Homeಮುಖಪುಟನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

ನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

- Advertisement -
- Advertisement -

ಅಯೋಧ್ಯೆ ತೀರ್ಪಿನ ನಂತರ ನಾಳೆ ಮತ್ತೊಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್‌. ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ ತೀರ್ಪು ಹೊರ ಬೀಳಲಿದೆ. ಮಂಡಲ ಮಕರವಿಳಕ್ಕುಂ ಋತುಮಾನ ನ. 16 ರಂದು ಆರಂಭವಾಗಲಿದೆ. ಹೀಗಾಗಿ ತೀರ್ಪು ಹೆಚ್ಚಿನ ಮಹತ್ವ ಪಡೆದಿದೆ. ಅಲ್ಲದೇ ಎಡಪಂಥೀಯ ಸರ್ಕಾರವಿರುವ ರಾಜ್ಯದಲ್ಲಿ ಹಲವು ರಾಜಕೀಯ ಬೆಳವಣಿಗೆಗೂ ಇದು ಕಾರಣವಾಗಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.

ಇನ್ನು ೨೦೧೮ರ ಸೆಪ್ಟಂಬರ್‌ ೨೮ರಂದು ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಕೋರ್ಟ್‌ ತೀರ್ಪು ನೀಡುತ್ತಿದ್ದಂತೆ ಹಲವು ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ದೇವಾಲಯಕ್ಕೆ ತೆರಳುವ ಹಾದಿಯಲ್ಲಿ ಮಹಿಳೆಯರನ್ನು ತಡೆದು, ಬೇರೆ ಮಾರ್ಗದ ಮೂಲಕ ಸಂಚರಿಸುವಂತೆ ಒತ್ತಡ ಹೇರಲಾಗಿತ್ತು. ಮಂಡಲದ ಅವಧಿಯುದ್ದಕ್ಕೂ ಘರ್ಷಣೆ, ಉದ್ವಿಗ್ನತೆಗೆ ಶಬರಿಮಲೆ ಸಾಕ್ಷಿಯಾಗಿತ್ತು.

ಸುಪ್ರೀಂಕೋರ್ಟ್‌ ತೀರ್ಪು ವಿರೋಧಿಸಿ, ಹಲವು ಪ್ರತಿಭಟನೆಗಳು ನಡೆದಿದ್ದವು. ಅಲ್ಲದೇ ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ, ಹಿಂದೂಗಳ ಸಂಪ್ರದಾಯ, ಪರಂಪರೆ, ಪದ್ಧತಿಗೆ ಮಾಡಿದ ಅವಮಾನ ಎಂದು ಹಲವು ಹಿಂದೂ ಪರ ಸಂಘಟನೆಗಳು, ಶಬರಿಮಲೆ ದೇಗುಲ ಟ್ರಸ್ಟಿಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಮತ್ತು ರ್ಯಾಲಿ ನಡೆದಿತ್ತು. ಅದಾದ ನಂತರ ಸುಪ್ರೀಂ ತೀರ್ಪು ಮರು ಪರಿಶೀಲನೆ ನಡೆಸುವಂತೆ ಹಲವು ಅರ್ಜಿಗಳು ಸುಪ್ರೀಂ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌ ನಾಳೆ ( ನವೆಂಬರ್‌ ೧೪) ಮಹತ್ವದ ತೀರ್ಪು ನೀಡಲಿದೆ.

ಶಬರಿಮಲೆ ಸುಮಾರು ೮೦೦ ವರ್ಷಗಳಷ್ಟು ಹಳೆಯದ್ದಾಗಿದೆ. ಮಹಿಳೆಯರ ದೇಗುಲ ಪ್ರವೇಶ ತೀರ್ಪು ದಶಕಗಳಷ್ಟು ಹಳೆಯದ್ದು. ಈಗ ಅಯೋಧ್ಯೆ ತೀರ್ಪು ಒಪ್ಪಿಕೊಂಡಿರುವಂತೆ ಎಲ್ಲರೂ ಶಬರಿಮಲೆ ತೀರ್ಪನ್ನೂ ಸಹ ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಮತ್ತು ದೇವಸ್ವಂ ಕಡಕಂಪಲ್ಲಿ ಸುರೇಂದ್ರನ್‌ ಮನವಿ ಮಾಡಿದ್ದಾರೆ. ಎಲ್ಲರೂ ತೀರ್ಪನ್ನು ಶಾಂತವಾಗಿ ಒಪ್ಪಿಕೊಳ್ಳಬೇಕು. ಸುಪ್ರೀಂ ತೀರ್ಪಿನ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ದೇವಸ್ವಂ ಮಂಡಳಿಯ ಅಧ್ಯಕ್ಷ ಎ. ಪದ್ಮಕುಮಾರ್ ಹೇಳಿದ್ದಾರೆ.

ನಾಳೆ ತೀರ್ಪು ಹೊರ ಬೀಳಲಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್‌ ಹಾಗೂ ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...