Homeಮುಖಪುಟಆರಾಧನಾ ಸ್ಥಳಗಳ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕೋರಿ ಓವೈಸಿ ಅರ್ಜಿ : ವಿಚಾರಣೆಗೆ ಒಪ್ಪಿದ ಸುಪ್ರೀಂ...

ಆರಾಧನಾ ಸ್ಥಳಗಳ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕೋರಿ ಓವೈಸಿ ಅರ್ಜಿ : ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್

- Advertisement -
- Advertisement -

ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ-1991ರ ಪರಿಣಾಮಕಾರಿ ಅನುಷ್ಠಾನ ಕೋರಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್‌-ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ (ಜ.2) ಒಪ್ಪಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠವು ಜಮಿಯತ್ ಉಲಮಾ-ಎ-ಹಿಂದ್ ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನು ಸೇರಿಸಲು ಆದೇಶಿಸಿದೆ.

ಓವೈಸಿ ಪರ ವಕೀಲ ನಿಝಾಮುದ್ದೀನ್ ಪಾಷಾ ವಾದ ಮಂಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.

ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ (ಪಿಐಎಲ್) ಕಕ್ಷಿದಾರರಾಗಿ ಸೇರ್ಪಡೆಗೊಳಿಸುವಂತೆ ಕೋರಿ ಜಮಿಯತ್ ಉಲಮಾ-ಎ-ಹಿಂದ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ದೇಶದ ಎಲ್ಲಾ ನ್ಯಾಯಾಲಯಗಳಿಗೆ ಸೂಚಿಸಿದೆ.

ಆರಾಧನಾ ಸ್ಥಳಗಳ ಕಾಯ್ದೆಯು 1947ರ ನಂತರ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ಸ್ಪಷ್ಟವಾಗಿ ನಿಷೇಧಿಸಿದೆ ಎಂಬುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಡಿಸೆಂಬರ್ 12ರ ಮಧ್ಯಂತರ ಆದೇಶವು ದೇಶದಾದ್ಯಂತ ಧಾರ್ಮಿಕ ಕೇಂದ್ರಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಸುಮಾರು 18 ಪ್ರಕರಣಗಳ ಮೇಲೆ ಪರಿಣಾಮ ಬೀರಿದೆ. ಈ ಎಲ್ಲಾ ಪ್ರಕರಣಗಳು ಮಸೀದಿಗಳನ್ನು ದೇವಸ್ಥಾನಗಳ ಜಾಗಗಳಲ್ಲಿ ಕಟ್ಟಲಾಗಿದೆ. ಅವುಗಳನ್ನು ಹಿಂದೂಗಳಿಗೆ ಹಿಂದಿರುಗಿಸುವಂತೆ ಕೋರಿ ಹಿಂದುತ್ವ ಸಂಘಟನೆಗಳು ಮತ್ತು ವ್ಯಕ್ತಿಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿವೆ.

ಇದನ್ನೂ ಓದಿ : ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....