರಳ ಹೈಕೋರ್ಟ್ ಸೋಮವಾರ (ನ.23) ರದ್ದುಗೊಳಿಸಿದೆ. ನ್ಯಾಯಾಲಯದ ಈ ತೀರ್ಪಿನ ಬೆನ್ನಲ್ಲೇ, ಕಳೆದ 22 ದಿನಗಳಿಂದ ಉಪವಾಸ ಸತ್ಯಾಗ್ರಹ...

ಜಪಾನ್‌ನ ಮೊತೊಮಚಿ ಟೊಯೊಟೊ ಘಟಕಕ್ಕೆ ಸಿಎಂ ಭೇಟಿ; ಬೆಂಗಳೂರಿನಿಂದ ಹೊರಗೆ ಆರ್ಥಿಕ ಅವಕಾಶ ವಿಸ್ತರಿಸುವ ಗುರಿ

"ಕರ್ನಾಟಕ ರಾಜ್ಯದಲ್ಲಿ ಹೂಡಿಕೆ ಆಕರ್ಷಸಿ, ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧವಾಗಿದ್ದೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ರಾಜ್ಯ ಸರ್ಕಾರದ ಹೂಡಿಕೆ ಆಕರ್ಷಣೆ ಅಭಿಯಾನದ ಭಾಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳ SIR: ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹೋದವರ ಮೇಲ್ಮನವಿಗಳಿಗೆ ಮೊದಲ ಆದ್ಯತೆ; ಸೇರ್ಪಡೆ ವಿರುದ್ಧದ ಅರ್ಜಿ ಮುಂದೂಡಲು ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR — Special Intensive Revision) ಪ್ರಕ್ರಿಯೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲ್ಪಟ್ಟಿರುವ (deleted) ನಾಗರಿಕರು ಸಲ್ಲಿಸಿರುವ ಮೇಲ್ಮನವಿಗಳಿಗೆ ಮೊದಲ...

ಗೋಧ್ರಾ ರೈಲು ದಹನ ಪ್ರಕರಣ : ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಇರ್ಫಾನ್ ಸಿರಾಜ್ ಪಾಡಾ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.23) ಅಮಾನತುಗೊಳಿಸಿದ್ದು, ವೈದ್ಯಕೀಯ ಕಾರಣಗಳ ಆಧಾರದ ಮೇಲೆ ಜಾಮೀನು ಮಂಜೂರು...

ನೇಪಾಳದ ಪುನರ್‌ನಿರ್ಮಾಣಕ್ಕೆ ಭಾರತದಿಂದ ₹15,000 ಕೋಟಿ ನೆರವು; ‘ಉಭಯ ದೇಶಗಳ ಸಂಬಂಧ ಹಿಮಾಲಯದಷ್ಟೇ ದೃಢವಾಗಿವೆ’ ಎಂದ ಪ್ರಧಾನಿ ಬಲೇಂದ್ರ ಶಾ

ನೇಪಾಳ: ಪ್ರವಾಹದಿಂದ ತೀವ್ರ ಹಾನಿಗೊಳಗಾಗಿರುವ ನೇಪಾಳದ ಪುನರ್‌ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಭಾರತ ಸುಮಾರು 15,000 ಕೋಟಿ ರೂಪಾಯಿಗಳ ನೆರವು ಪ್ಯಾಕೇಜ್ ಘೋಷಿಸಿದೆ. ಸೋಮವಾರ ನೇಪಾಳದ ಪ್ರಧಾನಿ ಬಲೇಂದ್ರ ಶಾ ಅವರೊಂದಿಗಿನ ಜಂಟಿ...

ಧ್ರುವ್ ರಾಠೀ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿ

2018ರ ಮಾನನಷ್ಟ ಮೊಕದ್ದಮೆಯೊಂದಕ್ಕೆ ಸಂಬಂಧಿಸಿದಂತೆ, ಯೂಟ್ಯೂಬರ್ ಧ್ರುವ್ ರಾಠೀ ವಿರುದ್ಧ ದೆಹಲಿ ನ್ಯಾಯಾಲಯವೊಂದು ಸೋಮವಾರ (ನ.23) ಜಾಮೀನು ರಹಿತ ವಾರಂಟ್ ಹೊರಡಿಸಿದೆ. ರಾಠೀ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೊವೊಂದಕ್ಕೆ ಸಂಬಂಧಿಸಿದಂತೆ, ವಿಕಾಸ್...

ಡಿಲಿಮಿಟೇಶನ್ ಮಸೂದೆ ಬೆಂಬಲಿಸಲು ಸಂಸದರಿಗೆ ಬಿಜೆಪಿಯಿಂದ ತಲಾ 150 ಕೋಟಿ ರೂ. ಆಫರ್ : ಸಂಜಯ್ ರಾವುತ್ ಗಂಭೀರ ಆರೋಪ

ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗೆ ಬೆಂಬಲ ಪಡೆಯುವ ಸಲುವಾಗಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಸಂಸದರಿಗೆ ತಲಾ 150 ಕೋಟಿ ರೂಪಾಯಿ ಆಫರ್ ಮಾಡುತ್ತಿದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ)...

ಮಧ್ಯಪ್ರದೇಶ| ದೇವಸ್ಥಾನ ಪ್ರವೇಶಿಸದಂತೆ ತಡೆದ ಸವರ್ಣೀಯರು; ಎಸ್‌ಪಿ ಕಚೇರಿ ಮುಂದೆ ದಲಿತ ಮಹಿಳೆಯರಿಂದ ಪ್ರತಿಭಟನೆ

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ರಿಚ್ಛಾರಾ ಗ್ರಾಮದ ದಲಿತ ಮಹಿಳೆಯರು, ತಮ್ಮ ಜಾತಿಯ ಕಾರಣಕ್ಕೆ ಹೊಸದಾಗಿ ನಿರ್ಮಿಸಲಾದ ಶಿವ ದೇವಾಲಯ ಪ್ರವೇಶಿಸಲು ಮತ್ತು ಶಿವಲಿಂಗಕ್ಕೆ ನೀರು ಅರ್ಪಿಸಲು ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಗುರುವಾರ ಕುಟುಂಬದ ಸದಸ್ಯರು...