HomeಮುಖಪುಟEWS ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

EWS ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

- Advertisement -
- Advertisement -

ಆರ್ಥಿಕ ದುರ್ಬಲ ವರ್ಗಗಳಿಗೆ (EWS) 10% ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಪರವಾಗಿನ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠವು ಇಡಬ್ಲ್ಯುಎಸ್‌ ಮೀಸಲಾತಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮೇ 9ರಂದು ಆರಂಭಿಸಲಿದೆ.

ಆರ್ಥಿಕ ದುರ್ಬಲ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ 10 ಮೀಸಲಾತಿ ನೀಡಲು ಕೇಂದ್ರ ಸರ್ಕಾರವು ಸಂವಿಧಾನದ 103ನೇ ವಿಧಿಯ ತಿದ್ದುಪಡಿ ಮಾಡಿತ್ತು. ಈ ಇಡಬ್ಲ್ಯುಎಸ್‌ ಮೀಸಲಾತಿ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿತ್ತು.

ಕಳೆದ ವರ್ಷ ನವೆಂಬರ್ 7ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ಯು ಯು ಲಲಿತ್‌, ನ್ಯಾಯಮೂರ್ತಿಗಳಾದ ದಿನೇಶ್‌ ಮಹೇಶ್ವರಿ, ಎಸ್‌ ರವೀಂದ್ರ ಭಟ್, ಬೇಲಾ ಎಂ ತ್ರಿವೇದಿ ಮತ್ತು ಜೆ ಬಿ ಪರ್ದಿವಾಲಾ ಅವರ ಐವರು ಸದಸ್ಯರ ಪೀಠ ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ ಸಂಬಂಧ ವಿಚಾರಣೆ ನಡೆಸಿತ್ತು. ಸಂವಿಧಾನದ ಈ ತಿದ್ದುಪಡಿಯನ್ನು 3:2ರ ಬಹುಮತದ ಮೂಲಕ ಮಾನ್ಯ ಮಾಡಿತು. ಈ ತಿದ್ದುಪಡಿಯು ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು. ಮೂವರು ನ್ಯಾಯಮೂರ್ತಿಗಳು ಮೀಸಲಾತಿಯನ್ನು ಎತ್ತಿಹಿಡಿದರು. ಆದರೆ ನ್ಯಾ.ರವೀಂದ್ರ ಭಟ್ ಅವರು ಮೀಸಲಾತಿ ವಿರುದ್ಧ ತೀರ್ಪು ನೀಡಿದ್ದರು.

ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ಮರುಪರಿಶೀಲಿಸುವಂತೆ ಡಿಎಂಕೆ ಸೇರಿ ಇತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಮತ್ತು ತನ್ನ ತೀರ್ಪನ್ನು ಮರು ಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ಇದನ್ನೂ ಓದಿ: ಹತಾಶೆಯ ಬಿಜೆಪಿ ಮುಖಂಡರ ಬೆದರಿಕೆಯ ಭಾಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...